Home
ಸುದ್ದಿಜಾಲ

ಗೂಗಲ್‌ ಪಿಕ್ಸಲ್‌ 6 ಪ್ರೊ 5G ಬೆಲೆಯಲ್ಲಿ ಭರ್ಜರಿ ಇಳಿಕೆ!..ಡಿಸ್ಕೌಂಟ್‌ ಬೆಲೆ ನೋಡಿ!

ಸರ್ಚ್ ಇಂಜಿನ್‌ ದೈತ್ಯ ಗೂಗಲ್‌ ಸಂಸ್ಥೆಯ ಪ್ರಮುಖ ಪಿಕ್ಸಲ್‌ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾದ ಗೂಗಲ್‌ ಪಿಕ್ಸಲ್‌ 6 ಪ್ರೊ 5G (Google Pixel 6 pro 5G) ಖರೀದಿಸುವ ಗ್ರಾಹಕರಿಗೆ ಈಗ ಸಖತ್‌ ಸಿಹಿಸುದ್ದಿ ಇದೆ. ಜನಪ್ರಿಯ ಇ ಕಾಮರ್ಸ್‌ ತಾಣ ಅಮೆಜಾನ್‌ ನಲ್ಲಿ ಗೂಗಲ್‌ ಪಿಕ್ಸಲ್‌ 6 ಪ್ರೊ 5G ಸ್ಮಾರ್ಟ್‌ಫೋನ್‌ ಸಖತ್‌ ಡಿಸ್ಕೌಂಟ್‌ ದರದಲ್ಲಿ ಖರೀದಿಗೆ ಲಭ್ಯವಿದೆ.

ಗೂಗಲ್‌ ಪಿಕ್ಸಲ್‌ 6 ಪ್ರೊ 5G ಬೆಲೆಯಲ್ಲಿ ಭರ್ಜರಿ ಇಳಿಕೆ!.ಡಿಸ್ಕೌಂಟ್‌ ಬೆಲೆ ನೋಡಿ

ಹೌದು, ಇ ಕಾಮರ್ಸ್‌ ತಾಣ ಅಮೆಜಾನ್‌ನಲ್ಲಿ ಗೂಗಲ್‌ ಪಿಕ್ಸಲ್‌ 6 ಪ್ರೊ 5G ಸ್ಮಾರ್ಟ್‌ಫೋನ್‌ 12GB RAM + 128GB ಸ್ಟೋರೇಜ್‌ನ ವೇರಿಯಂಟ್‌ 49,999ರೂ. ಗಳ ಡಿಸ್ಕೌಂಟ್‌ ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಫೋನ್ ಮೂಲ ದರ 1,09,000ರೂ. ಆಗಿದೆ. ಇದಲ್ಲದೇ ಎಕ್ಸ್‌ಚೇಂಜ್ ಆಫರ್‌, ಬ್ಯಾಂಕ್‌ ಕೊಡುಗೆ ಹಾಗೂ ನೋ ಕಾಸ್ಟ್‌ ಇಎಮ್‌ಐ ಆಯ್ಕೆ ಸಹ ಲಭ್ಯ. ಹಾಗಾದರೆ ಗೂಗಲ್‌ ಪಿಕ್ಸಲ್‌ 6 ಪ್ರೊ ಫೋನಿನ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಗೂಗಲ್‌ ಪಿಕ್ಸಲ್‌ 6 ಪ್ರೊ 5G ಬೆಲೆಯಲ್ಲಿ ಭರ್ಜರಿ ಇಳಿಕೆ!.ಡಿಸ್ಕೌಂಟ್‌ ಬೆಲೆ ನೋಡಿ

ಗೂಗಲ್‌ ಪಿಕ್ಸಲ್‌ 6 ಪ್ರೊ 5G : ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಗೂಗಲ್‌ ಪಿಕ್ಸೆಲ್‌ 6 ಪ್ರೊ ಸ್ಮಾರ್ಟ್‌ಫೋನ್‌ 1,440 x 3,120 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7-ಇಂಚಿನ ಎಲ್‌ಟಿಪಿಒ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 10Hz ನಿಂದ 120Hz ವರೆಗಿನ ವೇರಿಯಬಲ್ ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ. ಇನ್‌ ಡಿಸ್‌ಪ್ಲೇ ವೆನಿಲ್ಲಾ ಮಾದರಿಯನ್ನು ಹೊಂದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಅನ್ನು ಪಡೆದಿದೆ.

