ಗೂಗಲ್ ಕಂಪನಿಯ ಈ ಎರಡು ಜನಪ್ರಿಯ ಫೋನ್‌ಗಳು ಇನ್ನು ನೆನಪು ಮಾತ್ರ!
ಜನಪ್ರಿಯ ಸರ್ಚ್ ಇಂಜಿನ್ ದೈತ್ಯ ಗೂಗಲ್ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಕಂಪನಿಯು ಪಿಕ್ಸಲ್ ಸರಣಿಯಲ್ಲಿ ಹಲವು ಆಕರ್ಷಕ ಫೋನ್‌ಗಳನ್ನು ಬಿಡುಗಡೆ ಮಾಡಿ ಗ್ರಾಹಕ ಗಮನ ಸೆಳೆದಿದೆ. ಆ ಪೈಕಿ ಗೂಗಲ್ ಪಿಕ್ಸಲ್ 4a 5G ಮತ್ತು ಗೂಗಲ್ ಪಿಕ್ಸಲ್ 5 ಸ್ಮಾರ್ಟ್‌ಫೋನ್‌ಗಳು ಇನ್ನು ಗ್ರಾಹಕರಿಗೆ ಖರೀದಿಗೆ ಸಿಗಲ್ಲ. ಏಕೆಂದರೇ ಕಂಪನಿಯು ಅಧಿಕೃತವಾಗಿ ಈ ಫೋನ್‌ಗಳನ್ನು ಸ್ಥಗಿತಗೊಳಿಸುವುದಾಗಿ ಸೂಚಿಸಿದೆ.

ಹೌದು, ಗೂಗಲ್ ಇತ್ತೀಚಿಗಷ್ಟೆ ಪಿಕ್ಸಲ್ 6 ಫೋನ್ ಅನಾವರಣ ಮಾಡಿದೆ. ಈಗ ಅದರ ಬೆನ್ನಲ್ಲೇ ಪಿಕ್ಸಲ್ 4a 5G ಮತ್ತು ಪಿಕ್ಸಲ್ 5 ಮಾಡೆಲ್‌ಗಳನ್ನು ಸ್ಥಗಿತ ಮಾಡುವುದಾಗಿ ತಿಳಿಸಿದೆ. ದಿ ವರ್ಜ್ ಪ್ರಕಾರ, ಪಿಕ್ಸಲ್ 4a 5G ಮತ್ತು ಪಿಕ್ಸಲ್ 5 ಈ ಎರಡನ್ನೂ ಪ್ರಸ್ತುತ ಗೂಗಲ್‌ನ ಆನ್‌ಲೈನ್ ಸ್ಟೋರ್‌ನಲ್ಲಿ ಮಾರಾಟ ಮಾಡಲಾಗಿದೆ ಎಂದು ಪಟ್ಟಿ ಮಾಡಲಾಗಿದೆ ಮತ್ತು ಇತರ ಚಿಲ್ಲರೆ ವ್ಯಾಪಾರಿಗಳಲ್ಲಿ ಉಳಿದಿರುವ ಸ್ಟಾಕ್ ದೀರ್ಘಕಾಲ ಉಳಿಯುವುದಿಲ್ಲ. ಹಾಗೆಯೇ ವರದಿಯ ಪ್ರಕಾರ, ಪಿಕ್ಸಲ್ 5a 5G ಫೋನ್ ನೇರ ಉತ್ತರಾಧಿಕಾರಿಯಾಗಿ ಕಾಣುತ್ತಿರುವ ಕಾರಣ ಪಿಕ್ಸಲ್ 4a 5G ಅನ್ನು ಸ್ಥಗಿತಗೊಳಿಸುವುದರಲ್ಲಿ ಆಶ್ಚರ್ಯವೇನಿಲ್ಲ. ಹಾಗಾದರೇ ಗೂಗಲ್ ಪಿಕ್ಸಲ್ 4a 5G ಮತ್ತು ಪಿಕ್ಸಲ್ 5 ಫೋನ್‌ಗಳ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಗೂಗಲ್ ಪಿಕ್ಸಲ್ 4a ಡಿಸ್‌ಪ್ಲೇ
ಗೂಗಲ್ ಪಿಕ್ಸಲ್ 4a ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 5.8 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. OLED ಮಾದರಿಯ ಡಿಸ್‌ಪ್ಲೇ ವಿನ್ಯಾಸ ಇದ್ದು, ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 443ppi ಆಗಿದೆ. ಹಾಗೆಯೇ ಡಿಸ್‌ಪ್ಲೇಯ ಅನುಪಾವು 19.5:9 ಆಗಿದೆ.

