ಸದ್ಯದಲ್ಲೇ ಅಗ್ಗದ ಬೆಲೆಯ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M02s ಸ್ಮಾರ್ಟ್‌ಫೋನ್‌ ಲಾಂಚ್‌!

|

ಸ್ಮಾರ್ಟ್‌ಫೋನ್‌ ದೈತ್ಯ ಸ್ಯಾಮ್‌ಸಂಗ್‌ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಬಜೆಟ್‌ ಪ್ರೈಸ್‌ ಟ್ಯಾಗ್‌, ಪ್ರೀಮಿಯಂ, ಫೋಲ್ಡಬಲ್‌ ಸ್ಮಾರ್ಟ್‌ಫೋನ್‌ ಹೀಗೆ ಹಲವು ವಿಧದ ಸ್ಮಾರ್ಟ್‌ಫೋನ್‌ ಪರಿಚಯಿಸಿರುವ ಸ್ಯಾಮ್‌ಸಂಗ್‌ ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಸದ್ಯ ನಂಬರ್‌ ಒನ್‌ ಬ್ರಾಂಡ್‌ ಆಗಿ ಗುರುತಿಸಿಕೊಂಡಿದೆ. ಇದೀಗ 2021 ರಲ್ಲಿ ತನ್ನ ಮೊದಲ ಸ್ಮಾರ್ಟ್‌ಫೋನ್‌ ಆಗಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M02s ಅನ್ನು ಬಿಡುಗಡೆ ಮಾಡಲಿದೆ ಎನ್ನಲಾಗಿದೆ.

ಸ್ಯಾಮ್‌ಸಂಗ್‌

ಹೌದು, ದಕ್ಷಿಣ ಕೋರಿಯಾ ಮೂಲದ ಸ್ಮಾರ್ಟ್‌ಫೋನ್‌ ದೈತ್ಯ ಸ್ಯಾಮ್‌ಸಂಗ್‌ ಕಂಪೆನಿ ಗ್ಯಾಲಕ್ಸಿ M02s ಅನ್ನು ಮುಂದಿನ ವಾರ ಭಾರತದಲ್ಲಿ ಅನಾವರಣಗೊಳಿಸಲು ಮುಂದಾಗಿದೆ. ಇದು ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ ಆಗಿದ್ದು, ಇದರ ಬೆಲೆ 10,000 ಕ್ಕಿಂತ ಕಡಿಮೆ ಇರಲಿದೆ ಎಂದು ವರದಿ ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಮುಂದೆ ಓದಿರಿ.

ಡಿಸ್‌ಪ್ಲೇ ವಿಶೇಷತೆ

ಡಿಸ್‌ಪ್ಲೇ ವಿಶೇಷತೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M02s ಸ್ಮಾರ್ಟ್‌ಫೋನ್‌ 720x1560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನು ಹೊಂದಿದ್ದು, TFT ವಿನ್ಯಾಸವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 264ppi ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿರಲಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 450 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಹಾಗೇಯೇ 3GB RAM ಮತ್ತು 32GB ಸ್ಟೋರೇಜ್ ಹಾಗೂ 4GB RAM ಮತ್ತು 64GB ಸ್ಟೋರೇಜ್ ಸಾಮರ್ಥ್ಯದ ಎರಡು ವೇರಿಯೆಂಟ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ ಎಂದು ಅಂದಾಜಿಸಲಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಗ್ಯಾಲಕ್ಸಿ M02s ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇದಲ್ಲದೆ 5MP ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ ಎನ್ನಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಫೋರ್ಟ್‌ ಅನ್ನು ಬೆಂಬಲಿಸುವ ನಿರೀಕ್ಷೆ ಇದೆ. ಇದು 10,000 ರೂ ಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗಲಿದೆ ಎಂದು ಅಂದಾಜಿಸಲಾಗಿದೆ.

Best Mobiles in India

English summary
Samsung’s first smartphone launch of 2021 could take place next week.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X