Home
ಸುದ್ದಿಜಾಲ

ರಿಯಲ್‌ಮಿ ಸಂಸ್ಥೆಯ ಈ ನೂತನ 5G ಫೋನಿನ ಬೆಲೆಯಲ್ಲಿ ಇಳಿಕೆ!

ಇ ಕಾಮರ್ಸ್‌ ದೈತ್ಯ ತಾಣ ಫ್ಲಿಪ್‌ಕಾರ್ಟ್‌ ಇದೀಗ ಫ್ಲಿಪ್‌ಕಾರ್ಟ್‌ ರಿಪಬ್ಲಿಕ್ ಡೇ ಸೇಲ್ ಆಯೋಜಿಸಿದೆ. ಈ ಮಾರಾಟ ಮೇಳದಲ್ಲಿ ಆಯ್ದ ಫೋನ್‌ಗಳು ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ರಿಯಲ್‌ಮಿ ಸಂಸ್ಥೆಯ ರಿಯಲ್‌ಮಿ 11 ಪ್ರೊ 5G ಕೂಡಾ ಗ್ರಾಹಕರು ಹಿಂತಿರುಗಿ ನೋಡುವಂತಹ ಡಿಸ್ಕೌಂಟ್‌ ಪಡೆದಿದೆ.

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ರಿಯಲ್‌ಮಿ 11 ಪ್ರೊ 5G ಫೋನ್‌ ಶೇ. 9% ರಷ್ಟು ನೇರ ರಿಯಾಯಿತಿ ಹೊಂದಿದೆ. ಈ ಫೋನಿನ 12 GB RAM + 256 GB ಸ್ಟೋರೇಜ್‌ ವೇರಿಯಂಟ್‌ 27,999ರೂ. ಗಳ ಬೆಲೆಯಲ್ಲಿ ಲಭ್ಯ. ಹಾಗೆಯೇ ವೆಬ್‌ಸೈಟ್‌ನಲ್ಲಿ ಲಭ್ಯ ಇರುವ ಬ್ಯಾಂಕ್‌ ರಿಯಾಯಿತಿ ಪಡೆದುಕೊಂಡರೆ, ಇನ್ನಷ್ಟು ಕಡಿಮೆ ಬೆಲೆಗೆ ಫೋನ್‌ ಖರೀದಿಸಲು ಅವಕಾಶ ಇದೆ.

ರಿಯಲ್‌ಮಿ ಸಂಸ್ಥೆಯ ಈ ನೂತನ 5G ಫೋನಿನ ಬೆಲೆಯಲ್ಲಿ ಇಳಿಕೆ!

ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ ಸೌಲಭ್ಯ ಪಡೆದಿದ್ದು, ಹಾಗೆಯೇ 100 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪ್ರಾಥಮಿಕ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಅಲ್ಲದೇ ಈ ಮೊಬೈಲ್‌ 5,000 mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಒಳಗೊಂಡಿದೆ. ಇನ್ನುಳಿದಂತೆ ರಿಯಲ್‌ಮಿ 11 ಪ್ರೊ 5G ಮೊಬೈಲ್‌ನ ಇತರೆ ಫೀಚರ್ಸ್‌ ಯಾವುವು ಎಂಬುದನ್ನು ತಿಳಿಯೋಣ ಬನ್ನಿರಿ.

ರಿಯಲ್‌ಮಿ 11 ಪ್ರೊ 5G ಫೀಚರ್ಸ್‌

ರಿಯಲ್‌ಮಿ 11 ಪ್ರೊ 5G ಮೊಬೈಲ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಕರ್ವ್ಡ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1,080 x 2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗೆಯೇ ಇನ್ನು ಡಿಸ್‌ಪ್ಲೇ 360Hz ಟಚ್‌ ಸ್ಯಾಪ್ಲಿಂಗ್‌ ರೇಟ್‌ ಅನ್ನು ಪಡೆದಿದೆ.

ರಿಯಲ್‌ಮಿ ಸಂಸ್ಥೆಯ ಈ ನೂತನ 5G ಫೋನಿನ ಬೆಲೆಯಲ್ಲಿ ಇಳಿಕೆ!

ಅಲ್ಲದೇ ಇದು ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಆಂಡ್ರಾಯ್ಡ್ 13 ಆಧಾರಿತ ರಿಯಲ್‌ಮಿ UI 4.0 ನಲ್ಲಿ ಕಾರ್ಯ ನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ 8GB + 128GB ಮತ್ತು 12GB + 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ.

ಈ ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರಲ್ಲಿ ಮೊದಲ ಕ್ಯಾಮೆರಾ 100 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದರ ಜೊತೆಗೆ ಈ ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, 67W SuperVOOC ವೇಗದ ಚಾರ್ಜಿಂಗ್ ಸಪೋರ್ಟ್‌ ಹೊಂದಿದೆ.

ರಿಯಲ್‌ಮಿ 11 ಪ್ರೊ+ 5G ಫೋನ್‌ - ಫೀಚರ್ಸ್‌
ಈ ಮೊಬೈಲ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಕರ್ವ್ಡ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದರ ಡಿಸ್‌ಪ್ಲೇ 1,080 x 2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗೆಯೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ ಪವರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 13 ಆಧಾರಿತ ರಿಯಲ್‌ಮಿ UI 4.0 ನಲ್ಲಿ ಕೆಲಸ ಮಾಡಲಿದೆ.

ಹಾಗೆಯೇ ಈ ಫೋನಿನ ಪ್ರಾಥಮಿಕ ಕ್ಯಾಮೆರಾ 200 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್‌ HP3 ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 100W ಸೂಪರ್‌ವೂಕ್‌ ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದೆ.

Best Mobiles in India

English summary
Flipkart Republic Day Sale. Best deal on realme 11 Pro 5G Phone. check out other details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+