Home
ಸುದ್ದಿಜಾಲ

ಭಾರತದಲ್ಲಿ ಗೂಗಲ್‌ ಪಿಕ್ಸೆಲ್‌ 6a ಪ್ರಿ ಆರ್ಡರ್‌ ಪ್ರಾರಂಭ!..ಆಕರ್ಷಕ ಆಫರ್‌ ಲಭ್ಯ!

ಜಾಗತಿಕ ಮಾರುಕಟ್ಟೆಯಲ್ಲಿ ಟೆಕ್‌ ದಿಗ್ಗಜ ಎನಿಸಿಕೊಂಡಿರುವ ಗೂಗಲ್‌ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿಯೂ ಕೂಡ ತನ್ನ ಪ್ರಾಬಲ್ಯ ಸಾಧಿಸಿದೆ. ಗೂಗಲ್‌ ಪಿಕ್ಸೆಲ್‌ ಸರಣಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ಗಮನ ಸೆಳೆದಿದೆ. ಈಗಾಗಲೇ ಗೂಗಲ್‌ ಪಿಕ್ಸೆಲ್‌ ಸರಣಿಯಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದೀಗ ತನ್ನ ಬಹು ನಿರೀಕ್ಷಿತ ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್‌ ಅನ್ನು ಭಾರತ ಮಾರುಕಟ್ಟೆಯಲ್ಲಿ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಇದೀಗ ಫ್ಲಿಪ್‌ಕಾರ್ಟ್‌ ಮೂಲಕ ಪ್ರೀ ಆರ್ಡರ್‌ಗೆ ಲಭ್ಯವಿದೆ.

ಗೂಗಲ್‌

ಹೌದು, ಗೂಗಲ್‌ ಕಂಪೆನಿ ತನ್ನ ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ವರ್ಷದ ಗೂಗಲ್‌ ವಾರ್ಷಿಕ ಸಮ್ಮೇಳನ ಗೂಗಲ್‌ I/Oನಲ್ಲಿ ಗೂಗಲ್‌ ಪಿಕ್ಸೆಲ್‌ 6a ಫೋನ್‌ ಅನ್ನು ಅನಾವರಣಗೊಳಿಸಲಾಗಿತ್ತು. ಆದರೆ ನಾನಾ ಕಾರಣಗಳಿಂದ ಭಾರತದಲ್ಲಿ ಈ ಸ್ಮಾರ್ಟ್‌ಫೋನಿನ ಬಿಡುಗಡೆ ತಡವಾಗಿತ್ತು. ಇದೀಗ ಅಂತಿಮವಾಗಿ ಇದೀಗ ಭಾರತದಲ್ಲಿ ಮುಂಗಡ-ಆರ್ಡರ್‌ಗಳಿಗೆ ಮುಕ್ತವಾಗಿದೆ. ಇದರ ಜೊತೆಗೆ ಗೂಗಲ್‌ ಪಿಕ್ಸೆಲ್‌ ಬಡ್ಸ್‌ ಪ್ರೊ ಕೂಡ ಭಾರತದಲ್ಲಿ ಲಾಂಚ್‌ ಆಗಿದೆ.

ಗೂಗಲ್‌ ಪಿಕ್ಸೆಲ್‌ 6a

ಇನ್ನು ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್‌ ಗೂಗಲ್‌ ಟೆನ್ಸರ್ ಜಿಎಸ್ 101 ಚಿಪ್‌ಸೆಟ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾವನ್ನು ಪಡೆದುಕೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ವೇಗದ ಚಾರ್ಜಿಂಗ್‌ ಬೆಂಬಲವನ್ನು ಪಡೆದಿರುವ 4,306mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಇದು ಚಾರ್ಕೋಲ್ ಮತ್ತು ಚಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದ್ದು, ಭಾರತದಲ್ಲಿ 43,999ರೂ. ಬೆಲೆಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿದೆ?

ಡಿಸ್‌ಪ್ಲೇ ರಚನೆ ಹೇಗಿದೆ?

ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್‌ 90Hz ರಿಫ್ರೆಶ್ ರೇಟ್‌ ಒಳಗೊಂಡ 6.1 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ OLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದು 20:9 ರಚನೆಯ ಅನುಪಾತವನ್ನು ಪಡೆದಿದೆ. ಜೊತೆಗೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಇದು ಆಲ್‌ವೇಸ್‌ ಆನ್‌ ಡಿಸ್‌ಪ್ಲೇ ಫೀಚರ್ಸ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಸಾಮರ್ಥ್ಯ ಏನು?

ಪ್ರೊಸೆಸರ್‌ ಸಾಮರ್ಥ್ಯ ಏನು?

ಗೂಗಲ್‌ ಪಿಕ್ಸೆಲ್ 6a ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಗೂಗಲ್ ಟೆನ್ಸರ್ SoC ಮತ್ತು ಟೈಟಾನ್ M2 ಸೆಕ್ಯುರಿಟಿ ಕೊಪ್ರೊಸೆಸರ್‌ ಹೊಂದಿದೆ. ಇದು ಮಾಲಿ G78 MP20 ಸಪೋರ್ಟ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಪ್ರೊಸೆಸರ್‌ ಗೂಗಲ್‌ ಪಿಕ್ಸೆಲ್‌ 6 ಮತ್ತು ಗೂಗಲ್‌ ಪಿಕ್ಸೆಲ್‌ 6 ಪ್ರೊ ಸ್ಮಾರ್ಟ್‌ಫೋನ್‌ಗಳಿಗೂ ಕೂಡ ಪವರ್‌ ನೀಡಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ.

