Just In
- 19 hrs ago
ಕಳೆದು ಹೋದ ಸ್ಮಾರ್ಟ್ಫೋನ್ನಲ್ಲಿನ ನಿಮ್ಮ ವಾಟ್ಸಾಪ್ ಅಕೌಂಟ್ ಮತ್ತೆ ಪಡೆಯುವುದು ಹೇಗೆ?
- 22 hrs ago
ರಿಯಲ್ಮಿ C25 ಫಸ್ಟ್ ಲುಕ್: ಬಜೆಟ್ ದರದಲ್ಲಿ ಜಬರ್ದಸ್ತ್ ಕಾರ್ಯವೈಖರಿಯ ಫೋನ್!
- 1 day ago
ಇನ್ಸ್ಟಾಗ್ರಾಮ್ನಲ್ಲಿ ಫೋಟೋ ಮತ್ತು ವೀಡಿಯೊಗಳನ್ನು ಸೇವ್ ಮಾಡುವುದು ಹೇಗೆ?
- 1 day ago
ವಾಟ್ಸಾಪ್ ಬಳಕೆದಾರರನ್ನು ಕಂಗಾಲು ಮಾಡಿದ Pink WhatsApp ಲಿಂಕ್!
Don't Miss
- News
ಬಾಂಗ್ಲಾದಿಂದ ಡೆಮ್ಡೆಸಿವಿರ್ ಲಸಿಕೆ ಆಮದಿಗೆ ಕೇಂದ್ರದ ಅನುಮತಿ ಕೇಳಿದ ಜಾರ್ಖಂಡ್
- Lifestyle
ಸೋಮವಾರದ ಭವಿಷ್ಯ: ಈ ದಿನ ಯಾವ ರಾಶಿಯವರಿಗೆ ಅದೃಷ್ಟದ ದಿನ
- Sports
ಗ್ಲೆನ್ ಮ್ಯಾಕ್ಸ್ವೆಲ್ ಕೈಯಿಂದ ಆರೆಂಜ್ ಕ್ಯಾಪ್ ಕಸಿದುಕೊಂಡ ಧವನ್
- Finance
ಕೊರೊನಾವೈರಸ್ ಎರಡನೇ ಅಲೆ: ಆರ್ಥಿಕ ಅನಿಶ್ಚಿತತೆಗೆ ಕಾರಣವಾಗಬಹುದು!
- Movies
ಮೂರು ಕತೆ, ಮೂರು ನಿರ್ದೇಶಕರು 'ಶಾಂತಿಯನ್ನು ಕಳೆದುಕೊಳ್ಳಬೇಡಿ' ಎನ್ನುತ್ತಿರುವುದೇಕೆ?
- Automobiles
ಆಫ್ಟರ್ ಮಾರ್ಕೆಟ್ ಬಾಡಿ ಕಿಟ್ನೊಂದಿಗೆ ಅಡ್ವೆಂಚರ್ ಬೈಕಿನಂತೆ ಮಾಡಿಫೈಗೊಂಡ ಮಹೀಂದ್ರಾ ಮೊಜೊ
- Education
Ninasam Diploma Admission 2020-21: ಮೇ ತಿಂಗಳಲ್ಲಿ ನೀನಾಸಂ ಡಿಪ್ಲೋಮಾ ಪ್ರವೇಶಾತಿ ಆರಂಭ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಡಿಸ್ಕೌಂಟ್ನಲ್ಲಿ ಪೊಕೊ M2 ಪ್ರೊ ಫೋನ್ ಖರೀದಿಸಲು ಇಂದೇ ಕೊನೆ ದಿನ!
ಜನಪ್ರಿಯ ಇ-ಕಾಮರ್ಸ್ ತಾಣ ಫ್ಲಿಪ್ಕಾರ್ಟ್ ಗ್ರಾಹಕರಿಗಾಗಿ ಏನಾದರೊಂದು ಕೊಡುಗೆ ನೀಡುತ್ತಲೇ ಸಾಗಿದೆ. ಈ ನಿಟ್ಟಿನಲ್ಲಿ ಜ.25 ರಿಂದ ಫ್ಲಿಪ್ಕಾರ್ಟ್ ಆಯೋಜಿಸಿದ್ದ ಮೊಬೈಲ್ಸ್ ಬೊನಾನ್ಜಾ ಸೇಲ್ ಇಂದು (ಜ.29) ಮುಕ್ತಾಯವಾಗಲಿದೆ. ಈ ಸೇಲ್ನಲ್ಲಿ ಇತ್ತೀಚಿಗಷ್ಟೆ ಬಿಡುಗಡೆ ಆಗಿರುವ ಸ್ಮಾರ್ಟ್ಫೋನ್ಗಳ ಜೊತೆಗೆ ಕೆಲವು ಜನಪ್ರಿಯ ಫೋನ್ಗಳಿಗೂ ವಿಶೇಷ ಡಿಸ್ಕೌಂಟ್ ಲಭ್ಯವಾಗಲಿದೆ. ಮುಖ್ಯವಾಗಿ ಪೊಕೊ M2 ಪ್ರೊ ಫೋನ್ಗೆ ಭರ್ಜರಿ ರಿಯಾಯಿತಿ ಲಭ್ಯವಾಗಿದೆ.

