Home
ಸುದ್ದಿಜಾಲ

ಗೂಗಲ್‌ನ ಈ ಅತ್ಯುತ್ತಮ ಕ್ಯಾಮೆರಾ ಫೋನಿಗೆ ಭರ್ಜರಿ ಡಿಸ್ಕೌಂಟ್‌!

ದೈತ್ಯ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ ಎನಿಸಿರುವ ಫ್ಲಿಪ್‌ಕಾರ್ಟ್‌ ತಾಣವು ಈಗ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ ಆಯೋಜಿಸಿ ಗ್ರಾಹಕರನ್ನು ಸೆಳೆದಿದೆ. ಈ ಮಾರಾಟದಲ್ಲಿ ದುಬಾರಿ ಹಾಗೂ ಅಗ್ಗದ ಬೆಲೆಯ ಮೊಬೈಲ್‌ಗಳು ಭರ್ಜರಿ ರಿಯಾಯಿತಿ ಪಡೆದಿದ್ದು, ಆ ಪೈಕಿ ಗೂಗಲ್‌ ಪಿಕ್ಸೆಲ್ 6a ಮೊಬೈಲ್‌ ಗಮನ ಸೆಳೆವ ಆಫರ್‌ ಬೆಲೆಗೆ ಖರೀದಿಗೆ ಲಭ್ಯ ಇದೆ.

ಹೌದು, ಫ್ಲಿಪ್‌ಕಾರ್ಟ್‌ ತಾಣದ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ನಲ್ಲಿ ಗೂಗಲ್‌ ಪಿಕ್ಸೆಲ್ 6a ಸ್ಮಾರ್ಟ್‌ಫೋನ್‌ ಶೇ. 21%% ರಷ್ಟು ನೇರ ರಿಯಾಯಿತಿ ಪಡೆದಿದ್ದು, 6 GB RAM + 128 GB ವೇರಿಯಂಟ್‌ ಫೋನ್‌ 34,499ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಬ್ಯಾಂಕ್ ಆಫರ್‌, ಎಕ್ಸ್‌ಚೇಂಜ್ ಕೊಡುಗೆ ಹಾಗೂ ಇತರೆ ಆಫರ್‌ ಸೇರಿದರೆ ಈ ಫೋನ್‌ ಅನ್ನು 26,999ರೂ. ಗಳಿಗೆ ಖರೀದಿಸಬಹುದು.

ಗೂಗಲ್‌ನ ಈ ಅತ್ಯುತ್ತಮ ಕ್ಯಾಮೆರಾ ಫೋನಿಗೆ ಭರ್ಜರಿ ಡಿಸ್ಕೌಂಟ್‌!

ಇನ್ನು ಗೂಗಲ್‌ನ ಈ ಫೋನ್‌ 6GB RAM ಮತ್ತು 128 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ. ಹಾಗೆಯೇ ಇದು ಆಕ್ಟಾ ಕೋರ್ ಗೂಗಲ್ ಟೆನ್ಸರ್ SoC ಮತ್ತು ಟೈಟಾನ್ M2 ಬಲದ ಪ್ರೊಸೆಸರ್ ಪಡೆದುಕೊಂಡಿದೆ. ಹಾಗಾದರೇ ಇನ್ನುಳಿದಂತೆ ಗೂಗಲ್‌ ಪಿಕ್ಸೆಲ್ 6a ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹೀಗಿದೆ

ಗೂಗಲ್‌ ಪಿಕ್ಸೆಲ್‌ 6a ಮೊಬೈಲ್‌ 90Hz ರಿಫ್ರೆಶ್ ರೇಟ್‌ ಒಳಗೊಂಡ 6.1 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ OLED ಡಿಸ್‌ಪ್ಲೇ ಪಡೆದಿದ್ದು, ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದು 20:9 ರಚನೆಯ ಅನುಪಾತವನ್ನು ಪಡೆದಿದೆ. ಜೊತೆಗೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 4 ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಇದು ಆಲ್‌ವೇಸ್‌ ಆನ್‌ ಡಿಸ್‌ಪ್ಲೇ ಫೀಚರ್ಸ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಸಾಮರ್ಥ್ಯ ಯಾವುದು

ಗೂಗಲ್‌ ಪಿಕ್ಸೆಲ್ 6a ಮೊಬೈಲ್‌ ಆಕ್ಟಾ ಕೋರ್ ಗೂಗಲ್ ಟೆನ್ಸರ್ SoC ಮತ್ತು ಟೈಟಾನ್ M2 ಸೆಕ್ಯುರಿಟಿ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು, ಹಾಗೆಯೇ ಇದು ಮಾಲಿ G78 MP20 ಸಪೋರ್ಟ್‌ ಅನ್ನು ಪಡೆದುಕೊಂಡಿದೆ. ಹಾಗೆಯೇ ಇದು ಆಂಡ್ರಾಯ್ಡ್‌ 12 ಓಎಸ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಇದರ ಜೊತೆಗೆ ಈ ಮೊಬೈಲ್‌ 6GB RAM ಮತ್ತು 128 GB ಆಂತರೀಕ ಸ್ಟೋರೇಜ್‌ ಅನ್ನು ಪಡೆದುಕೊಂಡಿದೆ.

ಕ್ಯಾಮೆರಾ ಸೆನ್ಸಾರ್‌ ರಚನೆ ಮಾಹಿತಿ

ಗೂಗಲ್‌ ಪಿಕ್ಸೆಲ್ 6a ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 12 ಮೆಗಾ ಪಿಕ್ಸೆಲ್‌ ಅನ್ನು ಸಾಮರ್ಥ್ಯವನ್ನು ಒಳಗೊಂಡಿದ್ದು, ಹಾಗೆಯೇ ಸೆಕೆಂಡರಿ ಕ್ಯಾಮೆರಾ 12 ಮೆಗಾ ಪಿಕ್ಸೆಲ್‌ ಅಲ್ಟ್ರಾ ವೈಡ್ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಇದಲ್ಲದೆ ಈ ಮೊಬೈಲ್‌ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಮ್ಯಾಜಿಕ್ ಎರೇಸರ್ ಮತ್ತು ನೈಟ್‌ಸೈಟ್‌ನಂತಹ ಹಲವಾರು ಸಾಫ್ಟ್‌ವೇರ್ ಆಧಾರಿತ ಕ್ಯಾಮೆರಾ ಫೀಚರ್ಸ್‌ಗಳನ್ನು ಹೊಂದಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಮಾಹಿತಿ

ಗೂಗಲ್‌ ಪಿಕ್ಸೆಲ್ 6a ಮೊಬೈಲ್‌ 4,306 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಹಾಗೆಯೇ ಇದು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, ಮತ್ತು USB ಟೈಪ್-C ಪೋರ್ಟ್ ಅನ್ನು ಸೌಲಭ್ಯ ಸಹ ಸಪೋರ್ಟ್ ಸೌಲಭ್ಯ ಹೊಂದಿದೆ.

Best Mobiles in India

English summary
Google Pixel 6a available at biggest discount in amazon. know price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+