ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಖರೀದಿಸುವವರಿಗೆ ಅಮೆಜಾನ್‌ನಲ್ಲಿ ಬಿಗ್‌ ಆಫರ್‌!

|

ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಖರೀದಿಸುವವರಿಗೆ ಅಮೆಜಾನ್‌ ವೆಬ್‌ಸೈಟ್‌ ಗುಡ್‌ನ್ಯೂಸ್‌ ನೀಡಿದೆ. ಆನ್‌ಲೈನ್‌ ಶಾಪಿಂಗ್‌ ಪ್ರಿಯರ ನೆಚ್ಚಿನ ತಾಣ ಎನಿಸಿಕೊಂಡಿರುವ ಅಮೆಜಾನ್‌ ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಮೇಲೆ ಬಿಗ್‌ ಆಫರ್‌ ಅನ್ನು ನೀಡುತ್ತಿದೆ. ಅಮೆಜಾನ್‌ನಲ್ಲಿ ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಖರೀದಿಸುವವರು 4 ಸಾವಿರ ರೂ.ವರೆಗೆ ಡಿಸ್ಕೌಂಟ್‌ ಅನ್ನು ಪಡೆದುಕೊಳ್ಳಬಹುದಾಗಿದೆ. ಈ ಆಫರ್‌ ಎಲ್ಲಿಯವರೆಗೆ ಲಭ್ಯವಿರಲಿದೆ ಎಂಬುದನ್ನು ಅಮೆಜಾನ್‌ ಇನ್ನ ಸ್ಪಷ್ಟಪಡಿಸಿಲ್ಲ.

ಅಮೆಜಾನ್‌

ಹೌದು, ಅಮೆಜಾನ್‌ ತಾಣದಲ್ಲಿ ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಆಫರ್‌ ಅನ್ನು ಪಡೆದುಕೊಂಡಿದೆ. ಆದರಿಂದ ಅಮೆಜಾನ್‌ನಲ್ಲಿ ಇಂಡಿಯಾ ವೆಬ್‌ಸೈಟ್‌ನಲ್ಲಿ ಈ ಸ್ಮಾರ್ಟ್‌ಫೋನ್ ಕಡಿಮೆ ಬೆಲೆಗೆ ಮಾರಾಟವಾಗುತ್ತಿದೆ. ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಖರೀದಿಯ ಮೇಲೆ ಗ್ರಾಹಕರು 3,000 ರೂಪಾಯಿ ಮೌಲ್ಯದ ಅಮೆಜಾನ್‌ ಕೂಪನ್ ಅನ್ನು ಪಡೆದುಕೊಳ್ಳಬಹುದಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ ಗ್ರಾಹಕರು ICICI ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳ ಮೇಲೆ 1,000 ರೂಪಾಯಿಗಳ ರಿಯಾಯಿತಿ ದೊರೆಯಲಿದೆ. ಹಾಗಾದ್ರೆ ಅಮೆಜಾನ್‌ನಲ್ಲಿ ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಅನ್ನು ಯಾವ ಬೆಲೆಗೆ ಖರೀದಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಆಫರ್‌ ಏನಿದೆ?

ಆಫರ್‌ ಏನಿದೆ?

ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಮೇಲೆ ಅಮೆಜಾನ್‌ನಲ್ಲಿ ನೀವು 4 ಸಾವಿರ ರೂ.ವರೆಗೆ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಈ ರಿಯಾಯಿತಿ ನಿಮಗೆ ನೇರವಾಗಿ ದೊರೆಯುವುದಿಲ್ಲ. ಬದಲಿಗೆ ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಖರೀದಿಯ ಮೇಲೆ ಗ್ರಾಹಕರು 3,000 ರೂಪಾಯಿ ಮೌಲ್ಯದ ಅಮೆಜಾನ್‌ ಕೂಪನ್ ಅನ್ನು ಪಡೆದುಕೊಳ್ಳಬಹುದು. ಅಲ್ಲದೆ ICICI ಬ್ಯಾಂಕ್ ಕ್ರೆಡಿಟ್ ಕಾರ್ಡ್‌ ಮೂಲಕ ಖರೀದಿಸಿದರೆ 1,000ರೂ. ರಿಯಾಯಿತಿ ದೊರೆಯಲಿದೆ. ಈ ಎರಡು ಆಫರ್‌ಗಳ ಮೂಲಕ ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ 4 ಸಾವಿರ ಕಡಿಮೆಯಾಗಲಿದೆ.