ಗೂಗಲ್‌ ಪಿಕ್ಸಲ್‌ 6 ಪ್ರೊ 5G : ಪ್ರೊಸೆಸರ್‌ ಪವರ್

ಗೂಗಲ್‌ ಪಿಕ್ಸೆಲ್‌ 6 ಪ್ರೊ ಸ್ಮಾರ್ಟ್‌ಫೋನ್‌ ಗೂಗಲ್ ಟೆನ್ಸರ್ SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಟೆನ್ಸರ್ 20-ಕೋರ್ ಜಿಪಿಯು ಹೊಂದಿದ್ದು, ಉತ್ತಮ ಕಾರ್ಯ ಕ್ಷಮತೆ ಮತ್ತು ದಕ್ಷತೆಗಾಗಿ ವಿನ್ಯಾಸಗೊಳಿಸಲಾಗಿದ್ದು, ಗೂಗಲ್ ಅಭಿವೃದ್ಧಿ ಪಡಿಸಿದ ಟೆನ್ಸರ್ ಚಿಪ್ CPU ಕಾರ್ಯಕ್ಷಮತೆಯನ್ನು 80X ಹೆಚ್ಚಿಸುತ್ತದೆ. ಹಾಗೆಯೇ 12 GB RAM ಮತ್ತು 512 GB ಡೀಫಾಲ್ಟ್ ಸ್ಟೋರೇಜ್ ಅನ್ನು ಹೊಂದಿದೆ.

ಗೂಗಲ್‌ ಪಿಕ್ಸಲ್‌ 6 ಪ್ರೊ 5G ಬೆಲೆಯಲ್ಲಿ ಭರ್ಜರಿ ಇಳಿಕೆ!.ಡಿಸ್ಕೌಂಟ್‌ ಬೆಲೆ ನೋಡಿ

ಗೂಗಲ್‌ ಪಿಕ್ಸಲ್‌ 6 ಪ್ರೊ 5G : ಕ್ಯಾಮೆರಾ ವಿನ್ಯಾಸ

ಗೂಗಲ್‌ ಪಿಕ್ಸೆಲ್‌ 6 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದು 150% ಹೆಚ್ಚು ಬೆಳಕನ್ನು ಸೆರೆಹಿಡಿಯುತ್ತದೆ. ಇನ್ನು ಎರಡನೇ ಕ್ಯಾಮೆರಾ 48MP ಟೆಲಿಫೋಟೋ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 12MP ಅಲ್ಟ್ರಾ-ವೈಡ್ ಲೆನ್ಸ್‌ ಅನ್ನು ಹೊಂದಿದೆ. ಇನ್ನು ಗೂಗಲ್‌ ಪಿಕ್ಸೆಲ್ 6 ಪ್ರೊ 4X ಆಪ್ಟಿಕಲ್ ಜೂಮ್ ಮತ್ತು 20x ಜೂಮ್ ವರೆಗೆ ಪಿಕ್ಸೆಲ್‌ನ ಸೂಪರ್ ರೆಸ್ ಜೂಮ್‌ನ ಸುಧಾರಿತ ಆವೃತ್ತಿಯನ್ನು ಹೊಂದಿದೆ.

ಗೂಗಲ್‌ ಪಿಕ್ಸಲ್‌ 6 ಪ್ರೊ 5G : ಬ್ಯಾಟರಿ ಮತ್ತು ಇತರೆ

ಗೂಗಲ್‌ ಪಿಕ್ಸೆಲ್ 6 ಪ್ರೊ ಸ್ಮಾರ್ಟ್‌ಫೋನ್‌ 5,003mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 23W ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಗೂಗಲ್‌ ಪಿಕ್ಸೆಲ್‌ 6 ಪ್ರೊ ಸ್ಮಾರ್ಟ್‌ಫೋನ್‌ ಇತ್ತೀಚಿನ ಗೂಗಲ್ ಫೋನ್‌ಗಳ ಲಾಕ್‌ಸ್ಕ್ರೀನ್‌ನಿಂದ ನೇರವಾಗಿ ಸ್ನ್ಯಾಪ್‌ಚಾಟ್ ಕ್ಯಾಮೆರಾವನ್ನು ಬಳಕೆದಾರರಿಗೆ ಪ್ರವೇಶಿಸಲು 'ಕ್ವಿಕ್ ಟ್ಯಾಪ್ ಟು ಸ್ನ್ಯಾಪ್' ಎಂಬ ಫೀಚರ್ಸ್‌ ಅನ್ನು ಪಡೆದುಕೊಂಡಿದೆ. ಇದು ಲಾಕ್‌ಸ್ಕ್ರೀನ್‌ನಿಂದ ಸ್ನ್ಯಾಪ್‌ಚಾಟ್ ಕ್ಯಾಮೆರಾವನ್ನು ತೆರೆಯಲು ಬಳಕೆದಾರರಿಗೆ ಅವಕಾಶ ನೀಡಲಿದೆ.

Best Mobiles in India

English summary
Google Pixel 6 Pro 5G available at discount price on amazon. Know more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+