Home
ಸುದ್ದಿಜಾಲ

ಮೊಬೈಲ್‌ ಖರೀದಿಸುವುದಕ್ಕೆ ಇದುವೇ ಬೆಸ್ಟ್‌ ಟೈಂ! ಫ್ಲಿಪ್‌ಕಾರ್ಟ್‌ ನೀಡ್ತಾ ಇದೆ ಭಾರಿ ಆಫರ್‌!

ಜನಪ್ರಿಯ ಇ-ಕಾಮರ್ಸ್‌ ತಾಣವಾದ ಫ್ಲಿಪ್‌ಕಾರ್ಟ್‌ ಮತ್ತೊಂದು ಸೇಲ್‌ನೊಂದಿಗೆ ಮರಳಿದೆ. ಈ ಭಾರಿ ಫ್ಲಿಪ್‌ಕಾರ್ಟ್‌ ಬೊನಾಂಜಾ ಸೇಲ್‌ ಲೈವ್‌ ಆಗಿದ್ದು, ಡಿಸೆಂಬರ್‌ 6 ರವರೆಗೆ ಮುಂದುವರಿಯಲಿದೆ. ಇನ್ನು ಈ ಸೇಲ್‌ನಲ್ಲಿ ಜನಪ್ರಿಯ ಸ್ಮಾರ್ಟ್‌ಫೋನ್‌ಗಳಾದ ನಥಿಂಗ್ ಫೋನ್ (2), ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 ಸೇರಿದಂತೆ ಹಲವು ಫೋನ್‌ಗಳ ಮೇಲೆ ಡಿಸ್ಕೌಂಟ್‌ ನೀಡಲಾಗ್ತಿದೆ.

ಹೌದು, ಫ್ಲಿಪ್‌ಕಾರ್ಟ್‌ ಮೊಬೈಲ್‌ ಬೊನಾನ್ಜಾ ಸೇಲ್‌ ಲೈವ್‌ ಆಗಿದೆ. ಮಾರುಕಟ್ಟೆಯಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ಸ್ಮಾರ್ಟ್‌ಫೋನ್‌ಗಳು ಈ ಸೇಲ್‌ನಲ್ಲಿ ವಿಶೇಷ ರಿಯಾಯಿತಿ ಪಡೆದುಕೊಂಡಿವೆ. ಇದರಿಂದ ಫ್ಲಿಪ್‌ಕಾರ್ಟ್‌ ಬಿಗ್‌ ದೀಪಾವಳಿ ಸೇಲ್‌ ಮಿಸ್‌ ಮಾಡಿಕೊಂಡವರು ಇದೀಗ ಮತ್ತೊಮ್ಮೆ ರಿಯಾಯಿತಿ ದರದಲ್ಲಿ ಖರೀದಿಸುವುದಕ್ಕೆ ಅವಕಾಶ ಸಿಗಲಿದೆ. ಹಾಗಾದ್ರೆ ಫ್ಲಿಪ್‌ಕಾರ್ಟ್‌ ಮೊಬೈಲ್‌ ಬೊನಾನ್ಜಾ ಸೇಲ್‌ನಲ್ಲಿ ನೀವು ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮೊಬೈಲ್‌ ಖರೀದಿಸುವುದಕ್ಕೆ ಇದುವೇ ಬೆಸ್ಟ್‌ ಟೈಂ! ಫ್ಲಿಪ್‌ಕಾರ್ಟ್‌ ನಲ್ಲಿ ಆಫರ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 ಮೇಲೆ ಬಿಗ್‌ ಆಫರ್‌
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ ಮೊಬೈಲ್‌ ಬೊನಾನ್ಜಾ ಸೇಲ್‌ನಲ್ಲಿ ಭಾರಿ ರಿಯಾಯಿತಿ ಪಡೆದಿದೆ. ಇದನ್ನು ಫ್ಲಿಪ್‌ಕಾರ್ಟ್‌ನಲ್ಲಿ 18,990ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಆದರೆ 25% ಡಿಸ್ಕೌಂಟ್‌ ಪಡೆದುಕೊಂಡಿರುವುದರಿಂದ 14,162ರೂ ಬೆಲೆಗೆ ಖರೀದಿಸಬಹುದಾಗಿದೆ. ಇನ್ನು ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಎಕ್ಸಿನೋಸ್‌ 1330 ಆಕ್ಟಾ ಕೋರ್ SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ.

