Home
ಸುದ್ದಿಜಾಲ

ಗೂಗಲ್‌ ಪಿಕ್ಸೆಲ್‌ 6 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ! ಆಕರ್ಷಕ ಫೀಚರ್ಸ್!

ಸರ್ಚ್‌ ಇಂಜಿನ್‌ ದೈತ್ಯ ಗೂಗಲ್‌ ತನ್ನ ಬಹು ನಿರೀಕ್ಷಿತ ಗೂಗಲ್‌ ಪಿಕ್ಸೆಲ್‌ 6 ಸರಣಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಸರಣಿಯಲ್ಲಿ ಗೂಗಲ್‌ ಪಿಕ್ಸೆಲ್‌ 6 ಮತ್ತು ಗೂಗಲ್‌ ಪಿಕ್ಸೆಲ್‌ 6 ಪ್ರೊ ಸ್ಮಾರ್ಟ್‌ಫೋನ್‌ಗಳು ಸೇರಿವೆ. ಇದರಲ್ಲಿ ಗೂಗಲ್‌ ಪಿಕ್ಸೆಲ್‌ 6 ಪ್ರೊ ಸ್ಮಾರ್ಟ್‌ಫೋನ್‌ ಆಕರ್ಷಕ ವಿನ್ಯಾಸವನ್ನು ಪಡೆದುಕೊಂಡಿದ್ದು, ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಡೈನಾಮಿಕ್‌ ಡಿಸ್‌ಪ್ಲೇ ಹೊಂದಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಪಡೆದುಕೊಂಡಿದೆ.

ಗೂಗಲ್‌ ಪಿಕ್ಸೆಲ್‌ 6 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ! ಆಕರ್ಷಕ ಫೀಚರ್ಸ್!

ಹೌದು, ಗೂಗಲ್‌ ಪಿಕ್ಸೆಲ್‌ 6 ಸರಣಿ ಅಧಿಕೃತವಾಗಿ ಬಿಡುಗಡೆಯಾಗಿದೆ. ಇದರಲ್ಲಿ ಗೂಗಲ್‌ ಪಿಕ್ಸೆಲ್‌ 6 ಪ್ರೊ ಸ್ಮಾರ್ಟ್‌ಫೋನ್‌ ಗೂಗಲ್ ಟೆನ್ಸರ್ SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ
ಗೂಗಲ್‌ ಪಿಕ್ಸೆಲ್‌ 6 ಪ್ರೊ ಸ್ಮಾರ್ಟ್‌ಫೋನ್‌ 1,440x3,120 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7-ಇಂಚಿನ ಎಲ್‌ಟಿಪಿಒ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 10Hz ನಿಂದ 120Hz ವರೆಗಿನ ವೇರಿಯಬಲ್ ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ. ಇನ್‌ ಡಿಸ್‌ಪ್ಲೇ ವೆನಿಲ್ಲಾ ಮಾದರಿಯನ್ನು ಹೊಂದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಅನ್ನು ಪಡೆದಿದೆ.

ಗೂಗಲ್‌ ಪಿಕ್ಸೆಲ್‌ 6 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ! ಆಕರ್ಷಕ ಫೀಚರ್ಸ್!

ಪ್ರೊಸೆಸರ್‌
ಗೂಗಲ್‌ ಪಿಕ್ಸೆಲ್‌ 6 ಪ್ರೊ ಸ್ಮಾರ್ಟ್‌ಫೋನ್‌ ಗೂಗಲ್ ಟೆನ್ಸರ್ SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಟೆನ್ಸರ್ 20-ಕೋರ್ ಜಿಪಿಯು ಹೊಂದಿದ್ದು, ಉತ್ತಮ ಕಾರ್ಯಕ್ಷಮತೆ ಮತ್ತು ದಕ್ಷತೆಗಾಗಿ ವಿನ್ಯಾಸಗೊಳಿಸಲಾಗಿದ್ದು, ಗೂಗಲ್ ಅಭಿವೃದ್ಧಿ ಪಡಿಸಿದ ಟೆನ್ಸರ್ ಚಿಪ್ CPU ಕಾರ್ಯಕ್ಷಮತೆಯನ್ನು 80X ಹೆಚ್ಚಿಸುತ್ತದೆ ಎಂದು ಗೂಗಲ್ ಹೇಳಿಕೊಂಡಿದೆ. ಹಾಗೆಯೇ 12GB RAM ಮತ್ತು 512GB ಡೀಫಾಲ್ಟ್ ಸ್ಟೋರೇಜ್ ಅನ್ನು ಹೊಂದಿದೆ.

ಗೂಗಲ್‌ ಪಿಕ್ಸೆಲ್‌ 6 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ! ಆಕರ್ಷಕ ಫೀಚರ್ಸ್!

ಕ್ಯಾಮೆರಾ ವಿನ್ಯಾಸ
ಗೂಗಲ್‌ ಪಿಕ್ಸೆಲ್‌ 6 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದು 150% ಹೆಚ್ಚು ಬೆಳಕನ್ನು ಸೆರೆಹಿಡಿಯುತ್ತದೆ ಎಂದು ಗೂಗಲ್ ಹೇಳಿಕೊಂಡಿದೆ. ಇನ್ನು ಎರಡನೇ ಕ್ಯಾಮೆರಾ 48MP ಟೆಲಿಫೋಟೋ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 12MP ಅಲ್ಟ್ರಾ-ವೈಡ್ ಲೆನ್ಸ್‌ ಅನ್ನು ಹೊಂದಿದೆ. ಇನ್ನು ಗೂಗಲ್‌ ಪಿಕ್ಸೆಲ್ 6 ಪ್ರೊ 4X ಆಪ್ಟಿಕಲ್ ಜೂಮ್ ಮತ್ತು 20x ಜೂಮ್ ವರೆಗೆ ಪಿಕ್ಸೆಲ್‌ನ ಸೂಪರ್ ರೆಸ್ ಜೂಮ್‌ನ ಸುಧಾರಿತ ಆವೃತ್ತಿಯನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಗೂಗಲ್‌ ಪಿಕ್ಸೆಲ್ 6 ಪ್ರೊ ಸ್ಮಾರ್ಟ್‌ಫೋನ್‌ 5,003mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 23W ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಗೂಗಲ್‌ ಪಿಕ್ಸೆಲ್‌ 6 ಪ್ರೊ ಸ್ಮಾರ್ಟ್‌ಫೋನ್‌ ಇತ್ತೀಚಿನ ಗೂಗಲ್ ಫೋನ್‌ಗಳ ಲಾಕ್‌ಸ್ಕ್ರೀನ್‌ನಿಂದ ನೇರವಾಗಿ ಸ್ನ್ಯಾಪ್‌ಚಾಟ್ ಕ್ಯಾಮೆರಾವನ್ನು ಬಳಕೆದಾರರಿಗೆ ಪ್ರವೇಶಿಸಲು 'ಕ್ವಿಕ್ ಟ್ಯಾಪ್ ಟು ಸ್ನ್ಯಾಪ್' ಎಂಬ ಫೀಚರ್ಸ್‌ ಅನ್ನು ಪಡೆದುಕೊಂಡಿದೆ. ಇದು ಲಾಕ್‌ಸ್ಕ್ರೀನ್‌ನಿಂದ ಸ್ನ್ಯಾಪ್‌ಚಾಟ್ ಕ್ಯಾಮೆರಾವನ್ನು ಪ್ರವೇಶಿಸಲು ಬಳಕೆದಾರರಿಗೆ ಅವಕಾಶ ನೀಡಲಿದೆ. ಇದರಿಂದ ಈ ಸ್ಮಾರ್ಟ್‌ಫೋನ್‌ಗಳು ಸ್ನ್ಯಾಪ್ ಮಾಡುವ ವೇಗದ ಫೋನ್‌ಗಳಾಗಿವೆ ಎಂದು ಗೂಗಲ್‌ ಕಂಪನಿ ಹೇಳಿದೆ.

ಗೂಗಲ್‌ ಪಿಕ್ಸೆಲ್‌ 6 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ! ಆಕರ್ಷಕ ಫೀಚರ್ಸ್!

ಬೆಲೆ ಮತ್ತು ಲಭ್ಯತೆ
ಗೂಗಲ್‌ ಪಿಕ್ಸೆಲ್ 6 ಪ್ರೊ ಸ್ಮಾರ್ಟ್‌ಫೋನ್‌ $ 899 ಬೆಲೆಯನ್ನು ಹೊಂದಿದೆ. ಭಾರತದಲ್ಲಿ ಈ ಸ್ಮಾರ್ಟ್‌ಫೋನ್‌ ಯಾವಾಗ ಲಭ್ಯವಾಗಲಿದೆ ಅನ್ನೊದರ ಮಾಹಿತಿ ಇನ್ನು ಬಹಿರಂಗವಾಗಿಲ್ಲ.

Best Mobiles in India

English summary
Google Pixel 6 Pro With Google’s Custom-Built Tensor SoC Launched.to know more visit to kannada.gizbot.com.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+