ಈ ಅಗ್ಗದ ಮೊಟೊ ಮೊಬೈಲ್ ಈಗ ಇನ್ನಷ್ಟು ಕಡಿಮೆ ಬೆಲೆಗೆ ಲಭ್ಯ!
ಮೊಟೊರೊಲಾ ಸಂಸ್ಥೆಯ e ಸರಣಿಯ ಸ್ಮಾರ್ಟ್‌ಫೋನ್‌ಗಳು ಬಜೆಟ್ ಪ್ರೈಸ್‌ಟ್ಯಾಗ್ ಮೂಲಕ ಗ್ರಾಹಕರ ಗಮನ ಸೆಳೆದಿವೆ. ಸಂಸ್ಥೆಯ ಬಜೆಟ್ ದರದ ಫೋನ್‌ಗಳ ಲಿಸ್ಟ್‌ನಲ್ಲಿ ಮೊಟೊರೊಲಾ e13 ಮೊಬೈಲ್ ಕೂಡಾ ಆಕರ್ಷಕ ಎನಿಸಿದೆ. ಈ ಫೋನ್ ಇದೀಗ ಫ್ಲಿಪ್‌ಕಾರ್ಟ್ ಇಯರ್ ಎಂಡ್ ಮಾರಾಟದಲ್ಲಿ ಸಖತ್ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ 'ಇಯರ್ ಎಂಡ್ ಸೇಲ್' ಆಯೋಜಿಸಿದ್ದು, ಈ ಮೇಳವು ಇದೇ ಡಿಸೆಂಬರ್ 9 ರಿಂದ ಪ್ರಾರಂಭವಾಗಲಿದೆ. ಈ ಮಾರಾಟದಲ್ಲಿ ಮೊಟೊರೊಲಾ e13 ಮೊಬೈಲ್ ಶೇ. 31% ರಷ್ಟು ನೇರ ರಿಯಾಯಿತಿ ಪಡೆದಿದ್ದು, 128 GB ಸ್ಟೋರೇಜ್ ವೇರಿಯಂಟ್ ಫೋನ್ 7,499ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ.

ಅಂದಹಾಗೆ ಈ ಫೋನ್ ಹಿಂಬದಿ ಸಿಂಗಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ ಯುನಿಸಾಕ್ T606 (Unisoc T606) ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಹಾಗಾದರೇ ಮೊಟೊರೊಲಾ e13 ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ಡಿಸೈನ್ ಹಾಗೂ ವಿನ್ಯಾಸ
ಮೊಟೊ e13 ಫೋನ್ 6.5 ಇಂಚಿನ IPS LCD ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, ವಾಟರ್‌ಡ್ರಾಪ್ ನಾಚ್ ವಿನ್ಯಾಸವನ್ನು ಒಳಗೊಂಡಿದೆ. ಹಾಗೆಯೇ ಡಿಸ್‌ಪ್ಲೇ ಅನುಪಾತವು 20:9 ಪಡೆದುಕೊಂಡಿದೆ.

ಯಾವ ಪ್ರೊಸೆಸರ್ ಪವರ್ ಇದೆ
ಮೊಟೊ e13 ಫೋನ್ ಯುನಿಸಾಕ್ T606 (Unisoc T606) ಪ್ರೊಸೆಸರ್ ಪವರ್ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 2GB RAM + 64GB, 4GB RAM + 64GB ಮತ್ತು 8 GB RAM + 128 GB ಸ್ಟೋರೇಜ್ ಸಾಮರ್ಥ್ಯ ಆಯ್ಕೆಗಳನ್ನು ಒಳಗೊಂಡಿದೆ. ಇದರ ಜೊತೆಗೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಇದೆ.
ಸಿಂಗಲ್ ಕ್ಯಾಮೆರಾ ಆಯ್ಕೆ ಸೌಲಭ್ಯ
ಮೊಟೊ e13 ಫೋನ್ ಎಂಟ್ರಿ ಲೆವೆಲ್ ವಿಭಾಗದಲ್ಲಿ ಕಾಣಿಸಿಕೊಂಡಿದ್ದು, ಇದರ ಹಿಂಬದಿಯಲ್ಲಿ ಸಿಂಗಲ್ ರಿಯರ್ ಕ್ಯಾಮೆರಾ ರಚನೆ ಇದೆ. ಈ ಮೊಬೈಲ್ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದ್ದು, ಎಲ್‌ಇಡಿ ಫ್ಲ್ಯಾಷ್ ಸೌಲಭ್ಯ ಕೂಡಾ ಪಡೆದಿದೆ. ಇದಲ್ಲದೆ ಈ ಮೊಬೈಲ್ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದುಕೊಂಡಿದೆ.
ಬಿಗ್ ಬ್ಯಾಟರಿ ಬ್ಯಾಕ್‌ಅಪ್
ಈ ಮೊಟೊರೊಲಾ e13 ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಸೌಲಭ್ಯವನ್ನು ಕೂಡಾ ಪಡೆದಿದೆ. ಜೊತೆಗೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್ 5.0, ಜಿಪಿಎಸ್, ಫೇಸ್ ಅನ್‌ಲಾಕ್, ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್, ಯುಎಸ್‌ಬಿ ಟೈಪ್-ಸಿ ಪೋರ್ಟ್, ಡಾಲ್ಬಿ ಅಟ್ಮಾಸ್ ಬೆಂಬಲ ಪಡೆದಿದೆ.
ಮೆಮೊರಿ ಹಾಗೂ ಕಲರ್ ಆಯ್ಕೆ
ಈ ಫೋನ್ 2GB RAM + 64GB, 4GB RAM + 64GB ಮತ್ತು 8 GB RAM + 128 GB ಸ್ಟೋರೇಜ್ ಸಾಮರ್ಥ್ಯ ವೇರಿಯಂಟ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಗ್ರೀನ್, ಬ್ಲ್ಯಾಕ್ ಹಾಗೂ ವೈಟ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.


Click it and Unblock the Notifications








