Home
ಸುದ್ದಿಜಾಲ

ಗೂಗಲ್‌ ಪಿಕ್ಸಲ್‌ 6a ಫೋನಿನ ಡಿಸ್ಕೌಂಟ್‌ ಬೆಲೆ ತಿಳಿದ್ರೆ, ಖಂಡಿತಾ ಶಾಕ್‌ ಆಗ್ತೀರಾ!

ಜನಪ್ರಿಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಆನ್‌ಲೈನ್‌ ಶಾಪಿಂಗ್‌ ಪ್ರಿಯರನ್ನು ಸೆಳೆಯಲು ಏನಾದರೊಂದು ಕೊಡುಗೆ ನೀಡುತ್ತಲೇ ಮುನ್ನಡೆದಿದೆ. ಅದರಲ್ಲಿಯೂ ಸ್ಮಾರ್ಟ್‌ಫೊನ್‌ಗಳಿಗೆ ಭರ್ಜರಿ ರಿಯಾಯಿತಿ ಘೋಷಿಸುತ್ತದೆ. ಸದ್ಯ ಗೂಗಲ್‌ ಸಂಸ್ಥೆಯ ಗೂಗಲ್‌ ಪಿಕ್ಸಲ್‌ 6a ಸ್ಮಾರ್ಟ್‌ಫೋನಿಗೆ ಸಖತ್‌ ಡಿಸ್ಕೌಂಟ್‌ ಲಭ್ಯ ಮಾಡಿದ್ದು, ಗ್ರಾಹಕರು OMG ಎನ್ನುವಂತೆ ಮಾಡಿದೆ.

ಹೌದು, ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಗೂಗಲ್‌ ಪಿಕ್ಸಲ್‌ 6a ಸ್ಮಾರ್ಟ್‌ಫೋನ್‌ 40% ರಷ್ಟು ಡಿಸ್ಕೌಂಟ್‌ ದರ ಪಡೆದಿದೆ. ಗೂಗಲ್‌ ಪಿಕ್ಸಲ್‌ 6a ಫೋನಿನ 6 GB RAM + 128 GB ಸ್ಟೋರೇಜ್‌ ವೇರಿಯಂಟ್‌ 43,999ರೂ. ಪ್ರೈಸ್‌ ಟ್ಯಾಗ್‌ ಹೊಂದಿದ್ದು, ಫ್ಲಿಪ್‌ಕಾರ್ಟ್‌ ಆಫರ್‌ನಲ್ಲಿ ಗ್ರಾಹಕರು 25,999ರೂ. ಗಳಿಗೆ ಖರೀದಿ ಮಾಡಲು ಅವಕಾಶ ಇದೆ.

ಗೂಗಲ್‌ ಪಿಕ್ಸಲ್‌ 6a ಫೋನಿನ ಡಿಸ್ಕೌಂಟ್‌ ಬೆಲೆ ತಿಳಿದ್ರೆ, ಶಾಕ್‌ ಆಗ್ತೀರಾ!

ಅಂದಹಾಗೆ ಮೀಡ್‌ರೇಂಜ್‌ ವಿಭಾಗದಲ್ಲಿ ಆಕರ್ಷಕ ಮೊಬೈಲ್‌ ಆಗಿ ಕಾಣಿಸಿಕೊಂಡಿರುವ ಗೂಗಲ್‌ ಪಿಕ್ಸಲ್‌ 6a ಫೋನ್‌ OLED ಡಿಸ್‌ಪ್ಲೇ ಅನ್ನು ಪಡೆದಿದ್ದು, 1080 x 2400 ಪಿಕ್ಸಲ್‌ ರೆಸಲ್ಯೂಶನ್ ಒಳಗೊಂಡಿದೆ. ಈ ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, 12 ಮೆಗಾಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದಂತೆ ಗೂಗಲ್‌ ಪಿಕ್ಸಲ್‌ 6a ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಗೂಗಲ್‌ ಪಿಕ್ಸೆಲ್ 6a ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಮಾಹಿತಿ : ಗೂಗಲ್‌ ಪಿಕ್ಸೆಲ್‌ 6a ಮೊಬೈಲ್‌ 90Hz ರಿಫ್ರೆಶ್ ರೇಟ್‌ ಒಳಗೊಂಡ 6.1 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ OLED ಡಿಸ್‌ಪ್ಲೇ ಪಡೆದಿದ್ದು, ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದು 20:9 ರಚನೆಯ ಅನುಪಾತವನ್ನು ಪಡೆದಿದೆ. ಜೊತೆಗೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 4 ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಇದು ಆಲ್‌ವೇಸ್‌ ಆನ್‌ ಡಿಸ್‌ಪ್ಲೇ ಫೀಚರ್ಸ್‌ ಅನ್ನು ಹೊಂದಿದೆ.

