ಭಾರೀ ಡಿಸ್ಕೌಂಟ್ ಬೆಲೆಯಲ್ಲಿ ಹೊಸ ಫೋನ್ ಖರೀದಿಸಬೇಕೆ?..ಇಲ್ಲಿ ಗಮನಿಸಿ!
ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಸಂಸ್ಥೆಯು ಇದೀಗ ಮಂತ್ ಎಂಡ್ ಮೊಬೈಲ್ಸ್ ಫೆಸ್ಟ್ ಸೇಲ್ ಮಾರಾಟ ಮೇಳವನ್ನು ಆಯೋಜಸಿದೆ. ಈ ಮಾರಾಟ ಮೇಳವು ಇದೇ ಜನವರಿ 31 ರ ವರೆಗೂ ಚಾಲ್ತಿ ಇರಲಿದೆ. ಈ ಮಾರಾಟ ಮೇಳದಲ್ಲಿ ಬಹುತೇಕ ಮೊಬೈಲ್‌ಗಳು ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ರಿಯಲ್‌ಮಿ ಈ ಫೋನ್ ಕೂಡಾ ಬೊಂಬಾಟ್ ಆಫರ್ ಪಡೆದಿದೆ.
ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ ರಿಯಲ್‌ಮಿ ಮೊಬೈಲ್ ಕಂಪನಿಯ ರಿಯಲ್‌ಮಿ 11X 5G ಮೊಬೈಲ್ ಬೆಲೆಯಲ್ಲಿ ಶೇ. 11% ರಷ್ಟು ನೇರ ಡಿಸ್ಕೌಂಟ್ ಪಡೆದಿದೆ. ಈ ಫೋನಿನ 6 GB RAM + 128GB ಸ್ಟೋರೇಜ್ ವೇರಿಯಂಟ್ 14,999ರೂ. ಗಳ ಆಫರ್ ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ. ಇದರೊಂದಿಗೆ ಆಯ್ದ ಕೆಲವು ಬ್ಯಾಂಕ್‌ಗಳಿಂದ ಮತ್ತಷ್ಟು ಡಿಸ್ಕೌಂಟ್ ಕೊಡುಗೆ ಸಹ ಪಡೆಯಬಹುದು.

ಅಂದಹಾಗೆ ರಿಯಲ್‌ಮಿ ಸಂಸ್ಥೆಯ ಈ ಮೊಬೈಲ್‌ನ ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸಲ್ ಸೌಲಭ್ಯದಲ್ಲಿ ಇದ್ದು, ಇದು ಕ್ವಾಲ್ಕಾಮ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ 5G ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ.
ಇದರ ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ 8GB ವರೆಗೆ ವರ್ಚುವಲ್ RAM ಸೌಲಭ್ಯ ಪಡೆದಿದೆ. ಹಾಗಾದರೇ ರಿಯಲ್‌ಮಿ 11X 5G ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ 11X 5G ಫೋನ್ - ಫೀಚರ್ಸ್
ರಿಯಲ್‌ಮಿ 11X 5G ಮೊಬೈಲ್ ಸಹ 6.72 ಇಂಚಿನ IPS LCD ಡಿಸ್‌ಪ್ಲೇ ಮಾದರಿ ಅನ್ನು ಇದು ಒಳಗೊಂಡಿದೆ. ಈ ಫೋನಿನ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಸಪೋರ್ಟ್ ಮಾಡುತ್ತದೆ.
ರಿಯಲ್‌ಮಿ 11X 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ 5G ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ ಇದು 6 GB RAM ಮತ್ತು 128 GB ಹಾಗೂ 8 GB RAM ಮತ್ತು 256 GB ಆಂತರೀಕ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯ. ಅಲ್ಲದೇ ಸುಮಾರು 8GB ವರೆಗೆ ವರ್ಚುವಲ್ RAM ಸೌಲಭ್ಯ ಕೂಡಾ ಈ ಫೋನಿನಲ್ಲಿ ಇದೆ.
ರಿಯಲ್‌ಮಿ 11X 5G ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರ ಮೊದಲ ಕ್ಯಾಮೆರಾ 64 ಮೆಗಾ ಪಿಕ್ಸಲ್ ಸೆನ್ಸಾರ್, ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸಲ್ ಪೋರ್ಟ್ರೇಟ್ ಲೆನ್ಸ್ ಪಡೆದುಕೊಂಡಿದೆ. ಇದರ ಜೊತೆಗೆ ಮುಂಭಾಗದಲ್ಲಿ 8 ಮೆಗಾ ಪಿಕ್ಸಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ. ಇದರೊಂದಿಗೆ ಬೇಸಿಕ್ ಎಡಿಟಿಂಗ್ ಆಯ್ಕೆಗಳು ಇವೆ.
ರಿಯಲ್‌ಮಿ 11X 5G ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 33W ಸೂಪರ್‌ವೂಕ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಅನ್ನು ಕೂಡಾ ಇದು ಪಡೆದುಕೊಂಡಿದೆ.
ರಿಯಲ್‌ಮಿ ಸಂಸ್ಥೆಯು ಈ 5G ಮೊಬೈಲ್ 6 GB RAM ಮತ್ತು 128 GB ಹಾಗೂ 8 GB RAM ಮತ್ತು 256 GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಅಲ್ಲದೇ ಈ ಫೋನ್ ಮೀಡ್‌ನೈಟ್ ಬ್ಲ್ಯಾಕ್ ಹಾಗೂ ಪರ್ಪಲ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.


Click it and Unblock the Notifications








