ಗೂಗಲ್ ಪಿಕ್ಸಲ್ 4a ಬಿಡುಗಡೆಗೆ ಸಜ್ಜು: ಅಚ್ಚರಿ ಮೂಡಿಸಿದ ಫೋನ್ ಬೆಲೆ!
ಟೆಕ್ ಕ್ಷೇತ್ರದ ದೊಡ್ಡಣ್ಣ ಗೂಗಲ್ ಪಿಕ್ಸಲ್ ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದ್ದು, ಹೈ ಎಂಡ್ ಫೀಚರ್ಸ್‌ಗಳಿಂದ ಗಮನ ಸೆಳೆದಿವೆ. ಆ ಸರಣಿಯ ಮುಂದುವರಿದ ಭಾಗವಾಗಿ 2019ರ ಕೊನೆಯಲ್ಲಿ ಗೂಗಲ್ ಪಿಕ್ಸಲ್ 4 ಸ್ಮಾರ್ಟ್‌ಫೋನ್ ಸರಣಿಯನ್ನು ಅನಾವರಣ ಮಾಡಿದ್ದು, ಪಿಕ್ಸಲ್ 4 ಸರಣಿಯಲ್ಲಿನ ಪಿಕ್ಸಲ್ 4a ಸ್ಮಾರ್ಟ್‌ಫೋನ್ ಇದೀಗ ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಡಲು ಸಜ್ಜಾಗಿದೆ.

ಹೌದು, ಸಾಕಷ್ಟು ಕುತೂಹಲ ಮೂಡಿಸಿರುವ ಗೂಗಲ್ ಪಿಕ್ಸಲ್ 4a ಸ್ಮಾರ್ಟ್‌ಫೋನ್ ಇದೇ ಮಾರ್ಚ್ ಅಂತ್ಯದೊಳಗೆ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ. ಈ ಸ್ಮಾರ್ಟ್‌ಫೋನ್ ಅಗ್ಗದ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಳ್ಳಲಿದ್ದು, ಈ ಹಿಂದಿನ ಗೂಗಲ್ ಪಿಕ್ಸಲ್ 3a ಫೋನ್ ಬೆಲೆಯನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಇನ್ನು ಈ ಫೋನ್ ಡ್ಯುಯನ್ ಕ್ಯಾಮೆರಾ ಸೆಟ್‌ಅಪ್ ರಚನೆ ಹೊಂದಿದ್ದು, ಅವು ಕ್ರಮವಾಗಿ 12.2ಎಂಪಿ + 8ಎಂಪಿ ಸೆನ್ಸಾರ್‌ನಲ್ಲಿವೆ.

ಪಿಕ್ಸಲ್ 4a ಸ್ಮಾರ್ಟ್‌ಫೋನ್ ಪಂಚ್ ಹೋಲ್ ಡಿಸ್‌ಪ್ಲೇ ರಚನೆಯನ್ನು ಹೊಂದಿದ ಗೂಗಲ್‌ನ ಮೊದಲ ಸ್ಮಾರ್ಟ್‌ಫೋನ್ ಆಗಲಿದ್ದು, ಈ ಬಾರಿಯ I/O 2020 ಕಾರ್ಯಕ್ರಮದಲ್ಲಿ ಬಿಡುಗಡೆ ಆಗಬೇಕಿತ್ತು. ಕೊರೊನಾ ವೈರಸ್ ಭಿತಿಯಿಂದ I/O 2020 ಕಾರ್ಯಕ್ರಮ ರದ್ದು ಮಾಡಿತು. ಈ ನಿಟ್ಟಿನಲ್ಲಿ ಇದೇ ಮಾರ್ಚ್ ತಿಂಗಳ ಅಂತ್ಯದೊಳಗೆ ಲಾಂಚ್ ಮಾಡಲು ಸಜ್ಜಾಗಿದೆ. ಇದೊಂದು ಬಜೆಟ್ ಫೋನ್ ಕೇಟಗರಿಯಲ್ಲಿ ಕಾಣಿಸಿಕೊಳ್ಳಲಿದೆ ಎಂದು ಹೇಳಾಗಿದೆ. ಹಾಗಾದರೆ ಗೂಗಲ್ ಪಿಕ್ಸಲ್ 4a ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ಡಿಸೈನ್
ಗೂಗಲ್ ಪಿಕ್ಸಲ್ 4a ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 5.8 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. LCD ಮಾದರಿಯ ಡಿಸ್‌ಪ್ಲೇ ವಿನ್ಯಾಸ ಇದ್ದು, ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 444 ppi ಆಗಿದೆ. ಹಾಗೆಯೇ ಸ್ಕ್ರೀನ್‌ನಿಂದ ಬಾಹ್ಯ ಬಾಡಿಯ ನಡುವಿನ ಅಂತರದ ಅನುಪಾವು ಶೇ. 82.9% ಆಗಿದೆ.

