ಕನ್ನಡದಲ್ಲೇ ಕನ್ನಡಿಗರ ಕ್ಷಮೆ ಕೇಳಿದ ಟೆಕ್ ದೈತ್ಯ ಗೂಗಲ್!

|

ಕನ್ನಡ ಭಾಷೆಗೆ ಅಪಮಾನ ಮಾಡಿರುವ ಬಗ್ಗೆ ಕನ್ನಡಿಗರು ಗೂಗಲ್‌ಗೆ ಚಾಟಿ ಬೀಸಿದ ಬೆನ್ನಲ್ಲೇ, ಗೂಗಲ್ ಕನ್ನಡಿಗರ ಕ್ಷಮೆ ಕೇಳಿ ವಿವಾದ ಸರಿಪಡಿಸಿದೆ. ಗುರುವಾರ ಬೆಳಗ್ಗೆಯಿಂದ ಗೂಗಲ್ ವಿರುದ್ಧ ಕನ್ನಡಿಗರು, ನೆಟ್ಟಿಗರು ಗೂಗಲ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಕನ್ನಡದಲ್ಲೇ ಕನ್ನಡಿಗರ ಕ್ಷಮೆ ಕೇಳಿದ ಟೆಕ್ ದೈತ್ಯ ಗೂಗಲ್!

ಗೂಗಲ್‌ನಲ್ಲಿ ಸರ್ಚ್ ಮಾಡಿದಾಗ ಕನ್ನಡ ಭಾಷೆಯನ್ನು ಕೊಳಕು ಭಾಷೆ ಎಂದು ಬಿಂಬಿಸಲಾಗಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗಿತ್ತು. ಕನ್ನಡಿಗರು ಆಕ್ರೋಶ ಹೊರಹಾಕಿದ್ದರು. ಗುರುವಾರ ರಾತ್ರಿ ಗೂಗಲ್ ಇಂಡಿಯಾ ಈ ವಿವಾದದ ಬಗ್ಗೆ ಸ್ಪಷ್ಟನೆಯನ್ನು ನೀಡಿದೆ. ಕನ್ನಡಿಗರ ಕ್ಷಮೆ ಕೇಳಿ ಟ್ವೀಟ್ ಮಾಡಿದೆ.

ಈ ಕುರಿತು ಟ್ವಿಟ್ ಮಾಡಿರುವ ಗೂಗಲ್, ಹುಡುಕುವುದು ಯಾವಾಗಲೂ ಪರಿಪೂರ್ಣವಾಗಿರುವುದಿಲ್ಲ. ಕೆಲವೊಮ್ಮೆ ಇಂಟರ್‍ನೆಟ್ ನಲ್ಲಿ ನಿರ್ದಿಷ್ಟವಾದ ಹುಡುಕಾಟಗಳಿಗೆ ಬರುವ ಫಲಿತಾಂಶಗಳು ಆಶ್ಚರ್ಯವನ್ನುಂಟು ಮಾಡುತ್ತವೆ. ಇದು ಸೂಕ್ತವಲ್ಲ ಎಂಬುದು ನಮಗೆ ಗೊತ್ತು. ಆದರೆ ಯಾವುದೇ ಒಂದು ಸಮಸ್ಯೆ ಎದುರಾದಾಗ ಮತ್ತು ನಮ್ಮ ಗಮನಕ್ಕೆ ಬಂದಾಗ ನಾವು ಕ್ಷಿಪ್ರವಾಗಿ ಸಮರ್ಪಕ ಕ್ರಮ ತೆಗೆದುಕೊಳ್ಳುತ್ತೇವೆ. ನಮ್ಮ ಅಲ್ಗೊರಿಧಂ ಅನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಸದಾ ಕ್ರಿಯಾಶೀಲವಾಗಿರುವುದನ್ನು ಮುಂದುವರಿಸಿದ್ದೇವೆ. ತಪ್ಪು ಅರ್ಥ ಬಂದಿರುವುದಕ್ಕೆ ಮತ್ತು ಯಾವುದೇ ಭಾವನೆಗಳಿಗೆ ಧಕ್ಕೆಯಾಗಿದ್ದರೆ ನಾವು ಕ್ಷಮೆಯಾಚಿಸುತ್ತೇವೆ ಎಂದು ಹೇಳಿದೆ.

ವಿವಾದದ ಕುರಿತು ಪ್ರತಿಕ್ರಿಯೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಅರವಿಂದ ಲಿಂಬಾವಳಿ, 2500 ವರ್ಷಗಳ ಹಿಂದೆಯೇ ಕನ್ನಡ ಭಾಷೆ ಅಸ್ತಿತ್ವದಲ್ಲಿತ್ತು ಎಂದು ಸಾಬೀತಾಗಿದೆ. ಜೊತೆಗೆ ಕನ್ನಡಕ್ಕೆ ತನ್ನದೇ ಆದ ಇತಿಹಾಸವಿದ್ದು, ಕನ್ನಡ ಭಾಷೆ ಕನ್ನಡಿಗರ ಹೆಮ್ಮೆ" ಎಂದು ಫೇಸ್ ಬುಕ್ ಪೋಸ್ಟ್ ಹಾಕಿದ್ದರು.

ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿ, ಭಾಷೆ ವಿಚಾರದಲ್ಲಿ ಗೂಗಲ್ ಇಂಡಿಯಾ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? 'Ugliest language in India' ಎಂಬ ಹುಡುಕಾಟಕ್ಕೆ ಕನ್ನಡ ಎಂದು ಉತ್ತರ ನೀಡುತ್ತಿದ್ದ ವೆಬ್‌ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು ಗೂಗಲ್‌ಗೆ ಅಸಾಧ್ಯವೇ?" ಎಂದು ಪ್ರಶ್ನೆ ಮಾಡಿದ್ದರು.

Best Mobiles in India

English summary
Google India Apologises For Kannada Being Search Result For ‘ugliest language’.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X