Google I/O 2022: ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ ಅನಾವರಣ!
ಸರ್ಚ್ ಇಂಜಿನ್ ದೈತ್ಯ ಗೂಗಲ್‌ನ ವಾರ್ಷಿಕ ಸಮ್ಮೆಳನ ಗೂಗಲ್ I/O ಮೇ 11ರಿಂದ ಪ್ರಾರಂಭವಾಗಿದೆ. ಇನ್ನು ಈ ಸಮ್ಮೇಳನದಲ್ಲಿ ಗೂಗಲ್‌ನ ಅನೇಕ ಪ್ರಾಡಕ್ಟ್‌ಗಳು ಹಾಗೂ ಫೀಚರ್ಸ್‌ಗಳನ್ನು ಪರಿಚಯಿಸಲಾಗ್ತಿದೆ. ಸದ್ಯ ಗೂಗಲ್ ಇದೇ ಸಮ್ಮೇಳನದಲ್ಲಿ ಗೂಗಲ್ ಪಿಕ್ಸೆಲ್ 6a ಫೋನ್ ಅನಾವರಣಗೊಳಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕಂಪನಿಯ ಇನ್-ಹೌಸ್ ಟೆನ್ಸರ್ ಪ್ರೊಸೆಸರ್ ಮತ್ತು ಟೈಟಾನ್ ಎಂ2 ಸೆಕ್ಯುರಿಟಿ ಕೊಪ್ರೊಸೆಸರ್ ಅನ್ನು ಒಳಗೊಂಡಿದೆ.

ಹೌದು, ಗೂಗಲ್ ಕಂಪೆನಿ ತನ್ನ ಹೊಸ ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಜೊತೆಗೆ 4,410mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 24 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ. ಅಲ್ಲದೆ 72 ಗಂಟೆಗಳವರೆಗೆ ಬ್ಯಾಕಪ್ ಅನ್ನು ನೀಡುವ ಬ್ಯಾಟರಿ ಸೇವ್ ಮೋಡ್ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ 6.1 ಇಂಚಿನ ಫುಲ್ HD+ OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಮತ್ತು 60Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ.

ಪ್ರೊಸೆಸರ್ ಯಾವುದು?
ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಗೂಗಲ್ ಟೆನ್ಸರ್ SoC ಮತ್ತು Titan M2 ಸೆಕ್ಯುರಿಟಿ ಕೊಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕನಿಷ್ಠ ಐದು ವರ್ಷಗಳ ಸೆಕ್ಯುರಿಟಿ ಅಪ್ಡೇಟ್ಸ್‌ಗಳನ್ನು ಪಡೆಯಲಿದೆ.

ಕ್ಯಾಮೆರಾ ವಿಶೇಷ
ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12.2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಈ ಫೋನ್‌ನ ರಿಯರ್ ಕ್ಯಾಮೆರಾ 30fps ನಲ್ಲಿ 4K ವೀಡಿಯೊ ರೆಕಾರ್ಡಿಂಗ್ ಅನ್ನು ನೀಡುತ್ತದೆ. ಆದರೆ ಸೆಲ್ಫಿ ಕ್ಯಾಮೆರಾ 30fps ನಲ್ಲಿ 1080p ವರೆಗೆ ವೀಡಿಯೊ ರೆಕಾರ್ಡಿಂಗ್ ಬೆಂಬಲವನ್ನು ನೀಡುತ್ತದೆ.

ಬ್ಯಾಟರಿ ಮತ್ತು ಇತರೆ
ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ 4,410mAh ಬ್ಯಾಟರಿಯನ್ನುಹೊಂದಿದೆ. ಇದು 24 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಮತ್ತು 72 ಗಂಟೆಗಳವರೆಗೆ ಬ್ಯಾಕಪ್ ಅನ್ನು ಒಳಗೊಂಡಿರುವ ಬ್ಯಾಟರಿ ಸೇವರ್ ಮೋಡ್ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್, ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾಋ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ ಬೆಲೆ $449 (ಸುಮಾರು 34,800ರೂ)ಆಗಿದೆ. ಈ ಸ್ಮಾರ್ಟ್‌ಫೋನ್ ಚಾಕ್, ಚಾರ್ಕೋಲ್ ಮತ್ತು ಸೇಜ್ ಬಣ್ಣ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಇದು ಜುಲೈ 21 ರಿಂದ ಯುಎಸ್‌ನಲ್ಲಿ ಫ್ರೀ ಆರ್ಡರ್‌ಗೆ ಲಭ್ಯವಿರುತ್ತದೆ ಎಂದು ಕಂಪನಿ ತಿಳಿಸಿದೆ. ಇನ್ನು ಭಾರತ ಸೇರಿದಂತೆ ಇತರ ಮಾರುಕಟ್ಟೆಗಳಲ್ಲಿ ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ ಬೆಲೆ ಮತ್ತು ಲಭ್ಯತೆಯ ಬಗ್ಗೆ ಯಾವುದೇ ಮಾಹಿತಿಯನ್ನು ಗೂಗಲ್ ಬಹಿರಂಗಪಡಿಸಿಲ್ಲ.


Click it and Unblock the Notifications








