Home
ಸುದ್ದಿಜಾಲ

ಭಾರತದಲ್ಲಿ ಜಿಯೋನಿ ಮ್ಯಾಕ್ಸ್‌ ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್‌! ಬೆಲೆ 6,999 ರೂ.!

ಜಿಯೋನಿ ಕಂಪೆನಿ ಟೆಕ್‌ ವಲಯದಲ್ಲಿ ಪ್ರಾರಂಭಿಕ ಹಂತದಲ್ಲಿ ಭಾರಿ ಸಂಚಲನ ಸೃಷ್ಟಿಸಿ ನಂತರ ತನ್ನನ್ನು ತಾನೇ ದಿವಾಳಿ ಎಂದು ಘೋಷಿಸಿಕೊಂಡಿತ್ತು. ಆದರೆ ಕಳೆದ ವರ್ಷ ಜನವರಿ ತಿಂಗಳಲ್ಲಿ ಮತ್ತೇ ರೀ ಎಂಟ್ರಿ ನೀಡಿ ಸ್ಮಾರ್ಟ್‌ಫೋನ್‌ ಪ್ರಿಯರ ಗಮನ ಸೆಳೆದಿತ್ತು. ಸದ್ಯ ಇದೀಗ ತನ್ನ ಹೊಸ ಜಿಯೋನಿ ಮ್ಯಾಕ್ಸ್ ಪ್ರೊ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ.

ಜಿಯೋನಿ

ಹೌದು, ಜಿಯೋನಿ ಸಂಸ್ಥೆ ತನ್ನ ಹೊಸ ಜಿಯೋನಿ ಮ್ಯಾಕ್ಸ್‌ ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಲಾಂಚ್‌ ಮಾಡಿದೆ. ಈ ಹ್ಯಾಂಡ್‌ಸೆಟ್ "ಹೊಸ-ವಯಸ್ಸಿನ ಗ್ಯಾಜೆಟ್ ಪ್ರಿಯರನ್ನು" ಗುರಿಯಾಗಿರಿಸಿಕೊಂಡು ವಿನ್ಯಾಸಗೊಳಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.52 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಜಿಯೋನಿ ಮ್ಯಾಕ್ಸ್‌ ಪ್ರೊ ಸ್ಮಾರ್ಟ್‌ಫೋನ್‌ 720x1560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 19.5:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತ 84.14% ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ ಯುನಿಸಾಕ್ 9863A SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 3GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಳಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದಲ್ಲದೆ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಪ್ರೈಮರಿ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ‘ಬೊಕೆ ಲೆನ್ಸ್' ಹೊಂದಿದೆ. ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಜಿಯೋನಿ ಮ್ಯಾಕ್ಸ್ ಪ್ರೊ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಫೋನ್ 60 ಗಂಟೆಗಳ ಟಾಕ್-ಟೈಮ್ ಅನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ 4.2, 3.5mm ಹೆಡ್‌ಫೋನ್ ಜ್ಯಾಕ್ ಮತ್ತು ಚಾರ್ಜಿಂಗ್‌ಗಾಗಿ ಮೈಕ್ರೋ-ಯುಎಸ್‌ಬಿ ಪೋರ್ಟ್ ಸೇರಿವೆ. ಇದು ಮೀಸಲಾದ ಗೂಗಲ್ ಅಸಿಸ್ಟೆಂಟ್ ಬಟನ್ ಮತ್ತು ಫೇಸ್ ಅನ್ಲಾಕ್‌ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಜಿಯೋನಿ ಮ್ಯಾಕ್ಸ್ ಪ್ರೊ ಅನ್ನು ಫ್ಲಿಪ್‌ಕಾರ್ಟ್‌ನಲ್ಲಿ ಬಿಡುಗಡೆ ಮಾಡಲಾಗಿದ್ದು, ಇದು ಮಾರ್ಚ್ 8 ರಿಂದ ಮಾರಾಟವಾಗಲಿದೆ. ಇದರ ಬೆಲೆ 3GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಮಾದರಿಗೆ 6,999 ರೂ.ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ನೀಲಿ, ಕಪ್ಪು ಮತ್ತು ಕೆಂಪು ಎಂಬ ಮೂರು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Gionee Max Pro was launched in India on Monday, expanding the Chinese technology company's entry-level smartphone offerings in the country.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+