ಜಿಯೋನಿ ಸಂಸ್ಥೆಯಿಂದ 'ಜಿಯೋನಿ K6' ಸ್ಮಾರ್ಟ್‌ಫೋನ್‌ ಲಾಂಚ್‌!

|

ಸ್ಮಾರ್ಟ್‌ಫೋನ್‌ ವಲಯದಲ್ಲಿ ಸಾಕಷ್ಟು ಭಿನ್ನ ಮಾದರಿಯ ಸ್ಮಾಟ್‌ಫೋನ್‌ಗಳು ಲಭ್ಯವಿವೆ. ಈಗಾಗಲೇ ಹಲವು ವೈವಿದ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಹಲವಾರು ಕಂಪೆನಿಗಳು ಪರಿಚಯಿಸಿವೆ. ಅಲ್ಲದೆ ಕೆಲವು ಸ್ಮಾರ್ಟ್‌ಫೋನ್‌ ಕಂಪೆನಿಗಳು ತಮ್ಮ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸಂಚಲನವನ್ನೇ ಸೃಷ್ಟಿಸುತ್ತವೆ. ಹೀಗೆ ಸಂಚಲನ ಸೃಷ್ಟಿಸಿದ ಕೆಲವು ಕಂಪೆನಿಗಳು ಕೆಲವು ವರ್ಷಗಳ ನಂತರ ತೆರೆಮರೆಗೆ ಸರಿದುಬಿಡುತ್ತವೆ. ಇಂತಹ ಕಂಪೆನಿಗಳಲ್ಲಿ ಜಿಯೋನಿ ಕಂಪೆನಿ ಕೂಡ ಒಂದಾಗಿದೆ. ಪ್ರಾರಂಭಿಕ ಹಂತದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಜಿಯೋನಿ ಕೆಲವೇ ವರ್ಷಗಳಲ್ಲಿ ತಾನು ದಿವಾಳಿ ಎಂದು ಘೊಷಿಸಿಕೊಂಡಿತ್ತು. ಆದರೆ ಕಳೆದ ಜನವರಿಯಲ್ಲಿ ಮತ್ತೆ ಮಾರುಕಟ್ಟೆಗೆ ರಿ ಎಂಟ್ರಿ ನೀಡಿದ್ದ ಜಿಯೋನಿ ಇದೀಗ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ.

ಜಿಯೋನಿ

ಹೌದು, ತಾನು ಕೆಲವು ವರ್ಷಗಳ ಹಿಂದೆ ದಿವಾಳಿ ಎಂದು ಘೋಷಿಸಿಕೊಂಡಿದ್ದ ಜಿಯೋನಿ ಈ ವರ್ಷದ ಜನವರಿಯಲ್ಲಿ,ಜಿಯೋನಿ ಸ್ಟೀಲ್ 5 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿತು. ಸದ್ಯ ಇದೀಗ, ಜಿಯೋನಿ ಬ್ರಾಂಡ್ ಮತ್ತೊಂದು ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸಾರ್ಟ್‌ಫೋನ್‌ ಅನ್ನು ಜಿಯೋನಿ K6 ಎಂದು ಹೆಸರಿಸಲಾಗಿದ್ದು, ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ ಎನ್ನಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಅನ್ನು ಹೊಂದಿದೆ. ಇದರ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಜಿಯೋನಿ K6 ಸ್ಮಾರ್ಟ್‌ಫೋನ್‌ 720 x 1520 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.2 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಎಲ್‌ಸಿಡಿ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದ್ದು, ಎಚ್‌ಡಿ ಪ್ಲಸ್‌ ಡಿಸ್‌ಪ್ಲೇ ಆಗಿದೆ. ಅಲ್ಲದೆ ಈ ಡಿಸ್‌ಪ್ಲೇಯು 271 ppi ಪಿಕ್ಸೆಲ್‌ ಸಾಂದ್ರತೆಯನ್ನ ಹೊಂದಿದ್ದು, ವಾಟರ್‌ಡ್ರಾಪ್‌ ನಾರ್ಚ್‌ ಶೈಲಿಯನ್ನ ಒಳಗೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇಯ ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತ 79.81 % ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ P60 ಚಿಪ್‌ಸೆಟ್ ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 7.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 6GB RAM + 128GB ಹಾಗೂ 8GB RAM ಮತ್ತು 256GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256GBವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಣೆ ಮಾಡಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಜಿಯೋನಿ K6 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಎರಡು ಮತ್ತು ಮೂರನೇ ಕ್ಯಾಮೆರಾಗಳ ಸೆನ್ಸಾರ್‌ ಸಾಮರ್ಥ್ಯದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇದಲ್ಲದೆ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನ ನೀಡಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಡಿಜಿಟಲ್‌ ಜೂಮ್‌, ಆಟೋ ಫ್ಲ್ಯಾಶ್, ಫೇಸ್‌ ಡಿಟೆಕ್ಷನ್‌, ಟಚ್‌ ಟು ಫೋಕಸ್‌, ನಂತಹ ಫೀಚರ್ಸ್‌ ಗಳನ್ನ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಜಿಯೋನಿ K6 ಸ್ಮಾರ್ಟ್‌ಫೋನ್‌ 4,350mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 10W ಚಾರ್ಜಿಂಗ್‌ಗೆ ಬೆಂಬಲವನ್ನು ನೀಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, 4G ನೆವರ್ಕ್‌ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ನು ಈ ಸ್ಮಾರ್ಟ್‌ಫೋನ್‌ 6GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ RMB 899 (ಸರಿಸುಮಾರು 9,500 ರೂ.)ಆಗಿದೆ. ಅಲ್ಲದೆ ಟಾಪ್-ಎಂಡ್ 8GB RAM + 256GB ಶೇಖರಣಾ ಮಾದರಿಯ ಸ್ಮಾರ್ಟ್‌ಫೋನ್‌ ಬೆಲೆ RMB 1,099 (ಅಂದಾಜು 11,620 ರೂ) ಆಗಿದೆ ಎನ್ನಲಾಗಿದೆ. ಇನ್ನು ಜಿಯೋನಿ K6 ಸ್ಮಾರ್ಟ್‌ಫೋನ್‌ ಕಪ್ಪು ಮತ್ತು ನೀಲಿ ಗ್ರೇಡಿಯಂಟ್ ಸೇರಿದಂತೆ ಎರಡು ಬಣ್ಣ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
The latest Gionee K6 phone comes with a 4,350mAh battery and triple rear cameras.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X