ಗೂಗಲ್‌ ಪಿಕ್ಸಲ್‌ 6a ಫೋನ್‌ಗೆ ಸಖತ್‌ ಡಿಸ್ಕೌಂಟ್‌; ಈ ಅವಕಾಶ ಮತ್ತೆ ಸಿಗಲ್ಲ!

|

ಸರ್ಚ್ ಇಂಜಿನ್‌ ದೈತ್ಯ ಗೂಗಲ್‌ ಸಂಸ್ಥೆಯ ಪ್ರಮುಖ ಪಿಕ್ಸಲ್‌ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾದ ಗೂಗಲ್‌ ಪಿಕ್ಸಲ್‌ 6a (Google Pixel 6a) ಖರೀದಿಸುವ ಗ್ರಾಹಕರಿಗೆ ಈಗ ಮತ್ತೆ ಭರ್ಜರಿ ಸಿಹಿಸುದ್ದಿ ಇದೆ. ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಗೂಗಲ್‌ ಪಿಕ್ಸಲ್‌ 6a ಸ್ಮಾರ್ಟ್‌ಫೋನ್‌ ಸಖತ್‌ ಡಿಸ್ಕೌಂಟ್‌ ದರದಲ್ಲಿ ಖರೀದಿಗೆ ಲಭ್ಯವಿದೆ.

ಗೂಗಲ್‌ ಪಿಕ್ಸಲ್‌ 6a ಫೋನ್‌ಗೆ ಸಖತ್‌ ಡಿಸ್ಕೌಂಟ್‌; ಈ ಅವಕಾಶ ಮತ್ತೆ ಸಿಗಲ್ಲ!

ಹೌದು, ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಗೂಗಲ್‌ ಪಿಕ್ಸಲ್‌ 6a ಸ್ಮಾರ್ಟ್‌ಫೋನ್‌ 6GB RAM ಸ್ಟೋರೇಜ್‌ನ ವೇರಿಯಂಟ್‌ 32,999ರೂ. ಗಳ ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಫೋನ್ ಮೂಲ ದರ 43,999ರೂ. ಆಗಿದೆ. ಇದಲ್ಲದೇ ಸುಮಾರು 21,000ರೂ. ವರೆಗೆ (ಹಳೆಯ ಫೋನ್‌ ಕಾರ್ಯವೈಖರಿ ಸ್ಥಿತಿ ಆಧರಿಸಿ) ಎಕ್ಸ್‌ಚೇಂಜ್ ಆಫರ್‌ ಸಹ ನೀಡಲಾಗಿದೆ. ಇದರೊಂದಿಗೆ ಕೆಲವು ಆಯ್ದ ಬ್ಯಾಂಕ್‌ಗಳಿಂದ ಇನ್‌ಸ್ಟಂಟ್ ಡಿಸ್ಕೌಂಟ್‌ ಕೊಡುಗೆ ದೊರೆಯುತ್ತದೆ ಹಾಗೂ ನೋ ಕಾಸ್ಟ್‌ ಇಎಮ್‌ಐ ಸೌಲಭ್ಯದ ಆಯ್ಕೆಗಳು ಸಹ ಲಭ್ಯ ಇವೆ.

ಮೀಡ್‌ರೇಂಜ್‌ ವಿಭಾಗದಲ್ಲಿ ಪ್ರಮುಖ ಫೋನ್‌ ಆಗಿ ಕಾಣಿಸಿಕೊಂಡಿರುವ ಗೂಗಲ್‌ ಪಿಕ್ಸಲ್‌ 6a ಫೋನ್‌ OLED ಡಿಸ್‌ಪ್ಲೇ ಹೊಂದಿದ್ದು, 1080 x 2400 ಪಿಕ್ಸಲ್‌ ರೆಸಲ್ಯೂಶನ್ ಪಡೆದಿದೆ. ಹಾಗೆಯೇ ಈ ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಹಾಗಾದರೆ ಗೂಗಲ್‌ ಪಿಕ್ಸಲ್‌ 6a ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಗೂಗಲ್‌ ಪಿಕ್ಸಲ್‌ 6a ಫೋನ್‌ಗೆ ಸಖತ್‌ ಡಿಸ್ಕೌಂಟ್‌; ಈ ಅವಕಾಶ ಮತ್ತೆ ಸಿಗಲ್ಲ!