ಪೊಕೊ X5 ಪ್ರೊ ಮೇಲೆ ಹೆಚ್ಚಿನ ಡಿಸ್ಕೌಂಟ್‌
ಫ್ಲಿಪ್‌ಕಾರ್ಟ್ ಮೊಬೈಲ್ ಬೊನಾನ್ಜಾ ಸೇಲ್‌ನಲ್ಲಿ ಪೊಕೊ X5 ಪ್ರೊ ಫೋನ್‌ ಭಾರಿ ಬೆಲೆ ಇಳಿಕೆಯನ್ನು ಪಡೆದುಕೊಂಡಿದೆ. ಫ್ಲಿಪ್‌ಕಾರ್ಟ್‌ನಲ್ಲಿ 25,999ರೂ ಬೆಲೆಗೆ ಪಟ್ಟಿ ಮಾಡಲಾಗಿರುವ ಈ ಫೋನ್‌ 26% ಡಿಸ್ಕೌಂಟ್‌ ಪಡೆದುಕೊಂಡಿದೆ. ಇದರಿಂದ ಈ ಫೋನ್‌ ಅನ್ನು ನೀವು ಕೇವಲ 18,999ರೂ ಬೆಲೆಗೆ ಖರೀದಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ಹೆಚ್‌ಡಿ + ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 695 ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಮೊಬೈಲ್‌ ಖರೀದಿಸುವುದಕ್ಕೆ ಇದುವೇ ಬೆಸ್ಟ್‌ ಟೈಂ! ಫ್ಲಿಪ್‌ಕಾರ್ಟ್‌ ನಲ್ಲಿ ಆಫರ್‌!

ನಥಿಂಗ್ ಫೋನ್ (2)
ನಥಿಂಗ್ ಫೋನ್ (2) ಫ್ಲಿಪ್‌ಕಾರ್ಟ್‌ನಲ್ಲಿ ಇದೀಗ 39,999ರೂ ಗಳಿಗೆ ಲಭ್ಯವಾಗುತ್ತಿದೆ. 44,999ರೂ ಬೆಲೆಯಲ್ಲಿ ಬಿಡುಗಡೆ ಆಗಿದ್ದ ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ 5,000ರೂ ಗಳ ಫ್ಲಾಟ್ ರಿಯಾಯಿತಿಯನ್ನು ಪಡೆದುಕೊಂಡಿದೆ. ಇದಲ್ಲದೆ ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಲ್ಲಿ ಖರೀದಿಸಿದರೆ ಹೆಚ್ಚುವರಿ 10% ರಿಯಾಯಿತಿಯೂ ಸಹ ಸಿಗಲಿದೆ. ಇದರಿಂದ ಈ ಫೋನ್‌ನ ಬೆಲೆ ಇನ್ನಷ್ಟು ಕಡಿಮೆ ಆಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ 4nm ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಜೊತೆಗೆ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ.

ಮೊಬೈಲ್‌ ಖರೀದಿಸುವುದಕ್ಕೆ ಇದುವೇ ಬೆಸ್ಟ್‌ ಟೈಂ! ಫ್ಲಿಪ್‌ಕಾರ್ಟ್‌ ನಲ್ಲಿ ಆಫರ್‌!

ಮೊಟೊರೊಲಾ ಎಡ್ಜ್ 40
ಮೊಟೊರೊಲಾ ಎಡ್ಜ್ 40 ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ 22% ಡಿಸ್ಕೌಂಟ್‌ ಪಡೆದುಕೊಂಡಿದೆ. ಇದರಿಂದ 34,999ರೂ ಬೆಲೆಗೆ ಪಟ್ಟಿ ಮಾಡಲಾಗಿರುವ ಫೋನ್‌ ಅನ್ನು 26,999ರೂ ಗಳಿಗೆ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್ ಹೆಚ್‌ಡಿ ಸಾಮರ್ಥ್ಯದ ಕರ್ವ್ಡ್ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8020 5G SoC ಪ್ರೊಸೆಸರ್‌ನಿಂದ ಕೆಲಸ ನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಅನ್ನು ರನ್ ಮಾಡುತ್ತದೆ. ಈ ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ರಚನೆ ಪಡೆದಿದ್ದು, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಸಪೋರ್ಟ್‌ ಜೊತೆಗೆ 50 ಮೆಗಾ ಪಿಕ್ಸೆಲ್ ಪ್ರಮುಖ ಸೆನ್ಸರ್ ಮತ್ತು 13 ಮೆಗಾ ಪಿಕ್ಸೆಲ್ ಮ್ಯಾಕ್ರೋ ಅಲ್ಟ್ರಾವೈಡ್ ಲೆನ್ಸ್‌ ಅನ್ನು ಪಡೆದುಕೊಂಡಿದೆ. ಜೊತೆಗೆ ಎರಡು ಎಲ್ಇಡಿ ಫ್ಲ್ಯಾಶ್‌ ಲೈಟ್‌ ಆಯ್ಕೆಯನ್ನೂ ಸಹ ನೀಡಲಾಗಿದೆ. ಇದರೊಂದಿಗೆ 32 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ಇದೆ.

Best Mobiles in India

English summary
Flipkart Mobile Bonanza sale: Discount offers on Poco, Samsung phones and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+