ಪ್ರೊಸೆಸರ್ ಯಾವುದು
ಗೂಗಲ್ ಪಿಕ್ಸಲ್ 4a ಸ್ಮಾರ್ಟ್‌ಫೋನ್ ಸ್ನ್ಯಾಪ್‌ಡ್ರಾಗನ್ 730 ಪ್ರೊಸೆಸರ್ ಬಲವನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್ ಸಪೋರ್ಟ್ ಸಹ ಪಡೆದಿದೆ. 6GB RAM ಮತ್ತು 64GB ಆಂತರಿಕ ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು ವಿಸ್ತರಿಸುವ ಅವಕಾಶ ಸಹ ಇದೆ.

ಕ್ಯಾಮೆರಾ ಸೆನ್ಸಾರ್
ಗೂಗಲ್ ಪಿಕ್ಸಲ್ 4a ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 12.2 ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಇನ್ನೊಂದು ಕ್ಯಾಮೆರಾವು 8ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಲ್ಫಿಗಾಗಿ ಸಹ 8ಎಂಪಿ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾ ನೀಡಲಾಗಿದೆ. ಇದರೊಂದಿಗೆ ಎಡಿಟ್ ಆಯ್ಕೆಗಳು ಇವೆ.

ಬ್ಯಾಟರಿ ಬಾಳಿಕೆ
ಗೂಗಲ್ ಪಿಕ್ಸಲ್ 4a ಸ್ಮಾರ್ಟ್‌ಫೋನ್ 3300 mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಇದರೊಂದಿಗೆ ವೇಗದ ಚಾರ್ಜಿಂಗ್ ಸೌಲಭ್ಯವನ್ನು ನೀಡಲಾಗಿದೆ. ಉಳಿದಂತೆ ವೈಫೈ, ಬ್ಲೂಟೂತ್, ಹಾಟ್‌ಸ್ಪಾಟ್, ಜಿಪಿಎಸ್ ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬೆಲೆ ಎಷ್ಟಿರಬಹುದು?
ಸದ್ಯ ಗೂಗಲ್ ಪಿಕ್ಸಲ್ 4a ಸ್ಮಾರ್ಟ್‌ಫೋನ್ ತನ್ನ ಬೆಲೆಯಿಂದಲೇ ಸದ್ದು ಮಾಡಿದೆ. ಈ ಸ್ಮಾರ್ಟ್‌ಫೋನ್ ಹಿಂದಿನ ಪಿಕ್ಸಲ್ 3a ಫೋನಿನ ಪ್ರೈಸ್‌ಟ್ಯಾಗ್‌ನಲ್ಲಿಯೇ ಕಾಣಿಸಲಿಕೊಳ್ಳುವ ಸಾಧ್ಯತೆಗಳಿದೆ. ಲೀಕ್ ಮಾಹಿತಿ ಪ್ರಕಾರ ಈ ಫೋನ್ ಬೆಲೆಯು 29,660ರೂ.ಗಳು ಆಗಿರಬಹುದು ಎಂದು ನಿರೀಕ್ಷಿಸಲಾಗಿದೆ.


Click it and Unblock the Notifications








