Home
ಸುದ್ದಿಜಾಲ

ಫ್ಲಿಪ್‌ಕಾರ್ಟ್‌ ಮೊಬೈಲ್ಸ್ ಬೊನಾನ್ಜಾ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್‌ ಡಿಸ್ಕೌಂಟ್‌!

ಆನ್‌ಲೈನ್‌ ಶಾಪಿಂಗ್‌ ಪ್ರಿಯರ ಪಾಲಿಗೆ ಫ್ಲಿಪ್‌ಕಾರ್ಟ್‌ ನೆಚ್ಚಿನ ತಾಣ ಎನಿಸಿಕೊಂಡಿದೆ. ತನ್ನ ಗ್ರಾಹಕರಿಗಾಗಿ ವಿಶೇಷ ಸೇಲ್‌ಗಳನ್ನು ಆಯೋಜಿಸುವ ಮೂಲಕ ಫ್ಲಿಪ್‌ಕಾರ್ಟ್‌ ಗಮನ ಸೆಳೆದಿದೆ. ವಿಕೆಂಡ್‌, ಮಂತ್‌ಎಂಡ್‌, ಬಿಗ್‌ಬಿಲಿಯನ್‌ ಡೇಸ್‌ ಸೇಲ್‌ನಂತಹ ಅನೇಕ ಆಕ‍ರ್ಷಕ ಸೇಲ್‌ಗಳನ್ನು ಆಯೋಜಿಸುತ್ತಲೇ ಬಂದಿದೆ. ಸದ್ಯ ಇದೀಗ ಫ್ಲಿಪ್‌ಕಾರ್ಟ್‌ ಮೊಬೈಲ್ಸ್‌ ಬೊನಾನ್ಜಾ ಸೇಲ್‌ ಮೂಲಕ ವಿಶೇಷ ರಿಯಾಯಿತಿಯನ್ನು ಹೊತ್ತು ತಂದಿದೆ.

ಫ್ಲಿಪ್‌ಕಾರ್ಟ್‌

ಹೌದು, ಫ್ಲಿಪ್‌ಕಾರ್ಟ್‌ ಮತ್ತೊಂದು ವಿಶೇಷ ರಿಯಾಯಿತಿ ಸೇಲ್‌ ಹೊತ್ತು ತಂದಿದೆ. ಇದೀಗ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಮೊಬೈಲ್ಸ್ ಬೊನಾನ್ಜಾ ಸೇಲ್‌ ಅನ್ನು ಹೋಸ್ಟ್ ಮಾಡುತ್ತಿದೆ. ಇನ್ನು ಈ ಸೇಲ್‌ನಲ್ಲಿ ಆಪಲ್‌, ರಿಯಲ್‌ಮಿ, ಮೊಟೊರೊಲಾ ಮತ್ತು ವಿವೋ ಸಂಸ್ಥೆಯ ಜನಪ್ರಿಯ ಫೋನ್‌ಗಳ ಮೇಲೆ ರಿಯಾಯಿತಿಗಳನ್ನು ನೀಡುತ್ತಿದೆ. ಹಾಗಾದ್ರೆ ಫ್ಲಿಪ್‌ಕಾರ್ಟ್ ಮೊಬೈಲ್‌ ಬೊನಾನ್ಜಾ ಸೇಲ್‌ನಲ್ಲಿ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳಿಗೆ ಡಿಸ್ಕೌಂಟ್‌ ದೊರೆಯುತ್ತಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಮೋಟೋ G40 ಫ್ಯೂಷನ್

ಮೋಟೋ G40 ಫ್ಯೂಷನ್

ಫ್ಲಿಪ್‌ಕಾರ್ಟ್‌ನ ಮೊಬೈಲ್ಸ್‌ ಬೊನಾಂಜಾ ಸೇಲ್‌ನಲ್ಲಿ ಮೋಟೋ ಜಿ 40 ಫ್ಯೂಷನ್ 13,499ರೂ.ಬೆಲೆಗೆ ದೊರೆಯಲಿದೆ. ಈ ಸ್ಮಾರ್ಟ್‌ಫೋನ್‌ ಮೇಲೆ ಯಾವುದೇ ಬ್ಯಾಂಕ್ ಆಫರ್‌ ದೊರೆಯುತ್ತಿಲ್ಲ. ಆದರೆ ನಿಮ್ಮ ಸ್ಮಾರ್ಟ್‌ಫೋನ್‌ ಎಕ್ಸ್‌ಚೇಂಜ್‌ ಆಫರ್‌ ಮೂಲಕ 12,800ರೂ. ವರೆಗೆ ರಿಯಾಯಿತಿಯನ್ನು ಪಡೆಯಬಹುದದಾಗಿದೆ. ಇನ್ನು ಮೋಟೋ G40 ಫ್ಯೂಷನ್ ಸ್ಮಾರ್ಟ್‌ಫೋನ್‌ 6.80 ಇಂಚಿನ ಮ್ಯಾಕ್ಸ್ ವಿಷನ್ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಹೆಚ್‌ಡಿಆರ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732ಜಿ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಬಳಸಿ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64MP ಸೆನ್ಸಾರ್‌ ಹೊಂದಿದೆ. ಜೊತೆಗೆ ಇದು ಬೃಹತ್ 6000 mAh ಬ್ಯಾಟರಿಯನ್ನು ಹೊಂದಿದ್ದು, ಒಂದೇ ಚಾರ್ಜ್‌ನಲ್ಲಿ ಎರಡು ದಿನಗಳವರೆಗೆ ಕಾರ್ಯನಿರ್ವಹಿಸುತ್ತದೆ.

