ಫ್ಲಿಪ್‌ಕಾರ್ಟ್‌ನಲ್ಲಿ ಐಫೋನ್ 12 ಫೋನಿಗೆ ಭರ್ಜರಿ ರಿಯಾಯಿತಿ!
ಇ ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್ ಒಂದಿಲ್ಲೊಂದು ಆಫರ್ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತ ಸಾಗಿದೆ. ಮುಖ್ಯವಾಗಿ ಸ್ಮಾರ್ಟ್‌ಫೋನ್‌ಗಳಿಗೆ ವಿಶೇಷ ಸೇಲ್ ಆಯೋಜಿಸುತ್ತದೆ. ಅದೇ ರೀತಿ ಫ್ಲಿಪ್‌ಕಾರ್ಟ್ ಇದೀಗ ಇಯರ್ ಎಂಡ್ ಸೇಲ್ ಆಯೋಜಿಸಿದ್ದು, ಆಯ್ದ ಫೋನ್‌ಗಳಿಗೆ ಭರ್ಜರಿ ಕೊಡುಗೆ ನೀಡಿದೆ. ಹಾಗೆಯೇ ಈ ಸೇಲ್‌ನಲ್ಲಿ ಐಫೋನ್ 12 ಫೋನ್ ಸಹ ಆಕರ್ಷಕ ರಿಯಾಯಿತಿ ಪಡೆದಿದೆ.

ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣವು ಆಯೋಜಿಸಿರುವ ಇಯರ್ ಎಂಡ್ ಸೇಲ್ ಸದ್ಯ ಚಾಲ್ತಿ ಇದೆ. ಈ ಸೇಲ್ ಮೇಳವು ಇದೇ ಡಿ. 31 ರ ವರೆಗೂ ಚಾಲ್ತಿ ಇರಲಿದೆ. ಈ ಸೇಲ್‌ನಲ್ಲಿ ಐಫೋನ್ 12 ಫೋನಿನ 64GB ವೇರಿಯಂಟ್ ಮಾಡೆಲ್ 51,999ರೂ. ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಗ್ರಾಹಕರಿಗೆ 15,450ರೂ. ವರೆಗೂ ಎಕ್ಸ್‌ಚೇಂಜ್ ಕೊಡುಗೆ ಲಭ್ಯ ಆಗಲಿದೆ. ಹಾಗೆಯೇ ರಿಯಲ್‌ಮಿ GT ನಿಯೋ 2 ಫೋನ್ ಸಹ ಆಕರ್ಷಕ ರಿಯಾಯಿತಿ ಪಡೆದಿದೆ. ಹಾಗಾದರೇ ಐಫೋನ್ 12 ಫೋನಿನ ಫೀಚರ್ಸ್‌ಗಳೆನು ಹಾಗೂ ರಿಯಲ್‌ಮಿ GT ನಿಯೋ 2 ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಐಫೋನ್ 12 ಫೀಚರ್ಸ್
ಐಫೋನ್ 12 OLED ಡಿಸ್‌ಪ್ಲೇ ಹೊಂದಿದ್ದು, A14 ಬಯೋನಿಕ್ ಸೋಕ್ ಕ್ವಾಡ್ ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 12 ಫೋನ್ ಎರಡು ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾಪಿಕ್ಸೆಲ್ ವೈಡ್ ಆಂಗಲ್ ಸಂವೇದಕಗಳನ್ನು ಹೊಂದಿವೆ. ನೈಟ್ ಮೋಡ್ ಆಯ್ಕೆ ಇದ್ದು ಕಡಿಮೆ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಇನ್ನು ಈ ಫೋನ್ ನೀಲಿ, ಹಸಿರು, ಕಪ್ಪು, ಬಿಳಿ ಮತ್ತು ಕೆಂಪು ಬಣ್ಣಗಳ ಆಯ್ಕೆಗಳಲ್ಲಿ ಸಿಗಲಿದೆ.

ರಿಯಲ್‌ಮಿ GT ನಿಯೋ 2 ಡಿಸ್‌ಪ್ಲೇ
ರಿಯಲ್‌ಮಿ GT ನಿಯೋ 2 ಸ್ಮಾರ್ಟ್ ಫೋನ್ ಅಧಿಕ ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿರಲಿದೆ. ಹಾಗೆಯೇ 6.62 ಇಂಚಿನ ಹೆಚ್‌ಡಿ + AMOLED ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇ 120Hz ರೀಫ್ರೇಶ್ ರೇಟ್ ಹೊಂದಿರಲಿದ್ದು, 600Hz ಟಚ್ ಸಾಂಪ್ಲಿಂಗ್ ರೇಟ್ ಪಡೆದಿರಲಿದೆ. ಹಾಗೆಯೇ ಇದು 1300 nits ಬ್ರೈಟ್ನೆಸ್ ಪಡೆದಿರಲಿದೆ.
ರಿಯಲ್‌ಮಿ GT ನಿಯೋ 2 ಪ್ರೊಸೆಸರ್
ರಿಯಲ್‌ಮಿ GT ನಿಯೋ 2 ಸ್ಮಾರ್ಟ್‌ಫೋನ್ ಮೀಡಿಯಾ ಮೀಡಿಯಾ ಟೆಕ್ Dimensity 1200 SoC ಪ್ರೊಸೆಸರ್ ಅನ್ನು ಹೊಂದಿರಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 6 GB RAM ಮತ್ತು 128 GB, 8 GB + 128 GB ಮತ್ತು 12 GB + 128 GB ಸ್ಟೋರೇಜ್‌ನ ವೇರಿಯಂಟ್ ಆಯ್ಕೆ ಹೊಂದಿರಲಿದೆ ಜೊತೆಗೆ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾದ ಅವಕಾಶ ಇರಲಿದೆ.

ರಿಯಲ್‌ಮಿ GT ನಿಯೋ 2 ಕ್ಯಾಮೆರಾ
ರಿಯಲ್‌ಮಿ GT ನಿಯೋ 2 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿರಲಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿರಲಿದ್ದು ಇನ್ನು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿರಲಿದೆ. ಹಾಗೆಯೇ ಸೆಲ್ಫಿಗಾಗಿ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಒದಗಿಸುವ ಸಾಧ್ಯತೆ ಇದೆ.
ರಿಯಲ್‌ಮಿ GT ನಿಯೋ 2 ಬ್ಯಾಟರಿ
ರಿಯಲ್‌ಮಿ GT ನಿಯೋ 2 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿರಲಿದೆ. ಇದರೊಂದಿಗೆ 65W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ V5.0, GPS ಮತ್ತು ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಸೆನ್ಸಾರ್ ಅನ್ನು ಒಳಗೊಂಡಿರಲಿದೆ.


Click it and Unblock the Notifications








