Home
ಸುದ್ದಿಜಾಲ

ಫ್ಲಿಪ್‌ಕಾರ್ಟ್‌ನಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸಲು ಇದುವೇ ಬೆಸ್ಟ್‌ ಟೈಂ!

ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ತನ್ನ ಪ್ಲಾಟ್‌ಫಾಮ್‌ನಲ್ಲಿ ಒಂದಿಲ್ಲೊಂದು ಸೇಲ್‌ಗಳನ್ನು ನಡೆಸುತ್ತಲೇ ಬಂದಿದೆ. ತನ್ನ ವಿಶೇಷ ಸೇಲ್‌ಗಳ ಮೂಲಕ ಗ್ರಾಹಕರಿಗೆ ಡಿಸ್ಕೌಂಟ್‌ನಲ್ಲಿ ಹಲವು ಗ್ಯಾಜೆಟ್ಸ್‌ಗಳನ್ನು ಖರೀದಿಸುವುದಕ್ಕೆ ಅವಕಾಶ ನೀಡುತ್ತಿದೆ. ಇದೀಗ ಫ್ಲಿಪ್‌ಕಾರ್ಟ್‌ ಮೊಬೈಲ್‌ ಫೋನ್ಸ್‌ ಬೊನಾಂಜಾ ಸೇಲ್‌ ಆಯೋಜಿಸಿದೆ. ಈ ಸೇಲ್‌ ಈಗಾಗಲೇ ಲೈವ್‌ ಆಗಿದ್ದು, ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಮೇಲೆ ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ.

ಫ್ಲಿಪ್‌ಕಾರ್ಟ್‌

ಹೌದು, ಫ್ಲಿಪ್‌ಕಾರ್ಟ್‌ ಮೊಬೈಲ್‌ ಫೋನ್ಸ್‌ ಬೊನಾಂಜಾ ಸೇಲ್‌ ನಡೆಸುತ್ತಿದೆ. ಈ ಸೇಲ್‌ ಮೂಲಕ ಸ್ಮಾರ್ಟ್‌ಫೋನ್‌ಗಳ ಮೇಲೆ ವಿಶೇಷ ಆಫರ್‌ ಅನ್ನು ನೀಡುತ್ತಿದೆ. ಇದರಲ್ಲಿ ವಿವಿಧ ಬೆಲೆ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳು ಕೂಡ ಸೇರಿವೆ. ಆದರಿಂದ ಸ್ಮಾರ್ಟ್‌ಫೋನ್‌ಗಳನ್ನು ಡಿಸ್ಕೌಂಟ್‌ನಲ್ಲಿ ಖರೀದಿಸಲು ಬಯಸುವವರಿಗೆ ಇದು ಸೂಕ್ತ ಸಮಯವಾಗಿದೆ. ಹಾಗಾದ್ರೆ ಫ್ಲಿಪ್‌ಕಾರ್ಟ್‌ ಮೊಬೈಲ್‌ ಫೋನ್ಸ್‌ ಬೊನಾಂಜಾ ಸೇಲ್‌ನಲ್ಲಿ ಡಿಸ್ಕೌಂಟ್‌ ಪಡೆದುಕೊಂಡಿರುವ ಸ್ಮಾರ್ಟ್‌ಫೋನ್‌ಗಳ ವಿವರವನ್ನು ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಮುಂದೆ ಓದಿರಿ.

ಶಿಯೋಮಿ 11i ಹೈಪರ್‌ ಚಾರ್ಜ್ 5G

ಶಿಯೋಮಿ 11i ಹೈಪರ್‌ ಚಾರ್ಜ್ 5G

ಶಿಯೋಮಿ 11i ಹೈಪರ್‌ ಚಾರ್ಜ್ 5G ಸ್ಮಾರ್ಟ್‌ಫೋನ್‌ ಇದೀಗ ಫ್ಲಿಪ್‌ಕಾರ್ಟ್‌ನಲ್ಲಿ ರಿಯಾಯಿತಿ ದರದಲ್ಲಿ ಕೇವಲ 25,999ರೂ.ಗಳಿಗೆ ಲಭ್ಯವಾಗ್ತಿದೆ. ಇದರಲ್ಲಿ ಆಯ್ದ ಬ್ಯಾಂಕ್ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಆಫರ್‌ಗಳ ಮೂಲಕ 2,000ರೂ. ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಇನ್ನು ಶಿಯೋಮಿ 11i ಹೈಪರ್‌ಚಾರ್ಜ್ 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 920 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 4,500 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ವಿವೋ V25 5G

ವಿವೋ V25 5G

ವಿವೋ V25 5G ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ ಇದೀಗ 27,999ರೂ. ಬೆಲೆಗೆ ಲಭ್ಯವಿದೆ. ಇದು ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್‌ನಲ್ಲಿ ಖರೀದಿಸಿದರೆ 5% ಕ್ಯಾಶ್‌ಬ್ಯಾಕ್ ಪಡೆದಿದೆ. ಇದಲ್ಲದೆ ಆಯ್ದ ಬ್ಯಾಂಕ್ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳ ಮೇಲೆ 2,000ರೂ. ರಿಯಾಯಿತಿ ಕೂಡ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ 6.44 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ.

ಒಪ್ಪೋ F21 ಪ್ರೊ 5G

ಒಪ್ಪೋ F21 ಪ್ರೊ 5G

ಒಪ್ಪೋ F21 ಪ್ರೊ 5G ಸ್ಮಾರ್ಟ್‌ಫೋನ್‌ ಫ್ಲಿಪ್ಕಾರ್ಟ್‌ನಲ್ಲಿ 18% ರಿಯಾಯಿತಿಯನ್ನು ಪಡೆದುಕೊಂಡಿದೆ. ಆದರಿಂದ ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ 25,999ರೂ. ಗಳಿಗೆ ಮಾರಾಟವಾಗ್ತಿದೆ. ಒಪ್ಪೋ F21 ಪ್ರೊ 5G ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 695 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ನಲ್ಲಿ ಕಲರ್‌OS 12.1 ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ.

ರಿಯಲ್‌ಮಿ GT ನಿಯೋ 3T

ರಿಯಲ್‌ಮಿ GT ನಿಯೋ 3T

ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ ಇದೀಗ ಫ್ಲಿಪ್‌ಕಾರ್ಟ್‌ನಲ್ಲಿ 24,999ರೂ. ಬೆಲೆಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ 6.62-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ E4 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 870 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 12 ಅನ್ನು ರಿಯಲ್‌ಮಿ UI 3.0 ಜೊತೆಗೆ ರನ್ ಮಾಡುತ್ತದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಮೊಟೊರೊಲಾ ಎಡ್ಜ್ 30

ಮೊಟೊರೊಲಾ ಎಡ್ಜ್ 30

ಮೊಟೊರೊಲಾ ಎಡ್ಜ್ 30 ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ 26,999ರೂ. ಬೆಲೆಯಲ್ಲಿ ದೊರೆಯಲಿದೆ. ,020mAh ಬ್ಯಾಟರಿಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 6.7-ಇಂಚಿನ FHD+ ಪೋಲ್ಡ್ 10-ಬಿಟ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ ಕ್ವಾಡ್-ಪಿಕ್ಸೆಲ್ ತಂತ್ರಜ್ಞಾನದೊಂದಿಗೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

Best Mobiles in India

English summary
Flipkart Mobile Phones Bonanza Sale : Deals on smartphones
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+