Home
ಸುದ್ದಿಜಾಲ

ಮೊಟೊದ ಈ ಮೊಬೈಲ್‌ಗೆ ಭರ್ಜರಿ ಆಫರ್‌!..ಅಗ್ಗದ ಬೆಲೆ ಖರೀದಿಸಬಹುದು!

ಮೊಟೊರೊಲಾ ಮೊಬೈಲ್‌ ತಯಾರಿಕಾ ಸಂಸ್ಥೆಯು G ಸರಣಿಯಲ್ಲಿ ಕೆಲವು ಆಕರ್ಷಕ ಫೋನ್‌ಗಳನ್ನು ಪರಿಚಯಿಸಿ ಇತ್ತೀಚಿಗೆ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಆ ಪೈಕಿ ಮೊಟೊ G32 ಮೊಬೈಲ್‌ ಬೆಲೆ ಮತ್ತು ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಮೊಬೈಲ್‌ ಗ್ರಾಹಕರಿಗೆ ಸದ್ಯ ಗುಡ್‌ನ್ಯೂಸ್‌ ಇದ್ದು, ಖರೀದಿದಾರರು ಬೊಂಬಾಟ್‌ ರಿಯಾಯಿತಿ ಬೆಲೆಯಲ್ಲಿ ಈ ಫೋನ್‌ ಖರೀದಿ ಮಾಡಬಹುದಾಗಿದೆ.

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ ನಲ್ಲಿ ಮೊಟೊರೊಲಾ ಕಂಪನಿಯ ಮೊಟೊ G32 ಮೊಬೈಲ್‌ 8GB RAM ವೇರಿಯಂಟ್‌ 36% ರಷ್ಟು ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ವೇರಿಯಂಟ್‌ನ ದರವು 18,999ರೂ. ಇದ್ದು, ಕೊಡುಗೆಯಲ್ಲಿ 11,999ರೂ. ಗಳಿಗೆ ಖರೀದಿಗೆ ಸಿಗಲಿದೆ.

ಮೊಟೊದ ಈ ಮೊಬೈಲ್‌ಗೆ ಭರ್ಜರಿ ಆಫರ್‌!..ಅಗ್ಗದ ಬೆಲೆ ಖರೀದಿಸಬಹುದು!

ಅಂದಹಾಗೆ ಮೊಟೊ G32 ಮೊಬೈಲ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಬಲ ಪಡೆದಿದ್ದು, ತ್ರಿವಳಿ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ ಮಿನರಲ್ ಗ್ರೇ ಮತ್ತು ಸ್ಯಾಟಿನ್ ಸಿಲ್ವರ್ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನುಳಿದಂತೆ ಮೊಟೊ G32 ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಮಾಹಿತಿ : ಮೊಟೊ G32 ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ HD+ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದ್ದು, ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ವನ್ನು ಒಳಗೊಂಡಿದೆ. ಇದು 90Hz ರಿಫ್ರೆಶ್ ರೇಟ್‌ ಮತ್ತು 20:9 ರಚನೆಯ ಅನುಪಾತವನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ 85.48 % ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌ ಪವರ್‌ ಯಾವುದು : ಮೊಟೊ G32 ಮೊಬೈಲ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ. ಇದು 4GB RAM ಮತ್ತು 64 GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯ ಅನ್ನು ವಿಸ್ತರಿಸುವುದಕ್ಕೆ ಅವಕಾಶ ಕೂಡ ಲಭ್ಯ.

ಕ್ಯಾಮೆರಾ ಸೆನ್ಸಾರ್ ರಚನೆಯ ಮಾಹಿತಿ : ಮೊಟೊ G32 ಮೊಬೈಲ್‌ ಟ್ರಿವಳಿ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಸೆಕೆಂಡರಿ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದ್ದು, ಇನ್ನು ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಒದಗಿಸಲಾಗಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳ ಮಾಹಿತಿ : ಮೊಟೊ G32 ಸ್ಮಾರ್ಟ್‌ಫೋನ್‌ 5,000 mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 33W ಟರ್ಬೋಪವರ್ ಫಾಸ್ಟ್‌ ಚಾರ್ಜಿಂಗ್ ಟೆಕ್ನಾಲಜಿಯನ್ನು ಪಡೆದುಕೊಂಡಿದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ Wi-Fi, 4G LTE, ಬ್ಲೂಟೂತ್ v5.2, 3.5mm ಹೆಡ್‌ಫೋನ್ ಪೋರ್ಟ್ ಮತ್ತು USB ಟೈಪ್-C ಅನ್ನು ಪಡೆದಿದೆ. ಇದರ ಜೊತೆಗೆ ಫಿಂಗರ್‌ಪ್ರಿಂಟ್ ರೀಡರ್, ಪ್ರಾಕ್ಸಿಮಿಟಿ ಸೆನ್ಸಾರ್‌, ವೇಗವರ್ಧಕ, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, ಗೈರೊಸ್ಕೋಪ್ ಸೆನ್ಸಾರ್‌ ಮತ್ತು ಇ-ಕಂಪಾಸ್‌ ಅನ್ನು ಪಡೆದಿದೆ.

Best Mobiles in India

English summary
Flipkart offering a Massive discount on Motorola G32. offer price, specifications and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+