Home
ಸುದ್ದಿಜಾಲ

ಫ್ಲಿಪ್‌ಕಾರ್ಟ್‌ನಲ್ಲಿ ಮೊಟೊರೊಲಾ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್‌ ಡಿಸ್ಕೌಂಟ್‌!

ಜನಪ್ರಿಯ ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಆನ್‌ಲೈನ್ ಶಾಪಿಂಗ್‌ ಪ್ರಿಯರಿಗಾಗಿ ವಿಶೇಷ ಸೇಲ್‌ಗಳನ್ನು ಆಯೋಜಿಸುತ್ತಲೇ ಬಂದಿದೆ. ವಿಕೆಂಡ್‌,ಮಂತ್‌ಎಂಡ್‌,ಇಯರ್‌ ಎಂಡ್‌ ಸೇಲ್‌ಗಳನ್ನು ನಡೆಸುತ್ತಾ ಬಂದಿದೆ. ಅಲ್ಲದೆ ಹಬ್ಬ ಹರಿದಿಗಳಲ್ಲಿ ವಿಶೇಷ ಡಿಸ್ಕೌಂಟ್‌ ಮೇಳಗಳನ್ನು ನಡೆಸುವ ಮೂಲಕ ಆನ್‌ಲೈನ್‌ ಶಾಪಿಂಗ್‌ ಪ್ರಿಯರಿಗೆ ಬಿಗ್‌ ಡಿಸ್ಕೌಂಟ್‌ ನೀಡುತ್ತಿದೆ. ಸದ್ಯ ಇದೀಗ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಮೊಟೊರೊಲಾ ಸ್ಮಾರ್ಟ್‌ಫೋನ್‌ಗಳ ಮೇಲೆ ಬಿಗ್‌ ಡಿಸ್ಕೌಂಟ್‌ ನೀಡುತ್ತಿದೆ.

ಫ್ಲಿಪ್‌ಕಾರ್ಟ್‌

ಹೌದು, ಫ್ಲಿಪ್‌ಕಾರ್ಟ್‌ನಲ್ಲಿ ಮೊಟೊರೊಲಾ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್‌ ಡಿಸ್ಕೌಂಟ್‌ ದೊರೆಯುತ್ತಿದೆ. ಸ್ಮಾರ್ಟ್‌ಫೋನ್‌ಗಳ ಮೇಲೆ 22% ತನಕ ಡಿಸ್ಕೌಂಟ್‌ ನೀಡುತ್ತಿದ್ದು, ಸ್ಮಾರ್ಟ್‌ಫೋನ್‌ ಖರೀದಿಸಲು ಬೆಸ್ಟ್‌ ಟೈಂ ಎನಿಸಿದೆ. ಅದರಲ್ಲೂ ಮೊಟೊರೊಲಾ ಕಂಪೆನಿಯ ಮೋಟೋ G60, ಮೊಟೊರೊಲಾ ಎಡ್ಜ್ 20 ಫ್ಯೂಷನ್, ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್‌ಗಳು ಬಿಗ್‌ ಆಫರ್‌ ಪಡೆದುಕೊಂಡಿವೆ. ಹಾಗಾದ್ರೆ ಫ್ಲಿಪ್‌ಕಾರ್ಟ್‌ನಲ್ಲಿ ನೀವು ರಿಯಾಯಿತಿ ದರದಲ್ಲಿ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಮೊಟೊರೊಲಾ ಎಡ್ಜ್ 20 ಫ್ಯೂಷನ್

ಮೊಟೊರೊಲಾ ಎಡ್ಜ್ 20 ಫ್ಯೂಷನ್

ಮೊಟೊರೊಲಾ ಎಡ್ಜ್ 20 ಫ್ಯೂಷನ್ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ 16% ಡಿಸ್ಕೌಂಟ್‌ ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಇದೀಗ 20,999ರೂ.ಗಳಿಗೆ ಲಭ್ಯವಿದೆ. ಅಲ್ಲದೆ ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಕೆದಾರರು ಶೇಕಡಾ 5 ರಷ್ಟು ಅನಿಯಮಿತ ಕ್ಯಾಶ್‌ಬ್ಯಾಕ್ ಪಡೆಯಬಹುದಾಗಿದೆ. ಜೊತೆಗೆ ನಿಮ್ಮ ಹಳೆಯ ಫೋನ್ ಅನ್ನು ಎಕ್ಸ್‌ಚೇಂಜ್ ಆಫರ್‌ನ ಅಡಿಯಲ್ಲಿ ವಿನಿಮಯ ಮಾಡಿಕೊಂಡರೆ 15,450ರೂ. ವರೆಗೆ ರಿಯಾಯಿತಿ ಪಡೆಯಬಹುದು. ಇನ್ನು ಈ ಸ್ಮಾರ್ಟ್‌ಫೋನ್‌ 6.7-ಇಂಚಿನ ಫುಲ್‌ ಹೆಚ್‌ಡಿ+ ಮ್ಯಾಕ್ಸ್ ವಿಷನ್ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 800U 5G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಇದೆ, ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಈ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಟರ್ಬೊಪವರ್ 30 ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5, ಅನ್ನು ಬೆಂಬಲಿಸಲಿದೆ.