ಗೂಗಲ್‌ ಪಿಕ್ಸೆಲ್ 6a ಪ್ರೊಸೆಸರ್‌ ಸಾಮರ್ಥ್ಯ ಯಾವುದು : ಗೂಗಲ್‌ ಪಿಕ್ಸೆಲ್ 6a ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಗೂಗಲ್ ಟೆನ್ಸರ್ SoC ಮತ್ತು ಟೈಟಾನ್ M2 ಸೆಕ್ಯುರಿಟಿ ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದ್ದು, ಇದರ ಜೊತೆಗೆ ಇದು ಮಾಲಿ G78 MP20 ಸಪೋರ್ಟ್‌ ಅನ್ನು ಪಡೆದುಕೊಂಡಿದೆ.

ಹಾಗೆಯೇ ಇದು ಆಂಡ್ರಾಯ್ಡ್‌ 12 ಓಎಸ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಈ ಪ್ರೊಸೆಸರ್‌ ಗೂಗಲ್‌ ಪಿಕ್ಸೆಲ್‌ 6 ಮತ್ತು ಗೂಗಲ್‌ ಪಿಕ್ಸೆಲ್‌ 6 ಪ್ರೊ ಸ್ಮಾರ್ಟ್‌ಫೋನ್‌ ಗಳಿಗೂ ಕೂಡ ಪವರ್‌ ನೀಡಲಿದೆ. ಹಾಗೆಯೇ ಈ ಮೊಬೈಲ್‌ 6GB RAM ಮತ್ತು 128 GB ಆಂತರೀಕ ಸ್ಟೋರೇಜ್‌ ಅನ್ನು ಪಡೆದುಕೊಂಡಿದೆ.

ಗೂಗಲ್‌ ಪಿಕ್ಸೆಲ್ 6a ಕ್ಯಾಮೆರಾ ರಚನೆ ವಿವರ : ಗೂಗಲ್‌ ಪಿಕ್ಸೆಲ್ 6a ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 12 ಮೆಗಾ ಪಿಕ್ಸೆಲ್‌ ಅನ್ನು ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಹಾಗೆಯೇ ಸೆಕೆಂಡರಿ ಕ್ಯಾಮೆರಾ 12 ಮೆಗಾ ಪಿಕ್ಸೆಲ್‌ ಅಲ್ಟ್ರಾ ವೈಡ್ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಮ್ಯಾಜಿಕ್ ಎರೇಸರ್ ಮತ್ತು ನೈಟ್‌ಸೈಟ್‌ನಂತಹ ಹಲವಾರು ಸಾಫ್ಟ್‌ವೇರ್ ಆಧಾರಿತ ಕ್ಯಾಮೆರಾ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ.

ಗೂಗಲ್‌ ಪಿಕ್ಸೆಲ್ 6a ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ : ಗೂಗಲ್‌ ಪಿಕ್ಸೆಲ್ 6a ಸ್ಮಾರ್ಟ್‌ಫೋನ್‌ 4,306 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಹಾಗೆಯೇ ಇದು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, ಮತ್ತು USB ಟೈಪ್-C ಪೋರ್ಟ್ ಅನ್ನು ಸೌಲಭ್ಯ ಸಹ ಸಪೋರ್ಟ್ ಮಾಡುತ್ತದೆ.

Best Mobiles in India

English summary
Google Pixel 6a big price drop on flipkart. check offer price; Should you buy it.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+