ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್!..ಆದ್ರೆ ಈ ಸೇಲ್ ಇಂದೇ ಮುಕ್ತಾಯ!
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಆಯೋಜಿಸಿರುವ ಗೋಟ್ ಸೇಲ್ (Flipkart GOAT sale) ಆನ್‌ಲೈನ್ ಶಾಪಿಂಗ್ ಪ್ರಿಯರಿಗೆ ಸಖತ್ ಆಕರ್ಷಕ ಎನಿಸಿದೆ. ಇನ್ನು ಇದೇ ಜುಲೈ 20 ರಿಂದ ಪ್ರಾರಂಭವಾಗಿದ್ದ ಈ ಫೋನ್ ಇಂದು ಮುಕ್ತಾಯವಾಗಲಿದೆ. ಈ ಮಾರಾಟ ಮೇಳದಲ್ಲಿ ಆಯ್ದ ಫೋನ್‌ಗಳು ಭರ್ಜರಿ ರಿಯಾಯಿತಿ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದ್ದು, ಡಿಸ್ಕೌಂಟ್ ದರದಲ್ಲಿ ಹೊಸ ಫೋನ್ ಖರೀದಿಸುವ ಗ್ರಾಹಕರಿಗೆ ಖುಷಿ ನೀಡಿದೆ. ಕೊನೆಯ ದಿನವೂ ಕೆಲವು ಮೊಬೈಲ್ ಫೋನ್‌ಗಳು ಬೊಂಬಾಟ್ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರು ವಾವ್ ಎನ್ನುವಂತೆ ಮಾಡಿದೆ.
ಹೌದು, ಫ್ಲಿಪ್‌ಕಾರ್ಟ್ ಗೋಟ್ ಸೇಲ್ (Flipkart GOAT sale) ಸದ್ಯ ಲೈವ್ ಇದ್ದು, ಇಂದು ಮುಕ್ತಾಯವಾಗಲಿದೆ. ಈ ಮಾರಾಟದ ಕೊನೆಯ ದಿನದಲ್ಲಿ ಸ್ಯಾಮ್‌ಸಂಗ್ ಸಂಸ್ಥೆಯ ಗ್ಯಾಲಕ್ಸಿ S23 FE, ಪೊಕೊ M6 ಪ್ರೊ, ನಥಿಂಗ್ ಫೋನ್ (2) ಹಾಗೂ ಐಫೋನ್ 15 ಫೋನ್‌ಗಳು ಬ್ಯಾಂಕ್ ಆಫರ್ ಜೊತೆಗೆ ಹೆಚ್ಚು ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇವೆ. ಹಾಗಾದರೇ ಈ ಫೋನ್‌ಗಳ ಆಫರ್ ಬೆಲೆ ಎಷ್ಟು ಹಾಗೂ ಫೀಚರ್ಸ್ ಏನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಮೊಬೈಲ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಮೊಬೈಲ್ 6.4 ಇಂಚಿನ ಡೈನಾಮಿಕ್ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1080 x 2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ವೇಗವನ್ನು ಪಡೆದಿದ್ದು, ಇದು ಆಂಡ್ರಾಯ್ಡ್ 14 ಸಪೋರ್ಟ್ ಕಾರ್ಯ ನಿರ್ವಹಿಸಲಿದೆ.
ಇದರೊಂದಿಗೆ ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದ್ದು, ಹಾಗೆಯೇ ಈ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್-ಸಿ ಪೋರ್ಟ್ ಮೂಲಕ 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಹೊಂದಿದೆ. ಫ್ಲಿಪ್‌ಕಾರ್ಟ್ ಗೋಟ್ ಸೇಲ್‌ನಲ್ಲಿ ಈ ಫೋನಿನ ಆಫರ್ ದರವು 33,999ರೂ. ಗಳು ಆಗಿದೆ.
ಪೊಕೊ M6 ಪ್ರೊ 5G ಮೊಬೈಲ್
ಪೊಕೊ M6 ಪ್ರೊ 5G ಫೋನ್ 6.79 ಇಂಚಿನ ಫುಲ್ ಹೆಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದು 2460 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಅಲ್ಲದೇ ಇದು ಸ್ನಾಪ್‌ಡ್ರಾಗನ್ 4 ಜನ್ 2 ಪ್ರೊಸೆಸರ್ ಸೌಲಭ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಸಹ ಒಳಗೊಂಡಿದೆ.
ಇದರೊಂದಿಗೆ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಅಲ್ಲದೇ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, 18W ಫಾಸ್ಟ್ ಚಾರ್ಜಿಂಗ್‌ಗೆ ಸಪೋರ್ಟ್ ಕಾಣಬಹುದಾಗಿದೆ. ಫ್ಲಿಪ್‌ಕಾರ್ಟ್ ಗೋಟ್ ಸೇಲ್‌ನಲ್ಲಿ ಈ ಫೋನಿನ ಆಫರ್ ಬೆಲೆಯು 9,450ರೂ. ಗಳು ಆಗಿದೆ.
ನಥಿಂಗ್ ಫೋನ್ 2a ಮೊಬೈಲ್
ನಥಿಂಗ್ ಸಂಸ್ಥೆಯ ಈ ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದು ಅಮೋಲೆಡ್ ಡಿಸ್‌ಪ್ಲೇ ಆಗಿದ್ದು, 1,080x2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಪ್ರೊ SoC ಪ್ರೊಸೆಸರ್ ಪವರ್ ಅನ್ನು ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಅಲ್ಲದೇ 5,000mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಇದೆ. ಇನ್ನು ಫ್ಲಿಪ್‌ಕಾರ್ಟ್ ಗೋಟ್ ಸೇಲ್‌ನಲ್ಲಿ ಈ ಫೋನಿನ (128GB) ಆಫರ್ ಬೆಲೆಯು 23,999ರೂ. ಗಳು ಆಗಿದೆ.


Click it and Unblock the Notifications