ಮೊಟೊರೊಲಾ ಎಡ್ಜ್ 20 ಪ್ರೊ

ಮೊಟೊರೊಲಾ ಎಡ್ಜ್ 20 ಪ್ರೊ

ಮೊಟೊರೊಲಾ ಎಡ್ಜ್ 20 ಪ್ರೊ 8GB RAM ಮತ್ತು 128GB ಸ್ಟೋರೇಜ್ ಆಯ್ಕೆಗೆ ಫ್ಲಿಪ್‌ಕಾರ್ಟ್‌ನಲ್ಲಿ 23% ರಿಯಾಯಿತಿ ಪಡೆದಿದ್ದು, 34,999ರೂ.ಗಳಿಗೆ ಲಭ್ಯವಾಗಲಿದೆ. ಅಲ್ಲದೆ ನಿಮ್ಮ ಹಳೆಯ ಫೋನ್ ಅನ್ನು ಎಕ್ಸ್‌ಚೇಂಜ್ ಆಫರ್‌ನ ಅಡಿಯಲ್ಲಿ ವಿನಿಮಯ ಮಾಡಿಕೊಂಡರೆ 15,450ರೂ. ವರೆಗೆ ರಿಯಾಯಿತಿ ದೊರೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.7-ಇಂಚಿನ ಫುಲ್-HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಹೊಂದಿದೆ. ಆಂಡ್ರಾಯ್ಡ್ 11 ನಲ್ಲಿ ಮೈ UX ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ f/1.9 ಲೆನ್ಸ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 4,500mAh ಬ್ಯಾಟರಿಯನ್ನು ಒದಗಿಸಿದ್ದು, 30W ಟರ್ಬೊಪವರ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಮೊಟೊರೊಲಾ ಎಡ್ಜ್ 20

ಮೊಟೊರೊಲಾ ಎಡ್ಜ್ 20

ಮೊಟೊರೊಲಾ ಎಡ್ಜ್ 20 8GB RAM ಮತ್ತು 128GB ಸ್ಟೋರೇಜ್ ಆಯ್ಕೆಯ ಫೋನ್ 20% ರಿಯಾಯಿತಿ ಪಡದಿದ್ದು, 27,999ರೂ. ಬೆಲೆಯಲ್ಲಿ ಖರೀದಿಸಬಹುದು. ಈ ಸ್ಮಾರ್ಟ್‌ಫೋನ್‌ 6.7-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3-ಪ್ರೊಟೆಕ್ಷನ್‌ ಹೊಂದಿದ್ದು, 144Hz ರಿಫ್ರೆಶ್ ದರ ಮತ್ತು 576Hz ಟಚ್ ಲೇಟೆನ್ಸಿ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಹೊಂದಿದೆ. ಇನ್ನು ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಜೊತೆಗೆ 4,000mAh ಬ್ಯಾಟರಿ ಹೊಂದಿದ್ದು, 30W ಟರ್ಬೊಪವರ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2,ಬೆಂಬಲಿಸಲಿದೆ.

ಮೋಟೋ G60

ಮೋಟೋ G60

ಫ್ಲಿಪ್‌ಕಾರ್ಟ್‌ನಲ್ಲಿ ಮೋಟೋ G60 ಸ್ಮಾರ್ಟ್‌ಫೋನ್‌ 22% ಡಿಸ್ಕೌಂಟ್‌ ಪಡೆದುಕೊಂಡಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ 6GB RAM ಮತ್ತು 128 GB ಸ್ಟೋರೇಜ್‌ ಆಯ್ಕೆಯು ರಿಯಾಯಿತಿ ದರದಲ್ಲಿ ಕೇವಲ 16,999ರೂ.ಗಳಿಗೆ ಲಭ್ಯವಾಗಲಿದೆ. ಇದಲ್ಲದೆ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಲ್ಲಿ 5% ಅನಿಯಮಿತ ಕ್ಯಾಶ್‌ಬ್ಯಾಕ್ ಕೂಡ ಪಡೆಯಬಹುದು. ಇನ್ನು ಈ ಸ್ಮಾರ್ಟ್‌ಫೋನ್‌ 6.8 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732 G SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಮೋಟೋ G60 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಮೋಟೋ G60 ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಟರ್ಬೊ ಪವರ್ 20 ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

Best Mobiles in India

English summary
Flipkart is offering great deals and best discounts on Motorola smartphones.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+