ಕ್ಯಾಮೆರಾ ಸೆಟ್‌ಅಪ್‌ ಯಾವುದು?

ಕ್ಯಾಮೆರಾ ಸೆಟ್‌ಅಪ್‌ ಯಾವುದು?

ಗೂಗಲ್‌ ಪಿಕ್ಸೆಲ್ 6a ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಮ್ಯಾಜಿಕ್ ಎರೇಸರ್ ಮತ್ತು ನೈಟ್‌ಸೈಟ್‌ನಂತಹ ಹಲವಾರು ಸಾಫ್ಟ್‌ವೇರ್ ಆಧಾರಿತ ಕ್ಯಾಮೆರಾ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ? ಇತರೆ ಫೀಚರ್ಸ್‌ಗಳೇನು?

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ? ಇತರೆ ಫೀಚರ್ಸ್‌ಗಳೇನು?

ಗೂಗಲ್‌ ಪಿಕ್ಸೆಲ್ 6a ಸ್ಮಾರ್ಟ್‌ಫೋನ್‌ 4,306mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇದು ಅಡಾಪ್ಟಿವ್ ಬ್ಯಾಟರಿಯಾಗಿದ್ದು, ಎಕ್ಸ್‌ಟ್ರೀಮ್ ಬ್ಯಾಟರಿ ಸೇವರ್ ಮೋಡ್‌ನಲ್ಲಿರುವಾಗ 24 ಗಂಟೆಗಳು ಮತ್ತು 72 ಗಂಟೆಗಳವರೆಗೆ ಬ್ಯಾಕ್‌ಅಪ್‌ ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್‌, ಬಾರೋಮೀಟರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಸಹ ಹೊಂದಿದೆ.ಸಂವೇ

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್‌ 43,999ರೂ. ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಇದೀಗ ಫ್ಲಿಪ್‌ಕಾರ್ಟ್‌ ಮೂಲಕ ಮುಂಗಡ ಬುಕ್ಕಿಂಗ್‌ ಮಾಡುವುದಕ್ಕೆ ಲಭ್ಯವಿದೆ. ಇದು ಇದೇ ಜುಲೈ 28 ರಿಂದ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಬರಲಿದೆ. ಈ ಸ್ಮಾರ್ಟ್‌ಫೋನ್‌ ಚಾರ್ಕೋಲ್ ಮತ್ತು ಚಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಲಾಂಚ್‌ ಆಫರ್‌ ಏನಿದೆ?

ಲಾಂಚ್‌ ಆಫರ್‌ ಏನಿದೆ?

ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್‌ ಅನ್ನು ಪ್ರಿ-ಬುಕಿಂಗ್ ಮಾಡುವವರಿಗೆ ಬಿಗ್‌ ಡಿಸ್ಕೌಂಟ್‌ ಲಭ್ಯವಾಗಲಿದೆ. ಆಕ್ಸಿಸ್ ಬ್ಯಾಂಕ್ ಕಾರ್ಡ್ ಮೂಲಕ ಖರೀದಿಸುವರಿಗೆ 39,999 ರೂ. ರಿಯಾಯಿತಿ ದೊರೆಯಲಿದೆ. ಆಕ್ಸಿಸ್ ಬ್ಯಾಂಕ್ ಕಾರ್ಡ್ ಗ್ರಾಹಕರು ಒಟ್ಟು 4000ರೂ. ವರೆಗೆ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಇದಲ್ಲದೆ ಗೂಗಲ್‌ನ ಯಾವುದೇ ಪಿಕ್ಸೆಲ್‌ ಡಿವೈಸ್‌ಗಳು ಹಾಗೂ ಇತರ ಆಯ್ದ ಸ್ಮಾರ್ಟ್‌ಫೋನ್‌ಗಳ ಎಕ್ಸ್‌ಚೇಂಜ್‌ ಆಫರ್‌ನಲ್ಲಿ 6,000ರೂ. ಬೋನಸ್ ಅಥವಾ ಯಾವುದೇ ಇತರ ಸ್ಮಾರ್ಟ್‌ಫೋನ್‌ಗಳಿಗೆ 2,000ರೂ. ಎಕ್ಸ್‌ಚೇಂಜ್‌ ಬೋನಸ್‌ ಅನ್ನು ನೀಡಲಿದೆ.

ಪಿಕ್ಸೆಲ್‌

ಇದಲ್ಲದೆ ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್‌ ಜೊತೆಗೆ ನೆಸ್ಟ್‌ ಹಬ್‌ Gen2 ಅಥವಾ ಪಿಕ್ಸೆಲ್‌ ಬಡ್ಸ್‌ A ಸರಣಿ ಅಥವಾ ಫಿಟ್‌ಬಿಟ್‌ ಇನ್ಸ್‌ಫೈರ್‌ 2 ಅನ್ನು ಖರೀದಿಸುವವರಿಗೆ ರಿಯಾಯಿತಿ ಸಿಗಲಿದೆ. ಈ ಡಿವೈಸ್‌ಗಳನ್ನು ನೀವು ಕೇವಲ 4,999ರೂಗಳಲ್ಲಿ ಪಡೆಯಬಹುದು. ಹಾಗೆಯೇ ಪಿಕ್ಸೆಲ್‌ 6a ಯುಟ್ಯೂಬ್‌ ಪ್ರೀಮಿಯಂ ಮತ್ತು ಗೂಗಲ್‌ ಒನ್‌ ಮೂರು ತಿಂಗಳ ಟ್ರಯಲ್‌ನೊಂದಿಗೆ ಬರಲಿದೆ.

Best Mobiles in India

English summary
Google Pixel 6A launched in India: started pre-orders.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+