ಆಫರ್‌ ನಂತರದ ಬೆಲೆ ಎಷ್ಟು?

ಆಫರ್‌ ನಂತರದ ಬೆಲೆ ಎಷ್ಟು?

ಇದರಿಂದ ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 8GB RAM + 128GB ಮಾದರಿಯು 38,999ರೂ.ಗಳಿಗೆ ಬದಲಾಗಿ 34,999ರೂ.ಬೆಲೆಗೆ ಲಭ್ಯವಾಗಲಿದೆ. ಹಾಗೆಯೇ 12GB RAM ಮತ್ತು 256GB ಸ್ಟೋರೇಜ್‌ ಮಾದರಿಯು 42,999ರೂ.ಗಳಿಗೆ ಬದಲಾಗಿ 38,999ರೂ.ಬೆಲೆಯಲ್ಲಿ ದೊರೆಯಲಿದೆ. ಇದಲ್ಲದೆ ಒನ್‌ಪ್ಲಸ್‌ 10R 5G ಎಂಡ್ಯೂರೆನ್ಸ್ ಆವೃತ್ತಿಯ ಮಾದರಿ 12GB RAM + 256GB ಆಯ್ಕೆಯು 43,999ರೂ.ಗಳಿಗೆ ಬದಲಾಗಿ 39,999ರೂ.ಬೆಲೆಗೆ ದೊರೆಯಲಿದೆ. ಇದರಲ್ಲಿ ಒನ್‌ಪ್ಲಸ್‌ 10R 5G ಫೋನ್‌ ಸಿಯೆರಾ ಬ್ಲಾಕ್ ಮತ್ತು ಫಾರೆಸ್ಟ್ ಗ್ರೀನ್ ಬಣ್ಣದ ಆಯ್ಕೆಯಲ್ಲಿ ಲಭ್ಯವಿದೆ. ಹಾಗೆಯೇ ಎಂಡ್ಯೂರೆನ್ಸ್ ಆವೃತ್ತಿಯ ಮಾದರಿ ಕಪ್ಪು ಮತ್ತು ಹಸಿರು ಬಣ್ಣದ ಆಯ್ಕೆಗಳಲ್ಲಿ ದೊರೆಯಲಿದೆ. ಇನ್ನು ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಏನೆಲ್ಲಾ ಫೀಚರ್ಸ್‌ ಹೊಂದಿದೆ ಅನ್ನೊದನ್ನ ಕೆಳಗಿನ ಹಂತಗಳಲ್ಲಿ ತಿಳಿಯಿರಿ.

ಡಿಸ್‌ಪ್ಲೇ ರಚನೆ ಹೇಗಿದೆ?

ಡಿಸ್‌ಪ್ಲೇ ರಚನೆ ಹೇಗಿದೆ?

ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ HD+ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು 120Hz ಡೈನಾಮಿಕ್ ರಿಫ್ರೆಶ್ ರೇಟ್ ಮತ್ತು 720Hz ಟಚ್ ರೆಸ್ಪಾನ್ಸ್ ರೇಟ್‌ ಅನ್ನು ಹೊಂದಿದೆ. ಜೊತೆಗೆ 2.5D ಕರ್ವ್ಡ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಪಡೆದುಕೊಂಡಿದೆ.

ಪ್ರೊಸೆಸರ್‌ ದಕ್ಷತೆ ಏನು?

ಪ್ರೊಸೆಸರ್‌ ದಕ್ಷತೆ ಏನು?

ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100-ಮ್ಯಾಕ್ಸ್ SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಆಧಾರಿತ OxygenOS 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಪ್ರೊಸೆಸರ್‌ 20% ಸುಧಾರಿತ GPU ಕಾರ್ಯಕ್ಷಮತೆ, 25% ಸುಧಾರಿತ ವಿದ್ಯುತ್ ದಕ್ಷತೆ ಮತ್ತು 80% ಉತ್ತಮ AI ಕಾರ್ಯಕ್ಷಮತೆಯನ್ನು ನೀಡುತ್ತದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಕ್ಯಾಮೆರಾ ಸೆಟ್‌ಅಪ್‌ ಯಾವುದು?

ಕ್ಯಾಮೆರಾ ಸೆಟ್‌ಅಪ್‌ ಯಾವುದು?

ಒನ್‌ಪ್ಲಸ್‌ 10R 5G ಇದು ಸುಗಮ ಗೇಮಿಂಗ್ ಕಾರ್ಯಕ್ಷಮತೆಯನ್ನು ನೀಡುತ್ತದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೋನಿ IMX355 ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ GC02M1 ಮ್ಯಾಕ್ರೋ ಲೆನ್ಸ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL S5K3P9 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಸಾಮರ್ಥ್ಯ ಎಷ್ಟು? ಇತರೆ ಫೀಚರ್ಸ್‌ಗಳೇನು?

ಬ್ಯಾಟರಿ ಸಾಮರ್ಥ್ಯ ಎಷ್ಟು? ಇತರೆ ಫೀಚರ್ಸ್‌ಗಳೇನು?

ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಎಂಡ್ಯೂರೆನ್ಸ್ ಆವೃತ್ತಿಯ ಮಾದರಿ 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 150W SuperVOOC ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ. ಇನ್ನು 80W SuperVOOC ವೇಗದ ಚಾರ್ಜಿಂಗ್ ಹೊಂದಿರುವ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ.

ಅಮೆಜಾನ್‌

ಇದಲ್ಲದೆ ಅಮೆಜಾನ್‌ ವೆಬ್‌ಸೈಟ್‌ ತನ್ನ ಪ್ರೈಮ್‌ ಗ್ರಾಹಕರಿಗಾಗಿ ನಡೆಸುವ ವಿಶೇಷ ಸೇಲ್‌ ಅಮೆಜಾನ್‌ ಪ್ರೈಮ್‌ ಡೇ ಸೇಲ್‌ ಡೇಟ್‌ ಅನ್ನು ಈಗಾಗಲೇ ಬಹಿರಂಗ ಪಡಿಸಿದೆ. ಈ ಸೇಲ್‌ ಇದೇ ಜುಲೈ 23-24 ರ ನಡುವೆ ನಡೆಯಲಿದೆ. ಈ ಸೇಲ್‌ನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಅನೇಕ ಪ್ರಾಡಕ್ಟ್‌ಗಳ ಮೇಲೆ ವಿಶೇಷ ರಿಯಾಯಿತಿಗಳು, ಡೀಲ್‌ಗಳು ಹಾಗೂ ಆಫರ್‌ಗಳನ್ನು ನೀಡಲಾಗುತ್ತದೆ. ಈ ಸೇಲ್‌ ಭಾರತದಲ್ಲಿ ಜುಲೈ 23 ರಂದು ಮಧ್ಯರಾತ್ರಿ 12 ಗಂಟೆಗೆ ಪ್ರಾರಂಭವಾಗಲಿದೆ. 48 ಗಂಟೆಗಳ ಕಾಲ ನಡೆಯುವ ಈ ಸೇಲ್‌ನಲ್ಲಿ 30,000 ಕ್ಕೂ ಹೆಚ್ಚು ಹೊಸ ಉತ್ಪನ್ನಗಳು ಬಿಡುಗಡೆಯಾಗಲಿವೆ ಎಂದು ಅಮೆಜಾನ್‌ ಹೇಳಿದೆ.

Most Read Articles
Best Mobiles in India

English summary
On Amazon, buyers can now get an Amazon coupon worth Rs 3,000 on the purchase of the handset.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X