ಜಿಯೋನಿ M12 ಸ್ಮಾರ್ಟ್‌ಫೋನ್‌ ಬಿಡುಗಡೆ! ಕ್ವಾಡ್‌ ಕ್ಯಾಮೆರಾ ವಿಶೇಷ!

|

ಒಂದು ಕಾಲದಲ್ಲಿ ಟೆಕ್‌ ವಲಯದಲ್ಲಿ ಸಂಚಲನ ಮೂಡಿಸಿದ್ದ ಜಿಯೋನಿ ಕೆಲವೇ ವರ್ಷಗಳಲ್ಲಿ ತಾನು ದಿವಾಳಿ ಎಂದು ಘೊಷಿಸಿಕೊಂಡಿತ್ತು. ಆದರೆ ಕಳೆದ ಜನವರಿಯಲ್ಲಿ ಮತ್ತೆ ಮಾರುಕಟ್ಟೆಗೆ ರಿ ಎಂಟ್ರಿ ನೀಡಿದ್ದ ಜಿಯೋನಿ ಬಜೆಟ್‌ ಪ್ರೈಸ್‌ಟ್ಯಾಗ್‌ ಸ್ಮಾರ್ಟ್‌ಫೋನ್‌ಗಳತ್ತ ಗಮನ ಹರಿಸಿತ್ತು. ಈ ಮೂಲಕ ಮಾರುಕಟ್ಟೆಯಲ್ಲಿ ಮತ್ತೆ ತನ್ನ ಸ್ಥಾನ ಭದ್ರ ಮಾಡಿಕೊಳ್ಳಲು ಪ್ರಯತ್ನಿಸುತ್ತಿದೆ. ಇದರ ಪ್ರಯತ್ನದ ಭಾಗವಾಗಿ ಇದೀಗ ತನ್ನ ಹೊಸ ಜಿಯೋನಿ m12 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ.

ಜಿಯೋನಿ

ಹೌದು, ಜಿಯೋನಿ ಸಂಸ್ಥೆ ತನ್ನ ಹೊಸ ಜಿಯೋನಿ m12 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಪ್ರಸ್ತುತ ನೈಜೀರಿಯಾ ಮಾರುಕಟ್ಟೆಯಲ್ಲಿ ಈ ಸ್ಮಾರ್ಟ್‌ಫೋನ್‌ ಬಿಡುಗಡೆ ಆಗಿದ್ದು, ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಜೊತೆಗೆ ಇದು 5,100mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಒಳೊಂಡಿರುವ ವಿಶೇಷತೆಯೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ಜಿಯೋನಿ m12 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದ್ದು, 91% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಮೀಡಿಯಾಟೆಕ್ ಹಿಲಿಯೋ a25 ಮತ್ತು ಮೀಡಿಯಾ ಟೆಕ್ ಹಿಲಿಯೊ p22 SoC ಎಂಬ ಎರಡು ಪ್ರೊಸೆಸರ್ ಆಯ್ಕೆಗಳನ್ನ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಇದು 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ವಾಡ್‌ ರಿಯರ್‌ ಕ್ಯಾಮೆರಾ

ಕ್ವಾಡ್‌ ರಿಯರ್‌ ಕ್ಯಾಮೆರಾ

ಜಿಯೋನಿ m12 ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ gm1 ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹಾಗೂ ನಾಲ್ಕನೇ 2 ಮೆಗಾಪಿಕ್ಸೆಲ್‌ ಕ್ಯಾಮೆರಾಗಳನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 5,100mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 10W ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, 3.5 ಎಂಎಂ ಹೆಡ್‌ಫೋನ್ ಜ್ಯಾಕ್, ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಜಿಯೋನಿ m12 ಸ್ಮಾರ್ಟ್‌ಫೋನ್‌ 6GB RAM + 128GB ಶೇಖರಣಾ ಮಾದರಿಯ ಬೆಲೆ NGN 78,900 (ಸುಮಾರು ರೂ. 15,400) ಬೆಲೆಯಿದೆ. ಇನ್ನು ಹಿಲಿಯೊ p22 SoC ಪ್ರೊಸೆಸರ್‌ ಮಾದರಿಯ ಬೆಲೆ NGN 85,000 (ಸುಮಾರು ರೂ. 16,600). ಹಾಗೂ 4GB RAM + 64GB ಶೇಖರಣಾ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ ಆಯ್ಕೆಯ ಬೆಲೆ NGN 75,000 (ಸುಮಾರು ರೂ. 14,600) ಆಗಿದೆ. ಇನ್ನು ಈ ಫೋನ್‌ ಕಪ್ಪು ಮತ್ತು ಮ್ಯಾಜಿಕ್ ಗ್ರೀನ್ ಬಣ್ಣ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Gionee M12 has launched as the latest smartphone offering by the company.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X