Home
ಸುದ್ದಿಜಾಲ

ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ 2023 ಡೇಟ್‌ ಫಿಕ್ಸ್‌! ಏನೆಲ್ಲಾ ಆಫರ್‌ ನಿರೀಕ್ಷೆ?

ಜನಪ್ರಿಯ ಇ-ಕಾಮರ್ಸ್‌ ಪ್ಲಾಟ್‌ಫಾರ್ಮ್‌ ಫ್ಲಿಪ್‌ಕಾರ್ಟ್‌ ಆನ್‌ಲೈನ್‌ ಶಾಪಿಂಗ್‌ ಪ್ರಿಯರಿಗೆ ಗುಡ್‌ನ್ಯೂಸ್‌ ನೀಡಿದೆ. ಹಬ್ಬ ಹರಿದಿನಗಳು ಮಾತ್ರವಲ್ಲದೇ ವಿಕೆಂಡ್‌ ಮಂತ್‌ಎಂಡ್‌ ಸೇಲ್‌ ನಡೆಸುವ ಫ್ಲಿಪ್‌ಕಾರ್ಟ್‌ ಇದೀಗ ಬಿಗ್ ಸೇವಿಂಗ್‌ ಡೇಸ್‌ 2023 ಸೇಲ್‌ ಮೂಲಕ ಮರಳಿದೆ. ಇನ್ನು ಈ ಸೇಲ್‌ ಇದೇ ಮಾರ್ಚ್‌ 11 ರಿಂದ ಮಾರ್ಚ್ 15 ರವರೆಗೆ ನಡೆಯಲಿದೆ.

ಹೌದು, ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್‌ ಡೇಸ್‌ 2023 ಸೇಲ್‌ ಡೇಟ್‌ ಘೋಷಣೆಯಾಗಿದೆ. ಯುಗಾದಿ ಹಬ್ಬದ ಸಂಭ್ರಮಕ್ಕೂ ಮುನ್ನ ಫ್ಲಿಪ್‌ಕಾರ್ಟ್‌ನಲ್ಲಿ ಡಿಸ್ಕೌಂಟ್‌ಗಳ ಸುರಿಮಳೆಯನ್ನು ನಿರೀಕ್ಷಿಸಬಹುದಾಗಿದೆ. ಇನ್ನು ಈ ಸೇಲ್‌ನಲ್ಲಿ ಎಂದಿನಂತೆ ಸ್ಮಾರ್ಟ್‌ಫೋನ್‌ಗಳು, ಎಲೆಕ್ಟ್ರಾನಿಕ್ಸ್‌, ಲ್ಯಾಪ್‌ಟಾಪ್‌, ಸ್ಮಾರ್ಟ್‌ಟಿವಿ ಸೇರಿದಂತೆ ಹಲವು ಡಿವೈಸ್‌ಗಳ ಮೇಲೆ ಡಿಸ್ಕೌಂಟ್‌ ಪಡೆದುಕೊಳ್ಳಬಹುದು. ಹಾಗಾದ್ರೆ ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್‌ ಡೇಸ್‌ 2023 ಸೇಲ್‌ನಲ್ಲಿ ಏನೆಲ್ಲಾ ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ 2023 ಡೇಟ್‌ ಫಿಕ್ಸ್‌! ಏನೆಲ್ಲಾ ಆಫರ್‌

ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ 2023 ಸೇಲ್‌ ಪ್ರಾರಂಭ ಯಾವಾಗ?

ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ 2023 ಸೇಲ್‌ ಇದೇ ಮಾರ್ಚ್ 11 ರಂದು ಪ್ರಾರಂಭವಾಗಲಿದ್ದು, ಮಾರ್ಚ್ 15 ರವರೆಗೆ ಮುಂದುವರಿಯಲಿದೆ. ಇನ್ನು ಈ ಸೇಲ್‌ ಫ್ಲಿಪ್‌ಕಾರ್ಟ್‌ ಪ್ಲಸ್‌ ಸದಸ್ಯರಿಗೆ ಮಾರ್ಚ್‌ 10 ರಿಂದಲೇ ಪ್ರವೇಶ ಸಿಗಲಿದೆ. ಸದ್ಯ ಫ್ಲಿಪ್‌ಕಾರ್ಟ್‌ ಶೇರ್‌ ಮಾಡಿರುವ ಟೀಸರ್‌ ಪ್ರಕಾರ ಸ್ಮಾರ್ಟ್‌ಫೋನ್‌ಗಳ ಮೇಲೆ ವಿಶೇಷ ಡಿಸ್ಕೌಂಟ್‌ ಅನ್ನು ಪಡೆದುಕೊಳ್ಳಬಹುದಾಗಿದೆ.

ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ 2023 ಸೇಲ್‌ ಏನೆಲ್ಲಾ ಡಿಸ್ಕೌಂಟ್‌?

ಫ್ಲಿಪ್‌ಕಾರ್ಟ್ ಬಿಗ್‌ ಸೇವಿಂಗ್‌ ಡೇಸ್‌ 2023 ಸೇಲ್‌ನಲ್ಲಿ ಗೂಗಲ್ ಪಿಕ್ಸೆಲ್ 6ಎ ಸ್ಮಾರ್ಟ್‌ಫೋನ್‌ ಅನ್ನು ನೀವು ಕೇವಲ 26,999ರೂ.ಗಳಿಗೆ (ಮೂಲ ಬೆಲೆ 28,999ರೂ.) ಖರೀದಿಸಬಹುದಾಗಿದೆ. ಇದರಲ್ಲಿ ICICI ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳು ಮತ್ತು EMI ವಹಿವಾಟುಗಳ ಮೇಲೆ 10% ಡಿಸ್ಕೌಂಟ್‌ ಅನ್ನು ಒಳಗೊಂಡಿದೆ.

ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ 2023 ಡೇಟ್‌ ಫಿಕ್ಸ್‌! ಏನೆಲ್ಲಾ ಆಫರ್‌

ಇನ್ನು ಕಳೆದ ವರ್ಷ ಮಾರುಕಟ್ಟೆಗೆ ಎಂಟ್ರಿ ನೀಡಿ ಹೊಸ ಅಲೆಯನ್ನೇ ಎಬ್ಬಿಸಿದ್ದ ನಥಿಂಗ್ ಫೋನ್ 1 ಕೂಡ ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್‌ ಡೇಸ್‌ ಸೇಲ್‌ನಲ್ಲಿ ಡಿಸ್ಕೌಂಟ್‌ನಲ್ಲಿ ದೊರೆಯಲಿದೆ. ಈ ಸ್ಮಾರ್ಟ್‌ಫೋನ್‌ ಅನ್ನು ನೀವು 25,999ರೂ. ಬೆಲೆಯಲ್ಲಿ ಖರೀದಿಸಬಹುದು ಎಂದು ಹೇಳಲಾಗಿದೆ. ಇನ್ನು ನಥಿಂಗ್ ಫೋನ್ (1) ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಇದರೊಂದಿಗೆ ಆಪಲ್‌ ಇತ್ತೀಚಿಗೆ ಪರಿಚಯಿಸಿರುವ ಐಫೋನ್ 14 ಮತ್ತು ಐಫೋನ್ 14 ಪ್ಲಸ್ ಕೂಡ ವಿಶೇಷ ಸಹ ರಿಯಾಯಿತಿ ದರದಲ್ಲಿ ಲಭ್ಯವಾಗುವ ಸಾಧ್ಯತೆಯಿದೆ. ಆದರೆ ಇದರ ಆಫರ್‌ ಬೆಲೆಗಳ ಬಗ್ಗೆ ಫ್ಲಿಪ್‌ಕಾರ್ಟ್‌ ಇನ್ನು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ 2023 ಡೇಟ್‌ ಫಿಕ್ಸ್‌! ಏನೆಲ್ಲಾ ಆಫರ್‌

ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್‌ ಡೇಸ್‌ 2023 ಸೇಲ್‌ನಲ್ಲಿ ಗೂಗಲ್‌ ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌ 46,999ರೂ. ಬೆಲೆಗೆ(ಸಾಮಾನ್ಯ ಬೆಲೆ 59,999ರೂ.) ಖರೀದಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಟೆನ್ಸರ್ G2 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಇನ್ನು ಸ್ಯಾಮ್‌ಸಗ್‌ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್‌ ಡೇಸ್‌ ಸೇಲ್‌ ಸಮಯದಲ್ಲಿ 12,990ರೂ. ಡಿಸ್ಕೌಂಟ್‌ ಪಡೆದುಕೊಂಡಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ 37,450ರೂ.ಬೆಲೆಯಲ್ಲಿ ಸೇಲ್‌ ಆಗ್ತಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಒನ್‌ ಯುಐ 4.0 ಆಧಾರಿತ ಆಂಡ್ರಾಯ್ಡ್‌ 12 ಔಟ್ ಆಫ್ ದಿ ಬಾಕ್ಸ್‌ನಲ್ಲಿ ಕಾರ್ಯ ನಿರ್ವಹಿಸಲಿದೆ.

Best Mobiles in India

English summary
Flipkart Big Saving Days 2023 sale dates are out, and customers can purchase smartphones and electronics at a reduced cost during the upcoming sale.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+