Pixel 6A: ಗೂಗಲ್ ಪಿಕ್ಸಲ್ 6a ಫೋನ್ ಖರೀದಿಸಲು ಇದಕ್ಕಿಂತ ಒಳ್ಳೆಯ ಆಫರ್ ಬೇಕಾ?
ಪ್ರಮುಖ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಎನಿಸಿರುವ ಫ್ಲಿಪ್‌ಕಾರ್ಟ್ ಹಲವು ಆಫರ್ ಮೂಲಕ ಶಾಪಿಂಗ್ ಪ್ರಿಯರನ್ನು ಸೆಳೆಯುತ್ತ ಸಾಗಿದೆ. ಅದರಲ್ಲಿಯೂ ದೈತ್ಯ ಸ್ಮಾರ್ಟ್‌ಫೊನ್‌ಗಳಿಗೂ ಆಕರ್ಷಕ ರಿಯಾಯಿತಿ ನೀಡುತ್ತದೆ. ಸದ್ಯ ಗೂಗಲ್ ಸಂಸ್ಥೆಯ ಗೂಗಲ್ ಪಿಕ್ಸಲ್ 6a ಸ್ಮಾರ್ಟ್‌ಫೋನಿಗೆ ಬೊಂಬಾಟ್ ಡಿಸ್ಕೌಂಟ್ ತಿಳಿಸಿದ್ದು, ಅತ್ಯುತ್ತಮ ಮೊಬೈಲ್ ಕ್ಯಾಮೆರಾ ಫೋನ್ ಬಯಸುವ ಗ್ರಾಹಕರಿಗೆ ಖುಷಿ ತಂದಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಗೂಗಲ್ ಪಿಕ್ಸಲ್ 6a ಸ್ಮಾರ್ಟ್‌ಫೋನ್ ಶೇ. 29% ರಷ್ಟು ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಗೂಗಲ್ ಪಿಕ್ಸಲ್ 6a ಮೊಬೈಲ್‌ನ 6 GB RAM + 128 GB ಸ್ಟೋರೇಜ್ ವೇರಿಯಂಟ್ 43,999ರೂ. ಪ್ರೈಸ್ ಟ್ಯಾಗ್ ಹೊಂದಿದ್ದು, ಫ್ಲಿಪ್‌ಕಾರ್ಟ್ ಆಫರ್‌ನಲ್ಲಿ ಗ್ರಾಹಕರು 25,999ರೂ. ಗಳಿಗೆ ಖರೀದಿ ಮಾಡಲು ಅವಕಾಶ ಇದೆ.

ಅಂದಹಾಗೆ ಗೂಗಲ್ ಪಿಕ್ಸಲ್ 6a ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, 12 ಮೆಗಾಪಿಕ್ಸಲ್ ಸೆನ್ಸಾರ್ ನಲ್ಲಿದೆ. ಜೊತೆಗೆ ಇದು OLED ಡಿಸ್‌ಪ್ಲೇ ಅನ್ನು ಪಡೆದಿದ್ದು, 1080 x 2400 ಪಿಕ್ಸಲ್ ರೆಸಲ್ಯೂಶನ್ ಪಡೆದುಕೊಂಡಿದೆ. ಹಾಗಾದರೆ ಗೂಗಲ್ ಪಿಕ್ಸಲ್ 6a ಮೊಬೈಲ್‌ನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಗೂಗಲ್ ಪಿಕ್ಸೆಲ್ 6a ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೀಗಿದೆ
ಗೂಗಲ್ ಪಿಕ್ಸೆಲ್ 6a ಮೊಬೈಲ್ 90Hz ರಿಫ್ರೆಶ್ ರೇಟ್ ಒಳಗೊಂಡ 6.1 ಇಂಚಿನ ಫುಲ್ ಹೆಚ್‌ಡಿ ಪ್ಲಸ್ OLED ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಈ ಫೋನಿನ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗೆಯೇ ಇದು 20:9 ರಚನೆಯ ಅನುಪಾತವನ್ನು ಹೊಂದಿದ್ದು, ಜೊತೆಗೆ ಆಲ್‌ವೇಸ್ ಆನ್ ಡಿಸ್‌ಪ್ಲೇ ಫೀಚರ್ಸ್ ಅನ್ನು ಹೊಂದಿದೆ. ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 4 ಪ್ರೊಟೆಕ್ಷನ್ ಅನ್ನು ಪಡೆದಿದೆ.
ಗೂಗಲ್ ಪಿಕ್ಸೆಲ್ 6a ಪ್ರೊಸೆಸರ್ ಕಾರ್ಯ ವೈಖರಿ ಏನು
ಗೂಗಲ್ ಪಿಕ್ಸೆಲ್ 6a ಮೊಬೈಲ್ ಆಕ್ಟಾ ಕೋರ್ ಗೂಗಲ್ ಟೆನ್ಸರ್ SoC ಮತ್ತು ಟೈಟಾನ್ M2 ಸೆಕ್ಯುರಿಟಿ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಇದರ ಜೊತೆಗೆ ಇದು ಮಾಲಿ G78 MP20 ಸಪೋರ್ಟ್ ಅನ್ನು ಪಡೆದುಕೊಂಡಿದೆ. ಇತ್ತೀಚಿನ ಆಂಡ್ರಾಯ್ಡ್ ಓಎಸ್ ಅಪ್‌ಡೇಟ್‌ಗೆ ಸಪೋರ್ಟ್ ಪಡೆದಿದೆ.
ಹಾಗೆಯೇ ಇದು ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಈ ಪ್ರೊಸೆಸರ್ ಗೂಗಲ್ ಪಿಕ್ಸೆಲ್ 6 ಮತ್ತು ಗೂಗಲ್ ಪಿಕ್ಸೆಲ್ 6 ಪ್ರೊ ಮೊಬೈಲ್ ಗಳಿಗೂ ಕೂಡ ಪವರ್ ಒದಗಿಸಲಿದೆ. ಇದರ ಜೊತೆಗೆ ಈ ಮೊಬೈಲ್ 6GB RAM ಮತ್ತು 128 GB ಆಂತರೀಕ ಸ್ಟೋರೇಜ್ ಅನ್ನು ಪಡೆದುಕೊಂಡಿದೆ.
ಗೂಗಲ್ ಪಿಕ್ಸೆಲ್ 6a ಕ್ಯಾಮೆರಾ ಸೆನ್ಸಾರ್ ಹೀಗಿದೆ
ಗೂಗಲ್ ಪಿಕ್ಸೆಲ್ 6a ಮೊಬೈಲ್ ಹಿಂಭಾಗದಲ್ಲಿ ಎರಡು ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮೊದಲ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಪಡೆದುಕೊಂಡಿದ್ದು, ಹಾಗೆಯೇ ಸೆಕೆಂಡರಿ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಕ್ಯಾಮೆರಾವನ್ನು ಪಡೆದುಕೊಂಡಿದೆ.
ಹಾಗೆಯೇ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಈ ಫೋನ್ ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಮ್ಯಾಜಿಕ್ ಎರೇಸರ್ ಮತ್ತು ನೈಟ್‌ಸೈಟ್‌ನಂತಹ ಕೆಲವು ಸಾಫ್ಟ್‌ವೇರ್ ಆಧಾರಿತ ಕ್ಯಾಮೆರಾ ಆಯ್ಕೆಗಳನ್ನು ಒಳಗೊಂಡಿದೆ.


Click it and Unblock the Notifications