ಗೂಗಲ್ ಪಿಕ್ಸಲ್ 4a ಪ್ರೊಸೆಸರ್
ಗೂಗಲ್ ಪಿಕ್ಸಲ್ 4a ಸ್ಮಾರ್ಟ್‌ಫೋನ್ ಸ್ನ್ಯಾಪ್‌ಡ್ರಾಗನ್ 730G ಪ್ರೊಸೆಸರ್ ಬಲವನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್ ಸಪೋರ್ಟ್ ಸಹ ಪಡೆದಿದೆ. 6GB RAM ಮತ್ತು 128GB ಆಂತರಿಕ ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು ವಿಸ್ತರಿಸುವ ಅವಕಾಶ ನೀಡಿಲ್ಲ.

ಗೂಗಲ್ ಪಿಕ್ಸಲ್ 4a ಕ್ಯಾಮೆರಾ
ಗೂಗಲ್ ಪಿಕ್ಸಲ್ 4a ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 12ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಇನ್ನೊಂದು ಕ್ಯಾಮೆರಾವು 8ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಲ್ಫಿಗಾಗಿ ಸಹ 8ಎಂಪಿ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾ ನೀಡಲಾಗಿದೆ. ಇದರೊಂದಿಗೆ ಫೋಟೊ ಎಡಿಟಿಂಗ್ ಆಯ್ಕೆಗಳು ಇವೆ.

ಗೂಗಲ್ ಪಿಕ್ಸಲ್ 4a ಬ್ಯಾಟರಿ
ಗೂಗಲ್ ಪಿಕ್ಸಲ್ 4a ಸ್ಮಾರ್ಟ್‌ಫೋನ್ 3,140mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಇದರೊಂದಿಗೆ 18W ವೇಗದ ಚಾರ್ಜಿಂಗ್ ಸೌಲಭ್ಯವನ್ನು ನೀಡಲಾಗಿದೆ. ಉಳಿದಂತೆ ವೈಫೈ, ಬ್ಲೂಟೂತ್, ಹಾಟ್‌ಸ್ಪಾಟ್, ಜಿಪಿಎಸ್ ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಪಿಕ್ಸೆಲ್ 5 ಡಿಸ್‌ಪ್ಲೇ
ಗೂಗಲ್ ಪಿಕ್ಸೆಲ್ 5 ಸ್ಮಾರ್ಟ್‌ಫೋನ್ 1,080x2,340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಹೊಂದಿದೆ. ಇದು 6 ಇಂಚಿನ ಫುಲ್ ಹೆಚ್‌ಡಿ+ OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 413PP ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದ್ದು, 19.5:9 ಅನುಪಾತವನ್ನು ಪಡೆದಿದೆ.

ಪಿಕ್ಸೆಲ್ 5 ಪ್ರೊಸೆಸರ್
ಗೂಗಲ್ ಪಿಕ್ಸೆಲ್ 5 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765G SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ.

ಪಿಕ್ಸೆಲ್ 5 ಕ್ಯಾಮೆರಾ
ಗೂಗಲ್ ಪಿಕ್ಸೆಲ್ 5 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12.2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಪಿಕ್ಸೆಲ್ 5 ಬ್ಯಾಟರಿ
ಗೂಗಲ್ ಪಿಕ್ಸೆಲ್ 5 ಸ್ಮಾರ್ಟ್‌ಫೋನ್ 4080mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ, ಬ್ಲೂಟೂತ್ 5.0, GPS, NFC, ಯುಎಸ್‌ಬಿ ಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಬಾರೋಮೀಟರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಅನ್ನು ಸಹ ಒಳಗೊಂಡಿದೆ.


Click it and Unblock the Notifications