ರಿಯಲ್‌ಮಿ GT Neo 2

ರಿಯಲ್‌ಮಿ GT Neo 2

ಇನ್ನು 31,999 ರೂ ಮೂಲಬೆಲೆಯ ರಿಯಲ್‌ಮಿ GT Neo 2 ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ ಕೇವಲ 27,999ರೂ.ಬೆಲೆಗೆ ಲಭ್ಯವಾಗಲಿದೆ. ಜೊತೆಗೆ ಫೋನ್‌ ಎಕ್ಸ್‌ಚೇಂಜ್‌ ಆಫರ್‌ನಲ್ಲಿ 19,000 ವರೆಗೆ ಡಿಸ್ಕೌಂಟ್‌ ದೊರೆಯಲಿದೆ. ರಿಯಲ್‌ಮಿ ಜಿಟಿ ನಿಯೋ 2 ಸ್ಮಾರ್ಟ್‌ಫೋನ್‌ 6.62-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ರಿಯಲ್‌ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 5,000mAh ಬ್ಯಾಟರಿ ಸಾಮರ್ಥ್ಯ ಹೊಂದಿದ್ದು, 65W ಸೂಪರ್ ಡಾರ್ಟ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಮೊಟೊರೊಲಾ ಎಡ್ಜ್‌ 20 ಪ್ರೊ

ಮೊಟೊರೊಲಾ ಎಡ್ಜ್‌ 20 ಪ್ರೊ

ಮೊಟೊರೊಲಾ ಎಡ್ಜ್‌ 20 ಪ್ರೊ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ ಮೊಬೈಲ್‌ ಬೊನಾಂಜಾ ಸೇಲ್‌ನಲ್ಲಿ ತಾತ್ಕಾಲಿಕ ರಿಯಾಯಿತಿಯನ್ನು ಪಡೆದುಕೊಂಡಿದೆ. 36,999ರೂ.ಬೆಲೆಯ ಈ ಸ್ಮಾರ್ಟ್‌ಫೋನ್‌ ಪ್ರಸ್ತುತ 34,999ರೂ.ಬೆಲೆಗೆ ಮಾರಾಟವಾಗುತ್ತಿದೆ. ಹಾಗೆಯೇ ನಿಮ್ಮ ಹಳೆಯ ಫೋನ್‌ನ ಎಕ್ಸ್‌ಚೇಂಜ್‌ನಲ್ಲಿ 14,250 ರೂ.ವರೆಗಿನ ರಿಯಾಯಿತಿ ಕೂಡ ದೊರೆಯಲಿದೆ. ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್-HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಮೈ UX ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್‌ 4,500mAh ಬ್ಯಾಟರಿಯನ್ನು ಒದಗಿಸಿದ್ದು, 30W ಟರ್ಬೊಪವರ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ವಿವೋ X70 ಪ್ರೊ

ವಿವೋ X70 ಪ್ರೊ

ವಿವೋ X70 ಪ್ರೊ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ 46,990 ಗೆ ಲಭ್ಯವಿದೆ. ಆದರೆ ICICI, CITI ಮತ್ತು Kotak ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳಲ್ಲಿ ಖರೀದಿಸಿದರೆ ಹೆಚ್ಚುವರಿಯಾಗಿ 3,600ರೂ ಫ್ಲಾಟ್ ರಿಯಾಯಿತಿ ಕೂಡ ದೊರೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.56 ಇಂಚಿನ ಫುಲ್ ಹೆಚ್‌ಡಿ ಪ್ಲಸ್‌ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಹೊಂದಿದ್ದು, HDR10 ಬೆಂಬಲವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766V ಅಲ್ಟ್ರಾ-ಸೆನ್ಸಿಂಗ್ ಗಿಂಬಲ್ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 4,450mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಐಫೋನ್‌ 12

ಐಫೋನ್‌ 12

ಐಫೋನ್‌ 12 ಫ್ಲಿಪ್‌ಕಾರ್ಟ್‌ನಲ್ಲಿ ಪ್ರಸ್ತುತ 54,999ರೂ.ಗಳಿಗೆ ಖರೀದಿಸಬಹುದಾಗಿದೆ. ಇದು ಪ್ರಸ್ತುತ ಸೈಟ್‌ನಲ್ಲಿ 56,999 ರೂ.ಗೆ ಪಟ್ಟಿಮಾಡಲಾಗಿದೆ. ತಮ್ಮ ಹಳೆಯ ಫೋನ್ ಅನ್ನು ಎಕ್ಸಚೇಂಜ್‌ ಮಾಡಿದರೆ 14,250 ವರೆಗೆ ಡಿಸ್ಕೌಂಟ್‌ ದೊರೆಯಲಿದೆ. ಇನ್ನು ಐಫೋನ್ 12 6.1-ಇಂಚಿನ OLED ಡಿಸ್‌ಪ್ಲೇ ಹೊಂದಿದ್ದು, A14 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 12 ಫೋನ್ ಎರಡು ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸಂವೇದಕಗಳನ್ನು ಹೊಂದಿವೆ. ನೈಟ್‌ ಮೋಡ್‌ ಆಯ್ಕೆ ಇದ್ದು ಕಡಿಮೆ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ.

Best Mobiles in India

English summary
Best smartphone deals that are available on Flipkart.to know more visit to kannada.gizbot.com.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+