ಮಾರುಕಟ್ಟೆಗೆ ಲಗ್ಗೆ ಇಟ್ಟ ಗೂಗಲ್ ಪಿಕ್ಸೆಲ್ 5 ಸ್ಮಾರ್ಟ್‌ಫೋನ್!
ಸರ್ಚ್ ಇಂಜಿನ್ ದೈತ್ಯ ಗೂಗಲ್ ಕಂಪನಿಯ ಬಹುನಿರೀಕ್ಷಿತ ಪಿಕ್ಸೆಲ್ 5 ಮತ್ತು ಪಿಕ್ಸೆಲ್ 4A ಸ್ಮಾರ್ಟ್‌ಫೋನ್ ಅನಾವರಣ ಆಗಿದೆ. ಇನ್ನು ಈ ಎರಡೂ ಹೊಸ ಸ್ಮಾರ್ಟ್‌ಫೋನ್‌ಗಳು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765G SoC ಪ್ರೊಸೆಸರ್ ಅನ್ನು ಹೊಂದಿವೆ. ಅಲ್ಲದೆ ಟೈಟಾನ್ ಎಂ ಸೆಕ್ಯುರಿಟಿ ಚಿಪ್ ಅನ್ನು ಒಳಗೊಂಡಿವೆ. ಇವುಗಳಲ್ಲಿ ಗೂಗಲ್ ಪಿಕ್ಸೆಲ್ 5 ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ.

ಹೌದು, ಗೂಗಲ್ ಪಿಕ್ಸೆಲ್ 5 ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, 8GB RAM ಹಾಗೂ 128GB ಆಂತರಿಕ ಸ್ಟೋರೇಜ್‌ನ ಸಂಯೋಜನೆಯನ್ನು ಒಳಗೊಂಡಿದೆ. ಇದರೊಂದಿಗೆ 4080mAh ಬ್ಯಾಟರಿ ಬ್ಯಾಕ್‌ಅಪ್ ಪವರ್ ಅನ್ನು ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್
ಗೂಗಲ್ ಪಿಕ್ಸೆಲ್ 5 ಸ್ಮಾರ್ಟ್‌ಫೋನ್ 1,080x2,340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಹೊಂದಿದೆ. ಇದು 6 ಇಂಚಿನ ಫುಲ್ ಹೆಚ್‌ಡಿ+ OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 413PP ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದ್ದು, 19.5:9 ಅನುಪಾತವನ್ನು ಪಡೆದಿದೆ.

ಪ್ರೊಸೆಸರ್ ಕಾರ್ಯ
ಗೂಗಲ್ ಪಿಕ್ಸೆಲ್ 5 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765G SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ.

ಕ್ಯಾಮೆರಾ ಸೆನ್ಸಾರ್
ಗೂಗಲ್ ಪಿಕ್ಸೆಲ್ 5 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12.2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಗೂಗಲ್ ಪಿಕ್ಸೆಲ್ 5 ಸ್ಮಾರ್ಟ್‌ಫೋನ್ 4080mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ, ಬ್ಲೂಟೂತ್ 5.0, GPS, NFC, ಯುಎಸ್‌ಬಿ ಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಬಾರೋಮೀಟರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಗೂಗಲ್ ಪಿಕ್ಸೆಲ್ 5 ಸ್ಮಾರ್ಟ್‌ಫೋನ್ ಬೆಲೆ $699 (ಭಾರತದಲ್ಲಿ ಅಂದಾಜು 51,400) ಹೊಂದಿದೆ. ಇದು ಜಸ್ಟ್ ಬ್ಲ್ಯಾಕ್ ಮತ್ತು ಸೋರ್ಟಾ ಸೇಜ್ ಬಣ್ಣ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆ ಆಗುವ ಸಾಧ್ಯತೆ ಇದೆ.


Click it and Unblock the Notifications








