Home
ಸುದ್ದಿಜಾಲ

ಐಫೋನ್‌ ಖರೀದಿಸುವವರಿಗೆ ಫ್ಲಿಪ್‌ಕಾರ್ಟ್‌ ನೀಡುತ್ತಿದೆ ಬಿಗ್‌ ಆಫರ್‌!

ಜನಪ್ರಿಯ ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್ ತನ್ನ ವಿಶೇಷ ಸೇಲ್‌ಗಳ ಮೂಲಕ ಆನ್‌ಲೈನ್‌ ಶಾಪಿಂಗ್‌ ಪ್ರಿಯರನ್ನು ಸೆಳೆಯುತ್ತಾ ಬಂದಿದೆ. ವಿಶೇಷ ದಿನಗಳಲ್ಲಿ ರಿಯಾಯಿತಿ ಸೇಲ್‌ಗಳನ್ನು ನಡೆಸುವ ಫ್ಲಿಪ್‌ಕಾರ್ಟ್‌ ಹಲವು ಗ್ಯಾಜೆಟ್ಸ್‌ಗಳ ಮೇಳೆ ಡಿಸ್ಕೌಂಟ್‌ ನೀಡಲಿದೆ. ಸದ್ಯ ಇದೀಗ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಮೊಬೈಲ್ ಫೋನ್ಸ್‌ ಬೊನಾನ್ಜಾ ಸೇಲ್‌ ನಡೆಸುತ್ತಿದೆ. ಈ ಸೇಲ್‌ ಆಗಸ್ಟ್ 11 ರಂದು ಪ್ರಾರಂಭವಾಗಿದ್ದು, ಇದೇ ಆಗಸ್ಟ್ 15 ರವರೆಗೆ ಮುಂದುವರಿಯುತ್ತದೆ. ಈ ಸೇಲ್‌ನಲ್ಲಿ ನೀವು ಆಪಲ್‌ ಐಫೋನ್‌ ಸೇರಿದಂತೆ ಹಲವು ಡಿವೈಸ್‌ಗಳ ಮೇಲೆ ಬಿಗ್‌ ಡಿಸ್ಕೌಂಟ್‌ ಪಡೆದುಕೊಳ್ಳಬಹುದಾಗಿದೆ.

ಫ್ಲಿಪ್‌ಕಾರ್ಟ್‌

ಹೌದು, ಫ್ಲಿಪ್‌ಕಾರ್ಟ್‌ ಮೊಬೈಲ್ಸ್‌ ಬೊನಾನ್ಜಾ ಸೇಲ್‌ ನಡೆಸುತ್ತಿದೆ. ಈ ಸೇಲ್‌ನ ಭಾಗವಾಗಿ, ಆಪಲ್‌, ವಿವೊ, ರಿಯಲ್‌ಮಿ ಕಂಪೆನಿಯ ಡಿವೈಸ್‌ಗಳ ಮೇಲೆ ಡಿಸ್ಕೌಂಟ್‌ ನೀಡುತ್ತಿದೆ. ಇದರಲ್ಲಿ ಪ್ರಮುಖ ಬ್ಯಾಂಕ್‌ಗಳ ಕಾರ್ಡ್ ಮತ್ತು EMI ಖರೀದಿಗಳೊಂದಿಗೆ ಖರೀದಿದಾರರು ಹೆಚ್ಚುವರಿ ರಿಯಾಯಿತಿಗಳನ್ನು ಪಡೆಯಬಹುದು. ಅದರಲ್ಲೂ ಆಪಲ್‌ ಐಫೋನ್‌ಗಳ ಮೇಲೆ ವಿಶೇಷ ರಿಯಾಯಿತಿ ಲಭ್ಯವಿದೆ. ಹಾಗಾದ್ರೆ ಫ್ಲಿಪ್‌ಕಾರ್ಟ್‌ ಬೊನಾನ್ಜಾ ಸೇಲ್‌ನಲ್ಲಿ ಏನೆಲ್ಲಾ ಡಿಸ್ಕೌಂಟ್‌ ಲಭ್ಯವಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಆಪಲ್‌ ಐಫೋನ್‌ 13

ಆಪಲ್‌ ಐಫೋನ್‌ 13

ಫ್ಲಿಪ್‌ಕಾರ್ಟ್‌ ತಾಣ ಪ್ರಸ್ತುತ ಆಪಲ್‌ ಐಫೋನ್‌ 13 ಖರೀದಿಯ ಮೇಲೆ 19,500 ವರೆಗೆ ಎಕ್ಸ್‌ಚೇಂಜ್ ಡಿಸ್ಕೌಂಟ್ ಪಡೆದುಕೊಳ್ಳಬಹುದು. ಇನ್ನು ಈ ಐಫೋನ್‌ 13 ಆರಂಭಿಕ ಬೆಲೆ 71,249ರೂ. ಗಳಿಗೆ ಲಭ್ಯವಾಗುತ್ತಿದೆ. ಐಫೋನ್ 13 ಫೋನ್‌ 6.1 ಇಂಚಿನ ಡಿಸ್‌ಪ್ಲೇ ಹೊಂದಿದೆ. ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ.

