ಬಹುನಿರೀಕ್ಷಿತ 'ಗೂಗಲ್ ಪಿಕ್ಸೆಲ್ 6' ಫೋನ್ ಲಾಂಚ್!..ಹೊಸ ಪ್ರೊಸೆಸರ್!
ಸರ್ಚ್ ಇಂಜಿನ್ ದೈತ್ಯ ಗೂಗಲ್ ಕಂಪನಿಯು ತನ್ನ ಬಹುನಿರೀಕ್ಷಿತ ಗೂಗಲ್ ಪಿಕ್ಸೆಲ್ 6 ಸ್ಮಾರ್ಟ್‌ಫೋನ್ ಸರಣಿ ಅನ್ನು ಬಿಡುಗಡೆ ಮಾಡಿದೆ. ಈ ಸರಣಿಯು 'ಗೂಗಲ್ ಪಿಕ್ಸಲ್ 6' ಮತ್ತು 'ಗೂಗಲ್ ಪಿಕ್ಸಲ್ 6 ಪ್ರೊ' ಹೆಸರಿನ ಎರಡು ಮಾಡೆಲ್‌ಗಳನ್ನು ಒಳಗೊಂಡಿದೆ. ಆ ಪೈಕಿ ಗೂಗಲ್ ಪಿಕ್ಸೆಲ್ 6 ಸ್ಮಾರ್ಟ್‌ಫೋನ್ ಡಿಸೈನ್, ಪ್ರೊಸೆಸರ್, ಕ್ಯಾಮೆರಾ ಫೀಚರ್ಸ್‌ಗಳಿಂದ ಫೋನ್ ಪ್ರಿಯರನ್ನು ಆಕರ್ಷಿಸಿದೆ.

ಹೌದು, ಗೂಗಲ್ ಸಂಸ್ಥೆಯು ಇಂದು (ಅ.19) ಗೂಗಲ್ ಪಿಕ್ಸೆಲ್ 6 ಸ್ಮಾರ್ಟ್‌ಫೋನ್ ಅನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಪಿಕ್ಸಲ್ 6 ಸ್ಮಾರ್ಟ್‌ಫೋನ್ 8GB RAM ಹಾಗೂ 128GB ಆಂತರಿಕ ಸ್ಟೋರೇಜ್‌ನ ವೇರಿಯಂಟ್ ಆಯ್ಕೆ ಪಡೆದಿದೆ. ಹಾಗೆಯೇ ಅಧಿಕ ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಅನ್ನು ಪಡೆದಿದೆ. ಹಾಗಾದರೇ ಗೂಗಲ್ ಪಿಕ್ಸಲ್ 6 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಹಾಗೂ ಪ್ರೊಸೆಸರ್ ಬಲ
ಗೂಗಲ್ ಪಿಕ್ಸೆಲ್ 6 ಸ್ಮಾರ್ಟ್‌ಫೋನ್ ಅಧಿಕ ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಹೊಂದಿದೆ. ಇದು 6.4 ಇಂಚಿನ ಫುಲ್ ಹೆಚ್‌ಡಿ+ OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಫೋನ್ 90Hz ರೀಫ್ರೇಶ್ ರೇಟ್ ಅನ್ನು ಒಳಗೊಂಡಿದ್ದು, ನಯವಾದ ಟಚ್ ಪಡೆದಿದೆ. ಹಾಗೆಯೇ ಈ ಪಿಕ್ಸೆಲ್ 6 ಸ್ಮಾರ್ಟ್‌ಫೋನ್ ಇದು ಆಕ್ಟಾ-ಕೋರ್ ಸಿಪಿಯು ಮತ್ತು 20-ಕೋರ್ ಜಿಪಿಯು ಹೊಂದಿದೆ. ಜೊತೆಗೆ ಗೂಗಲ್ ಅಭಿವೃದ್ಧಿ ಪಡಿಸಿದ ಟೆನ್ಸರ್ ಚಿಪ್ CPU ಕಾರ್ಯಕ್ಷಮತೆಯನ್ನು 80X ಹೆಚ್ಚಿಸುತ್ತದೆ ಎನ್ನಲಾಗಿದೆ. ಈ ಫೋನ್ 8GB RAM ಮತ್ತು 128GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಕ್ಯಾಮೆರಾ ಸೆನ್ಸಾರ್ ಹಾಗೂ ಇತರೆ ಸೌಲಭ್ಯಗಳು
ಗೂಗಲ್ ಪಿಕ್ಸೆಲ್ 6 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಹೊಂದಿದೆ. ಕ್ವಿಕ್ ಟ್ಯಾಪ್ ಟು ಸ್ನ್ಯಾಪ್ ಕ್ಯಾಮೆರಾ ಆಯ್ಕೆ ಪಡೆದಿದೆ. ಇದರೊಂದಿಗೆ ಈ ಫೋನ್ ಉತ್ತಮ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದ್ದು, ಅದಕ್ಕೆ ಪೂರಕ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ ಎಂದು ಕಂಪನಿಯು ತಿಳಿಸಿದೆ.

ಬೆಲೆ ಮತ್ತು ಲಭ್ಯತೆ
ಗೂಗಲ್ ಪಿಕ್ಸೆಲ್ 6 ಸ್ಮಾರ್ಟ್‌ಫೋನ್ ಬೆಲೆ $599 (ಭಾರತದಲ್ಲಿ ಅಂದಾಜು 44,900ರೂ.) ಆಗಿದೆ. ಇದು ಬ್ಲ್ಯಾಕ್, ಬ್ಲೂ ಮತ್ತು ರೆಡ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಭಾರತದಲ್ಲಿ ಈ ಫೋನ್ ಬಿಡುಗಡೆ ಬಗ್ಗೆ ಕಂಪನಿಯು ಸ್ಪಷ್ಟ ಮಾಹಿತಿ ಹೊರಹಾಕಿಲ್ಲ.


Click it and Unblock the Notifications








