ಗೂಗಲ್‌ ಪಿಕ್ಸಲ್‌ 6a ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!..ಭಾರೀ ಉಳಿತಾಯ!

|

ಸರ್ಚ್ ಇಂಜಿನ್‌ ದೈತ್ಯ ಗೂಗಲ್‌ ಸಂಸ್ಥೆಯು ಜನಪ್ರಿಯ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾದ ಗೂಗಲ್‌ ಪಿಕ್ಸಲ್‌ 6a (Google Pixel 6a) ಖರೀದಿಸುವ ಗ್ರಾಹಕರಿಗೆ ಈಗ ಭಾರೀ ಸಿಹಿಸುದ್ದಿ ಇದೆ. ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಗೂಗಲ್‌ ಪಿಕ್ಸಲ್‌ 6a ಸ್ಮಾರ್ಟ್‌ಫೋನ್‌ ಗಮನ ಸೆಳೆಯುವ ಬೆಲೆ ಇಳಿಕೆ ಕಂಡಿದೆ.

ಫ್ಲಿಪ್‌ಕಾರ್ಟ್‌ನಲ್ಲಿ

ಹೌದು, ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಗೂಗಲ್‌ ಪಿಕ್ಸಲ್‌ 6a (Google Pixel 6a) ಫೋನ್‌ ಶೇ.29 ರಿಯಾಯಿತಿ ಪಡೆದಿದೆ. ಪಿಕ್ಸಲ್‌ 6a ಫೋನ್ 6 GB RAM ಸ್ಟೋರೇಜ್‌ನ ವೇರಿಯಂಟ್‌ 43,999ರೂ. ಪ್ರೈಸ್‌ ಟ್ಯಾಗ್‌ ಹೊಂದಿದ್ದು, ಕೊಡುಗೆಯಲ್ಲಿ 30,999ರೂ. ಗಳಲ್ಲಿ ಕಾಣಿಸಿಕೊಂಡಿದೆ. ಇದಲ್ಲದೇ ಸುಮಾರು 18,500ರೂ. ವರೆಗೆ ಎಕ್ಸ್‌ಚೇಂಜ್ ಆಫರ್‌ ಸಹ ನೀಡಲಾಗಿದೆ.

ಇನ್‌ಸ್ಟಂಟ್

ಇದರೊಂದಿಗೆ ಕೆಲವು ಆಯ್ದ ಬ್ಯಾಂಕ್‌ಗಳಿಂದ ಇನ್‌ಸ್ಟಂಟ್ ಡಿಸ್ಕೌಂಟ್‌ ಕೊಡುಗೆ ದೊರೆಯುತ್ತದೆ ಹಾಗೂ ನೋ ಕಾಸ್ಟ್‌ ಇಎಮ್‌ಐ ಸೌಲಭ್ಯದ ಆಯ್ಕೆಗಳು ಸಹ ಲಭ್ಯ ಇವೆ. ಹಾಗಾದರೆ ಗೂಗಲ್‌ ಪಿಕ್ಸಲ್‌ 6a ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್‌ 90Hz ರಿಫ್ರೆಶ್ ರೇಟ್‌ ಒಳಗೊಂಡ 6.1 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ OLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದು 20:9 ರಚನೆಯ ಅನುಪಾತವನ್ನು ಪಡೆದಿದೆ. ಜೊತೆಗೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಇದು ಆಲ್‌ವೇಸ್‌ ಆನ್‌ ಡಿಸ್‌ಪ್ಲೇ ಫೀಚರ್ಸ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಸಾಮರ್ಥ್ಯ ಏನು?

ಪ್ರೊಸೆಸರ್‌ ಸಾಮರ್ಥ್ಯ ಏನು?

ಗೂಗಲ್‌ ಪಿಕ್ಸೆಲ್ 6a ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಗೂಗಲ್ ಟೆನ್ಸರ್ SoC ಮತ್ತು ಟೈಟಾನ್ M2 ಸೆಕ್ಯುರಿಟಿ ಕೊಪ್ರೊಸೆಸರ್‌ ಹೊಂದಿದೆ. ಇದು ಮಾಲಿ G78 MP20 ಸಪೋರ್ಟ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಪ್ರೊಸೆಸರ್‌ ಗೂಗಲ್‌ ಪಿಕ್ಸೆಲ್‌ 6 ಮತ್ತು ಗೂಗಲ್‌ ಪಿಕ್ಸೆಲ್‌ 6 ಪ್ರೊ ಸ್ಮಾರ್ಟ್‌ಫೋನ್‌ಗಳಿಗೂ ಕೂಡ ಪವರ್‌ ನೀಡಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ.

ಕ್ಯಾಮೆರಾ ಸೆಟ್‌ಅಪ್‌ ಯಾವುದು?

ಕ್ಯಾಮೆರಾ ಸೆಟ್‌ಅಪ್‌ ಯಾವುದು?

ಗೂಗಲ್‌ ಪಿಕ್ಸೆಲ್ 6a ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಮ್ಯಾಜಿಕ್ ಎರೇಸರ್ ಮತ್ತು ನೈಟ್‌ಸೈಟ್‌ನಂತಹ ಹಲವಾರು ಸಾಫ್ಟ್‌ವೇರ್ ಆಧಾರಿತ ಕ್ಯಾಮೆರಾ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ? ಇತರೆ ಫೀಚರ್ಸ್‌ಗಳೇನು?

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ? ಇತರೆ ಫೀಚರ್ಸ್‌ಗಳೇನು?

ಗೂಗಲ್‌ ಪಿಕ್ಸೆಲ್ 6a ಸ್ಮಾರ್ಟ್‌ಫೋನ್‌ 4,306mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇದು ಅಡಾಪ್ಟಿವ್ ಬ್ಯಾಟರಿಯಾಗಿದ್ದು, ಎಕ್ಸ್‌ಟ್ರೀಮ್ ಬ್ಯಾಟರಿ ಸೇವರ್ ಮೋಡ್‌ನಲ್ಲಿರುವಾಗ 24 ಗಂಟೆಗಳು ಮತ್ತು 72 ಗಂಟೆಗಳವರೆಗೆ ಬ್ಯಾಕ್‌ಅಪ್‌ ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ.

Best Mobiles in India

English summary
Google Pixel 6a can be purchased under Rs 30000 on flipkart: Details.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X