ಆಪಲ್‌ ಐಫೋನ್‌ 12

ಆಪಲ್‌ ಐಫೋನ್‌ 12

ಫ್ಲಿಪ್‌ಕಾರ್ಟ್‌ ಮೊಬೈಲ್‌ ಫೋನ್ಸ್‌ ಬೊನಾನ್ಜಾ ಸೇಲ್‌ನಲ್ಲಿ ಐಫೋನ್‌ 12 ಬಿಗ್‌ ಡಿಸ್ಕೌಂಟ್‌ ಪಡೆದುಕೊಂಡಿದೆ. ಇದನ್ನು ನೀವು ಕೇವಲ 51,299ರೂ. ಬೆಲೆಯಲ್ಲಿ ಖರೀದಿಸುವುದಕ್ಕೆ ಸಾಧ್ಯವಾಗಲಿದೆ. ಇನ್ನು ಐಫೋನ್‌ 12 6.1-ಇಂಚಿನ ಸೂಪರ್ ರೆಟಿನಾ XDR ಸ್ಕ್ರೀನ್‌ ಹೊಂದಿದೆ. ಇದು A14 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಐಫೋನ್ 12 ಫೋನ್ ಎರಡು ಕ್ಯಾಮೆರಾ ಹೊಂದಿದ್ದು, ಕ್ರಮವಾಗಿ 12 ಮೆಗಾಪಿಕ್ಸೆಲ್ ವೈಡ್ ಆಂಗಲ್ ಸೆನ್ಸಾರ್‌ಗಳನ್ನು ಹೊಂದಿವೆ. ಇದಲ್ಲದೆ ಆಪಲ್‌ ಐಫೋನ್‌ 12ನಲ್ಲಿ ನೈಟ್‌ ಮೋಡ್‌ ಆಯ್ಕೆ ಇದ್ದು ಕಡಿಮೆ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಇನ್ನು ಈ ಫೋನ್ ನೀಲಿ, ಹಸಿರು, ಕಪ್ಪು, ಬಿಳಿ ಮತ್ತು ಕೆಂಪು ಬಣ್ಣಗಳ ಆಯ್ಕೆಗಳಲ್ಲಿ ಸಿಗಲಿದೆ.

ಆಪಲ್‌ ಐಫೋನ್‌ 12 ಪ್ರೊ

ಆಪಲ್‌ ಐಫೋನ್‌ 12 ಪ್ರೊ

ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ ಐಫೋನ್‌ 12 ಪ್ರೊ 1,09,150ರೂ. ಆರಂಭಿಕ ಬೆಲೆಯಲ್ಲಿ ಲಭ್ಯವಿದೆ. ಇದು 6.1 ಇಂಚಿನ ಸೂಪರ್ ರೆಟಿನಾ ಡಿಸ್‌ಪ್ಲೇಯನ್ನು ಹೊಂದಿದೆ. ಈ ಫೋನ್‌ A14 ಬಯೋನಿಕ್ ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಐಫೋನ್‌ 12 ಪ್ರೊ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, 12MP ಸೆನ್ಸಾರ್‌ ಪಡೆದಿವೆ. ಇದು ಸುಧಾರಿತ AR ಅನುಭವಗಳಿಗಾಗಿ LiDAR ಸ್ಕ್ಯಾನರ್ ಅನ್ನು ನೀಡುತ್ತದೆ ಮತ್ತು ನೈಟ್ ಮೋಡ್ ಪೋರ್ಟ್ರೇಟ್ ಫೀಚರ್ಸ್‌ ಅನ್ನು ಹೊಂದಿದೆ.

ಆಪಲ್‌ ಐಫೋನ್‌ 11

ಆಪಲ್‌ ಐಫೋನ್‌ 11

ಐಫೋನ್ 11 ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ ಕೇವಲ 40,249ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಇದರ ಮೂಲ ಬೆಲೆ 54,900ರೂ. ಆಗಿದ್ದು, ನಿಮಗೆ 14,651ರೂ ಡಿಸ್ಕೌಂಟ್‌ ಲಬ್ಯವಾಗಲಿದೆ. ಇನ್ನು ಐಫೋನ್‌ 11 6.1-ಇಂಚಿನ ಲಿಕ್ವಿಡ್ ರೆಟಿನಾ HD ಡಿಸ್‌ಪ್ಲೇಯನ್ನು ಹೊಂದಿದೆ. ಇದು ವೇಗದ ಚಿಪ್‌ಸೆಟ್‌ ಬೆಂಬಲದೊಂದಿಗೆ A13 ಬಯೋನಿಕ್ ಪ್ರೊಸೆಸರ್‌ ಪಡೆದುಕೊಂಡಿದ್ದು, ಈ ಬಯೋನಿಕ್ ಚಿಪ್ 8.5 ಬಿಲಿಯನ್ ಟ್ರಾನ್ಸಿಸ್ಟರ್‌ಗಳನ್ನು ಹೊಂದಿದೆ. ಈ ಐಫೋನ್‌ ಡ್ಯುಯಲ್ ಕ್ಯಾಮೆರಾ ಸೆಟಪ್‌ ಹೊಂದಿದ್ದು, ಎರಡು ಕ್ಯಾಮೆರಾಗಳು 12 ಮೆಗಾ ಪಿಕ್ಸಲ್ ಸೆನ್ಸಾರ್‌ ಬೆಂಬಲವನ್ನು ಪಡೆದಿವೆ.

Best Mobiles in India

English summary
Flipkart sale: Massive discounts on Apple iPhones
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+