ಗೂಗಲ್‌ ಪಿಕ್ಸೆಲ್ 6a: ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್‌ 90Hz ರಿಫ್ರೆಶ್ ರೇಟ್‌ ಒಳಗೊಂಡ 6.1 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ OLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದು 20:9 ರಚನೆಯ ಅನುಪಾತವನ್ನು ಪಡೆದಿದೆ. ಜೊತೆಗೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 4 ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಇದು ಆಲ್‌ವೇಸ್‌ ಆನ್‌ ಡಿಸ್‌ಪ್ಲೇ ಫೀಚರ್ಸ್‌ ಅನ್ನು ಹೊಂದಿದೆ.

ಗೂಗಲ್‌ ಪಿಕ್ಸೆಲ್ 6a: ಪ್ರೊಸೆಸರ್‌ ಸಾಮರ್ಥ್ಯ ಏನು?
ಗೂಗಲ್‌ ಪಿಕ್ಸೆಲ್ 6a ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಗೂಗಲ್ ಟೆನ್ಸರ್ SoC ಮತ್ತು ಟೈಟಾನ್ M2 ಸೆಕ್ಯುರಿಟಿ ಕೊಪ್ರೊಸೆಸರ್‌ ಹೊಂದಿದೆ. ಇದು ಮಾಲಿ G78 MP20 ಸಪೋರ್ಟ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ಓಎಸ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಈ ಪ್ರೊಸೆಸರ್‌ ಗೂಗಲ್‌ ಪಿಕ್ಸೆಲ್‌ 6 ಮತ್ತು ಗೂಗಲ್‌ ಪಿಕ್ಸೆಲ್‌ 6 ಪ್ರೊ ಸ್ಮಾರ್ಟ್‌ಫೋನ್‌ ಗಳಿಗೂ ಕೂಡ ಪವರ್‌ ನೀಡಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 6GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ.

ಗೂಗಲ್‌ ಪಿಕ್ಸಲ್‌ 6a ಫೋನ್‌ಗೆ ಸಖತ್‌ ಡಿಸ್ಕೌಂಟ್‌; ಈ ಅವಕಾಶ ಮತ್ತೆ ಸಿಗಲ್ಲ!

ಗೂಗಲ್‌ ಪಿಕ್ಸೆಲ್ 6a: ಕ್ಯಾಮೆರಾ ಸೆಟ್‌ಅಪ್‌ ಯಾವುದು?
ಗೂಗಲ್‌ ಪಿಕ್ಸೆಲ್ 6a ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾ ಪಿಕ್ಸೆಲ್‌ ಅಲ್ಟ್ರಾ ವೈಡ್ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಮ್ಯಾಜಿಕ್ ಎರೇಸರ್ ಮತ್ತು ನೈಟ್‌ಸೈಟ್‌ನಂತಹ ಹಲವಾರು ಸಾಫ್ಟ್‌ವೇರ್ ಆಧಾರಿತ ಕ್ಯಾಮೆರಾ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಗೂಗಲ್‌ ಪಿಕ್ಸೆಲ್ 6a: ಬ್ಯಾಟರಿ ಬ್ಯಾಕ್‌ಅಪ್‌ ಪವರ್‌ ಎಷ್ಟು?
ಗೂಗಲ್‌ ಪಿಕ್ಸೆಲ್ 6a ಸ್ಮಾರ್ಟ್‌ಫೋನ್‌ 4,306 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇದು ಅಡಾಪ್ಟಿವ್ ಬ್ಯಾಟರಿಯಾಗಿದ್ದು, ಎಕ್ಸ್‌ಟ್ರೀಮ್ ಬ್ಯಾಟರಿ ಸೇವರ್ ಮೋಡ್‌ನಲ್ಲಿರುವಾಗ 24 ಗಂಟೆಗಳು ಮತ್ತು 72 ಗಂಟೆಗಳವರೆಗೆ ಬ್ಯಾಕ್‌ಅಪ್‌ ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ.

Best Mobiles in India

English summary
Google Pixel 6a, which was launched at a whopping Rs 43,900, is now down to Rs 29,900 on Flipkart. know more details in kannada.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X