ಗೂಗಲ್ ಪಿಕ್ಸಲ್ 6a ಬೆಲೆಯಲ್ಲಿ ಭರ್ಜರಿ ಇಳಿಕೆ!..ಖರೀದಿದಾರರಿಗೆ ಬಿಗ್ ಆಫರ್!
ಮೊಬೈಲ್ ಮಾರುಕಟ್ಟೆಯಲ್ಲಿ ಸರ್ಚ್ ಇಂಜಿನ್ ದೈತ್ಯ ಗೂಗಲ್ ಸಂಸ್ಥೆಯು ಜನಪ್ರಿಯ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾದ ಗೂಗಲ್ ಪಿಕ್ಸಲ್ 6a ಖರೀದಿಸುವ ಗ್ರಾಹಕರಿಗೆ ಈಗ ಮತ್ತೆ ಭಾರೀ ಖುಷಿ ಸಂಗತಿ ಇದೆ. ಇ ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್‌ನಲ್ಲಿ ಗೂಗಲ್ ಪಿಕ್ಸಲ್ 6a ಮೊಬೈಲ್ ಗಮನ ಸೆಳೆಯುವ ಬೆಲೆ ಇಳಿಕೆ ಕಂಡಿದೆ.
ಹೌದು, ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಗೂಗಲ್