ಗೂಗಲ್ ಪಿಕ್ಸಲ್ 6a ಫೋನಿಗೆ ಬಿಗ್ ಡಿಸ್ಕೌಂಟ್!..ಖರೀದಿಗೆ ಇದುವೇ ಸಕಾಲ!
ಟೆಕ್ ದೈತ್ಯ ಗೂಗಲ್ ಸಂಸ್ಥೆಯು ತನ್ನ ಪಿಕ್ಸಲ್ ಸರಣಿಯ ಫೋನ್‌ಗಳ ಮೂಲಕ ಮೊಬೈಲ್ ಮಾರುಕಟ್ಟೆಯಲ್ಲಿ ಗಮನ ಸೆಳೆದಿದೆ. ಸದ್ಯ ಗೂಗಲ್ ಪಿಕ್ಸಲ್ 7 ಸರಣಿಯ ಮೊಬೈಲ್‌ಗಳು ಟ್ರೆಂಡಿಂಗ್‌ನಲ್ಲಿ ಇವೆ. ಅದಾಗ್ಯೂ, ಸಂಸ್ಥೆಯ ಗೂಗಲ್ ಪಿಕ್ಸಲ್ 6a ಇನ್ನೂ ತನ್ನ ಡಿಮ್ಯಾಂಡ್ ಕಳೆದುಕೊಂಡಿಲ್ಲ. ಈಗಲೂ ಈ ಫೋನ್ ಅನೇಕರಿಗೆ ಫೆವರೇಟ್ ಆಗಿದೆ. ಖುಷಿ ವಿಷಯ ಏನೆಂದರೆ, ಈ ಫೋನ್ ಈಗ ಸಖತ್ ರಿಯಾಯಿತಿ ಪಡೆದಿದೆ.
ಹೌದು, ಜನಪ್ರಿಯ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್‌ನಲ್ಲಿ ಗೂಗಲ್ ಪಿಕ್ಸಲ್ 6a ಫೋನ್ 34% ರಷ್ಟು ಡಿಸ್ಕೌಂಟ್ ಪಡೆದಿದೆ. ಈ ಫೋನ್ ದರ 43,999ರೂ. ಆಗಿದ್ದು, ಈಗ ಕೊಡುಗೆಯಲ್ಲಿ 28,999ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಎಕ್ಸ್‌ಚೇಂಜ್ ಕೊಡುಗೆ ಹಾಗೂ ಆಯ್ದ ಕೆಲವು ಬ್ಯಾಂಕ್‌ಗಳಿಂದ ರಿಯಾಯಿತಿ ಸಹ ದೊರೆಯುತ್ತದೆ.

ಅಂದಹಾಗೆ ಈ ಫೋನ್ ಆಕ್ಟಾ ಕೋರ್ ಗೂಗಲ್ ಟೆನ್ಸರ್ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 12 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಜೊತೆಗೆ 6GB RAM ಮತ್ತು 128GB ವೇರಿಯಂಟ್ ಆಯ್ಕೆಯಲ್ಲಿ ಲಭ್ಯ. ಇನ್ನುಳಿದಂತೆ ಈ ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಗೂಗಲ್ ಪಿಕ್ಸೆಲ್ 6a ಡಿಸ್‌ಪ್ಲೇ ವಿನ್ಯಾಸ ಹೇಗಿದೆ : ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಇದು 90Hz ರಿಫ್ರೆಶ್ ರೇಟ್ ಪಡೆದಿದ್ದು, 6.1 ಇಂಚಿನ ಫುಲ್ ಹೆಚ್‌ಡಿ ಪ್ಲಸ್ OLED ಡಿಸ್‌ಪ್ಲೇ ಅನ್ನು ಒಳಗೊಂಡಿದೆ. ಹಾಗೆಯೇ 20:9 ರಚನೆಯ ಅನುಪಾತವನ್ನು ಪಡೆದಿದ್ದು, ರಕ್ಷಣೆಗಾಗಿ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಅನ್ನು ಪಡೆದಿದೆ. ಅಲ್ಲದೇ ಆಲ್‌ವೇಸ್ ಆನ್ ಡಿಸ್‌ಪ್ಲೇ ಆಯ್ಕೆ ಸಹ ಒಳಗೊಂಡಿದೆ.
ಗೂಗಲ್ ಪಿಕ್ಸೆಲ್ 6a ಪ್ರೊಸೆಸರ್ ಪವರ್ ಮಾಹಿತಿ : ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಗೂಗಲ್ ಟೆನ್ಸರ್ SoC ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಹಾಗೆಯೇ ಮಾಲಿ G78 MP20 ಬೆಂಬಲ ಅನ್ನು ಪಡೆದಿದ್ದು, ಆಂಡ್ರಾಯ್ಡ್ 12 ಸಪೋರ್ಟ್ ನೊಂದಿದೆ ಲಭ್ಯ. ಹಾಗೆಯೇ ಈ ಸ್ಮಾರ್ಟ್‌ಫೋನ್ 6GB RAM ಮತ್ತು 128 GB ಆಂತರೀಕ ಸ್ಟೋರೇಜ್ ಆಯ್ಕೆ ಅನ್ನು ಒಳಗೊಂಡಿದೆ.
ಗೂಗಲ್ ಪಿಕ್ಸೆಲ್ 6a ಕ್ಯಾಮೆರಾ ರಚನೆ ವಿವರ ಇಲ್ಲಿದೆ : ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆಯನ್ನು ಪಡೆದಿದೆ. ಪ್ರಾಥಮಿಕ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಅನ್ನು ಒಳಗೊಂಡಿದ್ದು, ಹಾಗೆಯೇ ಸೆಕೆಂಡರಿ ಕ್ಯಾಮೆರಾವು 12 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಅನ್ನು ಪಡೆದಿದೆ. ಇನ್ನು ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ.
ಗೂಗಲ್ ಪಿಕ್ಸೆಲ್ 6a ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ ಏನು : ಗೂಗಲ್ ಪಿಕ್ಸೆಲ್ 6a ಮೊಬೈಲ್ 4,306 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಈ ಫೋನ್ ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಎಕ್ಸ್‌ಟ್ರೀಮ್ ಬ್ಯಾಟರಿ ಸೇವರ್ ಮೋಡ್‌ನಲ್ಲಿ ಬಳಿಸಿದಾಗ ಅತ್ಯುತ್ತಮ ಬ್ಯಾಟರಿ ಬ್ಯಾಕ್‌ಅಪ್ ಒದಗಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, ಮತ್ತು USB ಟೈಪ್-C ಪೋರ್ಟ್ ಆಯ್ಕೆ ಅನ್ನು ಸಪೋರ್ಟ್ ಮಾಡಲಿದೆ.


Click it and Unblock the Notifications








