ಬಹು ನಿರೀಕ್ಷಿತ ಗೂಗಲ್ ಪಿಕ್ಸೆಲ್ 4A ಸ್ಮಾರ್ಟ್‌ಫೋನ್ ಬಿಡುಗಡೆ!
ಬಹು ನಿರೀಕ್ಷಿತ ಗೂಗಲ್ ಪಿಕ್ಸೆಲ್ 5 ಮತ್ತು ಪಿಕ್ಸೆಲ್ 4A ಸ್ಮಾರ್ಟ್‌ಫೋನ್ ಬಿಡುಗಡೆ ಆಗಿದೆ. ಇನ್ನು ಈ ಎರಡೂ ಹೊಸ ಸ್ಮಾರ್ಟ್‌ಫೋನ್‌ಗಳು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765G SoC ಪ್ರೊಸೆಸರ್ ಅನ್ನು ಹೊಂದಿವೆ. ಅಲ್ಲದೆ ಟೈಟಾನ್ ಎಂ ಸೆಕ್ಯುರಿಟಿ ಚಿಪ್ ಅನ್ನು ಒಳಗೊಂಡಿವೆ. ಇನ್ನು ಪಿಕ್ಸೆಲ್ 5 ಮತ್ತು ಪಿಕ್ಸೆಲ್ 4A 5G ಎರಡೂ ಸ್ಮಾರ್ಟ್‌ಫೋನ್‌ಗಳು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿವೆ. ಜೊತೆಗೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ವನ್ನು ಹೊಂದಿವೆ. ಅಲ್ಲದೆ ಪಂಚ್-ಹೋಲ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ.

ಹೌದು, ಗೂಗಲ್ ಪಿಕ್ಸೆಲ್ 5 ಮತ್ತು ಪಿಕ್ಸೆಲ್ 4A ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ ನೀಡಿವೆ. ಇದರಲ್ಲಿ ಹೊಸ ಪಿಕ್ಸೆಲ್ ಫೋನ್ ಪಿಕ್ಸೆಲ್ 4A 5G ಜೊತೆಗೆ ಬರುತ್ತದೆ. ಈ ಸ್ಮಾರ್ಟ್‌ಫೋನ್ ಪೋರ್ಟ್ರೇಟ್ ಲೈಟ್ ಫೀಚರ್ಸ್ ಅನ್ನು ಹೊಂದಿದೆ. ಇದು ಎಕ್ಸ್‌ಟ್ರೀಮ್ ಬ್ಯಾಟರಿ ಸೇವರ್ ಮೋಡ್ ಅನ್ನು ಸಹ ಒಳಗೊಂಡಿದೆ. ಇದರಿಂದ ಬ್ಯಾಟರಿ ಅವಧಿಯನ್ನು 48 ಗಂಟೆಗಳವರೆಗೆ ಹೆಚ್ಚಿಸ ಬಹುದಾಗಿದೆ. ಹಾಗಾದ್ರೆ ಪಿಕ್ಸೆಲ್ 4A 5G ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ
ಗೂಗಲ್ ಪಿಕ್ಸೆಲ್ 4A 5G ಸ್ಮಾರ್ಟ್‌ಫೋನ್ 1,080x2,340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಹೊಂದಿದೆ. ಇದು 6.2-ಇಂಚಿನ ಫುಲ್ ಹೆಚ್‌ಡಿ+ OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 413PP ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದ್ದು, ಕಾರ್ನಿಂಗ್ ಗ್ಲಾಸ್ 3 ಪ್ರೊಟೆಕ್ಷನ್ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್ ಬಲ
ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765G SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ.

ಕ್ಯಾಮೆರಾ ವಿಶೇಷತೆ
ಗೂಗಲ್ ಪಿಕ್ಸೆಲ್ 4A 5G ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12.2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಇದು 60fps ವರೆಗೆ 4K ರೆಸಲ್ಯೂಶನ್‌ನ ವೀಡಿಯೊ ರೆಕಾರ್ಡಿಂಗ್ ಅನ್ನು ಬೆಂಬಲಿಸುತ್ತದೆ.

ಬ್ಯಾಟರಿ ಮತ್ತು ಇತರೆ
ಇದು 3,885mAh ಬ್ಯಾಟರಿ ಪ್ಯಾಕಪ್ ಅನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ, ಬ್ಲೂಟೂತ್ 5.0, GPS, NFC, ಯುಎಸ್‌ಬಿ ಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಬಾರೋಮೀಟರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಅನ್ನು ಸಹ ಒಳಗೊಂಡಿದೆ. ಇದು ಸ್ಟಿರಿಯೊ ಸ್ಪೀಕರ್‌ಗಳು ಮತ್ತು ಎರಡು ಮೈಕ್ರೊಫೋನ್‌ಗಳನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಗೂಗಲ್ ಪಿಕ್ಸೆಲ್ 4A 5G ಬೆಲೆ $499 (ಸುಮಾರು ರೂ. 37,000) ಹೊಂದಿದೆ. ಇದು ಜಸ್ಟ್ ಬ್ಲ್ಯಾಕ್ ಮತ್ತು ಸೋರ್ಟಾ ಸೇಜ್ ಬಣ್ಣ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆ ಆಗುವ ಸಾಧ್ಯತೆ ಇದೆ.


Click it and Unblock the Notifications








