ಭಾರತದಲ್ಲಿ ಬಹು ನಿರೀಕ್ಷಿತ ಗೂಗಲ್‌ ಪಿಕ್ಸಲ್‌ 4a ಸ್ಮಾರ್ಟ್‌ಫೋನ್‌ ಲಾಂಚ್‌!

|

ಸರ್ಚ್‌ ಇಂಜಿನ್ ದೈತ್ಯ ಗೂಗಲ್ ಕಂಪನಿಯ ಬಹುನಿರೀಕ್ಷಿತ ಗೂಗಲ್ ಪಿಕ್ಸಲ್ 4a ಸ್ಮಾರ್ಟ್‌ಫೋನ್ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಗೂಗಲ್ ಪಿಕ್ಸಲ್ 3a ಸರಣಿಯ ಮುಂದುವರಿದ ಆವೃತ್ತಿಯಾಗಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಹೈ ಎಂಡ್ ಫೀಚರ್ಸ್‌ಗಳನ್ನು ಒಳಗೊಂಡಿದೆ. ಇದು 5.8 ಇಂಚಿನ ಫುಲ್‌ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದ್ದು,443PPI ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ನಲ್ಲಿ ಮಾರಾಟವಾಗಲಿದ್ದು, ಇದೇ ಆಕ್ಟೋಬರ್‌ 16ರಿಂದ ಖರೀದಿಸಬಹುದಾಗಿದೆ.

ಗೂಗಲ್ ಪಿಕ್ಸಲ್ 4a

ಹೌದು, ಗೂಗಲ್ ಸಂಸ್ಥೆಯು ಗೂಗಲ್ ಪಿಕ್ಸಲ್ 4a ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನ್ಯಾಪ್‌ಡ್ರಾಗನ್‌ 730G ಪ್ರೊಸೆಸರ್‌ ಬಲವನ್ನು ಪಡೆದಿದೆ. ಹಾಗೆಯೇ 6GB RAM ಮತ್ತು 128GB ಆಂತರೀಕ ಸ್ಟೋರೇಜ್ ಈ ಸ್ಮಾರ್ಟ್‌ಫೋನಿನ ಪ್ರಮುಖ ಹೈಲೈಟ್ಸ್‌ಗಳಲ್ಲಿ ಒಂದಾಗಿದೆ. ಇನ್ನುಳಿದಂತೆ ಗೂಗಲ್ ಪಿಕ್ಸಲ್ 4a ಫೀಚರ್ಸ್‌ಗಳೆನು ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ಗೂಗಲ್ ಪಿಕ್ಸಲ್ 4a ಸ್ಮಾರ್ಟ್‌ಫೋನ್‌ 1080 x 2340 ಪಿಕ್ಸಲ್ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿರುವ 5.8 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. OLED ಮಾದರಿಯ ಡಿಸ್‌ಪ್ಲೇ ವಿನ್ಯಾಸ ಇದ್ದು, ಯಾವಾಗಲೂ ಆನ್‌ ಇರುವ ಡಿಸ್‌ಪ್ಲೇ ಬೆಂಬಲವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 443ppi ಆಗಿದೆ. ಹಾಗೆಯೇ ಡಿಸ್‌ಪ್ಲೇಯ ಅನುಪಾವು 19.5:9 ಆಗಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ಇದು ಕ್ವಾಲ್ಕಾಮ್‌ ಸ್ನ್ಯಾಪ್‌ಡ್ರಾಗನ್ 730G SoC ಪ್ರೊಸೆಸರ್ ಬಲವನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್‌ ಸಪೋರ್ಟ್‌ ಸಹ ಪಡೆದಿದೆ. ಅಲ್ಲದೆ ಆಂಡ್ರಾಯ್ಡ್‌ 11ಗೆ ಸಹ ಅಪ್‌ಗ್ರೇಡ್‌ ಮಾಡಬಹುದಾಗಿದೆ. 6GB RAM ಮತ್ತು 128GB ಆಂತರಿಕ ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು ವಿಸ್ತರಿಸುವ ಅವಕಾಶ ನೀಡಿಲ್ಲ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಗೂಗಲ್‌ ಪಿಕ್ಸಲ್‌ 4a ಸ್ಮಾರ್ಟ್‌ಫೋನ್‌ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ಕ್ಯಾಮೆರಾವನ್ನು ಹೊಂದಿದೆ. ಇದು f/ 1.7 ಲೆನ್ಸ್ ಹೊಂದಿದ್ದು, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (ಒಐಎಸ್) ಬೆಂಬಲಿತ ಫ್ರೀ ಕೋಡ್‌ ಕ್ಯಾಮೆರಾ ಜೊತೆಗೆ ಎಚ್‌ಡಿಆರ್ + ನೊಂದಿಗೆ ಡ್ಯುಯಲ್ ಎಕ್ಸ್‌ಪೋಸರ್ ಕಂಟ್ರೋಲ್‌ ಅನ್ನು ಒಳಗೊಂಡಿದೆ. ಜೊತೆಗೆ ಪೋರ್ಟ್ರೇಟ್ ಮೋಡ್, ಟಾಪ್ ಶಾಟ್, ಆಸ್ಟ್ರೋಫೋಟೋಗ್ರಫಿ, ನೈಟ್ ಸೈಟ್ ಮತ್ತು ಫ್ಯೂಸ್ಡ್ ವಿಡಿಯೋ ಸ್ಟೆಬಿಲೈಸೇಶನ್‌ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 3,140mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್‌ ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE , ವೈ-ಫೈ, ಬ್ಲೂಟೂತ್ ವಿ 5.0, ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಜೊತೆಗೆ 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಗೂಗಲ್ ಪಿಕ್ಸೆಲ್ 4A ಬೆಲೆ ಸಿಂಗಲ್ 6GB + 128GB ಶೇಖರಣಾ ರೂಪಾಂತರಕ್ಕೆ 31,999 ರೂ, ಆಗಿದೆ. ಆದಾಗ್ಯೂ, ಪ್ರಾರಂಭಿಕ ಹಂತದ ಪ್ರಯುಕ್ತ ಒಂದು ಸೀಮಿತ ಅವಧಿಗೆ, ಕಂಪನಿಯು ಫೋನ್ ಅನ್ನು 29,999 ರೂ.ಗಳಿಗೆ ಮಾರಾಟಮಾಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇದೇ ಅಕ್ಟೋಬರ್ 16 ರಿಂದ ಫ್ಲಿಪ್‌ಕಾರ್ಟ್ ಮೂಲಕ ಭಾರತದಲ್ಲಿ ಮಾರಾಟವಾಗಲಿದೆ ಎಂದು ಗೂಗಲ್ ತಿಳಿಸಿದೆ.

Most Read Articles
Best Mobiles in India

English summary
Google Pixel 4a has been launched in India. Google has also announced the sale date of the new Pixel phone in the country.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X