ಹೌದು, ಇ-ಕಾಮರ್ಸ್ ದೈತ್ಯ ಫ್ಲಿಪ್ಕಾರ್ಟ್ ತನ್ನ ಗ್ರಾಹಕರಿಗಾಗಿ ಫ್ಲಿಪ್ಕಾರ್ಟ್ ಮೊಬೈಲ್ಸ್ ಬೊನಾನ್ಜಾ ಸೇಲ್ ಅನ್ನು ಆಯೋಜಿಸಿದೆ. ಇನ್ನು ಈ ಸೇಲ್ನಲ್ಲಿ ಮೊಬೈಲ್ಗಳ ಮೇಲೆ ಭರ್ಜರಿ ಆಫರ್ ನೀಡಲಾಗ್ತಿದೆ. ಪೊಕೊ M2 ಪ್ರೊ, ಶಿಯೋಮಿ ಮಿ 10T, ಐಫೋನ್ SE ಸೇರಿದಂತೆ ಹಲವು ನೂತನ ಫೋನ್ಗಳು ಆಫರ್ನಲ್ಲಿ ಕಾಣಿಸಿಕೊಂಡಿವೆ. ಇವುಗಳಲ್ಲಿ ಪೊಕೊ M2 ಪ್ರೊ ಬೆಲೆ ಇಳಿಕೆ ಕಂಡು ಗಮನ ಸೆಳೆದಿದೆ. ಈ ಫೋನ್ ಫ್ಲಿಪ್ಕಾರ್ಟ್ನಲ್ಲಿ ಸದ್ಯ 11,999ರೂ. ಗಳ ಬೆಲೆಯಲ್ಲಿ ಲಭ್ಯ. ಹಾಗಾದರೇ ಪೊಕೊ M2 ಪ್ರೊ ಫೀಚರ್ಸ್ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್ಪ್ಲೇ ರಚನೆ
ಪೊಕೊ M2 ಪ್ರೊ ಸ್ಮಾರ್ಟ್ಪೋನ್ 1,080x2,400 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಡಿಸ್ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್ಪ್ಲೇಯು ಫುಲ್ ಹೆಚ್ಡಿ ಪ್ಲಸ್ ಡಿಸ್ಪ್ಲೇ ಆಗಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಹೊಂದಿದೆ. ಇದಲ್ಲದೆ ಈ ಡಿಸ್ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದೆ. ಇದಲ್ಲದೆ ವೀಡಿಯೋ ಕರೆ ಹಾಗೂ ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಡಿಸ್ಪ್ಲೇ ಮಾದರಿಯನ್ನ ಹೊಂದಿದೆ.

ಪ್ರೊಸೆಸರ್ ಬಲ
ಇನ್ನು ಈ ಸ್ಮಾರ್ಟ್ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 720 G SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ಎಂಐಯುಐ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 6GB RAM ಮತ್ತು 128GB ಆಮತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಪೊಕೊ M2 ಪ್ರೊ ಸ್ಮಾರ್ಟ್ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್ಅಪ್ ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಕ್ಯಾಮೆರಾ ಸೆನ್ಸಾರ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸೆನ್ಸಾರ್ ಅನ್ನು ಹೊಂದಿದೆ.ಇನ್ನು ಈ ಸೆಲ್ಫಿ ಕ್ಯಾಮೆರಾ ನೈಟ್ಮೋಡ್ ಅನ್ನು ಸಹ ಬೆಂಬಲಿಸಲಿದೆ.

ಬ್ಯಾಟರಿ ಮತ್ತು ಇತರೆ
ಪೊಕೊ M2 ಪ್ರೊ ಸ್ಮಾರ್ಟ್ಫೋನ್ 5,020mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್ ಅನ್ನು ಹೊಂದಿದ್ದು, 33w ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ V5.0, GPS, ಯುಎಸ್ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್ಫೋನ್ ರಿಯರ್ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಸಹ ಹೊಂದಿದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999