ಗೂಗಲ್ ಪಿಕ್ಸೆಲ್ 5a 5G ಸ್ಮಾರ್ಟ್‌ಫೋನ್ ಬಿಡುಗಡೆ! 4,680mAh ಬ್ಯಾಟರಿ!
ಸರ್ಚ್ ಇಂಜಿನ್ ದೈತ್ಯ ಎನಿಸಿಕೊಂಡಿರುವ ಗೂಗಲ್ ಸ್ಮಾರ್ಟ್‌ಫೋನ್ ವಲಯದಲ್ಲೂ ತನ್ನ ಪ್ರಭಾವ ಬೀರಿದೆ. ಈಗಾಗಲೇ ಗೂಗಲ್ ಪಿಕ್ಸೆಲ್ ಹೆಸರಿನಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಸದ್ಯ ಇದೀಗ ಹೊಸ ಗೂಗಲ್ ಪಿಕ್ಸೆಲ್ 5a 5G ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಇದು ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾದ ಪಿಕ್ಸೆಲ್ 4a 5G ಮಾದರಿಯ ವಿನ್ಯಾಸವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಧೂಳು ಮತ್ತು ವಾಟರ್ ಪ್ರೂಪ್ ರೇಟಿಂಗ್ ಅನ್ನು ಹೊಂದಿದೆ.

ಹೌದು, ಗೂಗಲ್ ಕಂಪೆನಿ ಹೊಸ ಗೂಗಲ್ ಪಿಕ್ಸೆಲ್ 5a 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765G SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ 4,680mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ
ಗೂಗಲ್ ಪಿಕ್ಸೆಲ್ 5a 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.34-ಇಂಚಿನ ಫುಲ್-ಹೆಚ್‌ಡಿ+ OLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 413ppi ಪಿಕ್ಸೆಲ್ ಸಾಂದ್ರತೆ ಮತ್ತು HDR ಬೆಂಬಲವನ್ನು ಹೊಂದಿದೆ.

ಪ್ರೊಸೆಸರ್
ಗೂಗಲ್ ಪಿಕ್ಸೆಲ್ 5a 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765G SoC ಪ್ರೊಸೆಸರ್ ಅನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಪಡೆದುಕೊಂಡಿದೆ.

ಕ್ಯಾಮೆರಾ ವಿನ್ಯಾಸ
ಗೂಗಲ್ ಪಿಕ್ಸೆಲ್ 5a 5G ಡ್ಯುಯಲ್-ರಿಯರ್ ಕ್ಯಾಮೆರಾ ಸೆಟಪ್ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12.2-ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 16-ಮೆಗಾಪಿಕ್ಸೆಲ್ ಸೆನ್ಸರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಗೂಗಲ್ ಪಿಕ್ಸೆಲ್ 5a 5G ಸ್ಮಾರ್ಟ್‌ಫೋನ್ 4,680mAh ಬ್ಯಾಟರಿಯನ್ನು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ v5.0, GPS, 3.5mm ಹೆಡ್‌ಫೋನ್ ಜ್ಯಾಕ್ ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಗೂಗಲ್ ಪಿಕ್ಸೆಲ್ 5a 5G ಸ್ಮಾರ್ಟ್‌ಫೋನ್ ಏಕೈಕ 6GB RAM + 128GB ಇಂಟರ್ ಸ್ಟೋರೇಜ್ ಮಾಡೆಲ್‌ಗೆ $ 449 (ಸುಮಾರು 33,400ರೂ,) ಬೆಲೆಯನ್ನು ಹೊಂದಿದೆ. ಇದು ಯುಎಸ್ ಮತ್ತು ಜಪಾನ್‌ನಲ್ಲಿ ಫ್ರೀ-ಆರ್ಡರ್‌ಗೆ ಲಭ್ಯವಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಗಸ್ಟ್ 26 ರಿಂದ ಮಾರಾಟಕ್ಕೆ ಬರಲಿದೆ.


Click it and Unblock the Notifications








