ಗೂಗಲ್ ಪಿಕ್ಸೆಲ್ 5A ಸ್ಮಾರ್ಟ್‌ಫೋನ್ ಫೀಚರ್ಸ್ ಬಹಿರಂಗ!
ಸರ್ಚ್ ಇಂಜಿನ್ ದೈತ್ಯ ಸ್ಮಾರ್ಟ್‌ಫೋನ್ ವಲಯದಲ್ಲಿ ತನ್ನ ಪಿಕ್ಸೆಲ್ ಸ್ಮಾರ್ಟ್‌ಫೋನ್‌ಗಳ ಮೂಲಕ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಗೂಗಲ್ ಪಿಕ್ಸೆಲ್ 5A ಸ್ಮಾರ್ಟ್‌ಫೋನ್ ಪರಿಚಯಿಸಲು ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಹೈ-ಎಂಡ್ ಮಾದರಿಯ ಟ್ರಿಮ್ ಮಾಡಿದ ಆವೃತ್ತಿಯಾಗಿದೆ ಎಂದು ನಿರೀಕ್ಷಿಸಲಾಗಿದೆ. ಅಲ್ಲದೆ ಇದು ಪಿಕ್ಸೆಲ್ 4A 5G ಮಾದರಿಯ ವಿನ್ಯಾಸವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಹೌದು, ಗೂಗಲ್ ತನ್ನ ಹೊಸ ಪಿಕ್ಸೆಲ್ 5A ಸ್ಮಾರ್ಟ್‌ಫೋನ್ ಲಾಂಚ್ ಮಾಡಲು ವೇದಿಕೆ ಸಿದ್ಧಪಡಿಸಿಕೊಂಡಿದೆ. ಆದರೆ ಬಿಡುಗಡೆಗೂ ಮುನ್ನವೇ ಆನ್‌ಲೈನ್ ಈ ಸ್ಮಾರ್ಟ್‌ಫೋನ್ ಫೀಚರ್ಸ್ ಬಹಿರಂಗಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.2 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಜೊತೆಗೆ ಇದು ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ ಎಂದು ಹೇಳಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ಗೂಗಲ್ ಪಿಕ್ಸೆಲ್ 5A ಸ್ಮಾರ್ಟ್‌ಫೋನ್ 1080x2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.2 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಪಂಚ್ ಹೋಲ್ ವಿನ್ಯಾಸವನ್ನು ಹೊಂದಿದ್ದು, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಅನ್ನು ಪಡೆದುಕೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇ ಸ್ಕ್ರೀನ್ ಟು ಬಾಡಿ 82.35% ಅನುಪಾತವನ್ನು ಹೊಂದಿರಲಿದೆ.

ಪ್ರೊಸೆಸರ್
ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G ಪ್ರೊಸೆಸರ್ ಅನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಹಾಗೆಯೇ 6GB RAM+128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ.

ಕ್ಯಾಮೆರಾ ವಿನ್ಯಾಸ
ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 16 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ ಎನ್ನಲಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ಗೂಗಲ್ ಪಿಕ್ಸೆಲ್ 5A ಸ್ಮಾರ್ಟ್‌ಫೋನ್ 3480mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದ್ದು, ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, 3.5mm ಆಡಿಯೊ ಜ್ಯಾಕ್ ಮತ್ತು ಡ್ಯುಯಲ್ ಸ್ಟೀರಿಯೋ ಸ್ಪೀಕರ್ ಗ್ರಿಲ್ ಅನ್ನು ಉಳಿಸಿಕೊಳ್ಳುವ ನಿರೀಕ್ಷೆಯಿದೆ. ಇದು ಯಾವಾಗ ಬಿಡುಗಡೆ ಆಗಲಿದೆ ಹಾಗೂ ಬೆಲೆ ಏನಿರಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.


Click it and Unblock the Notifications








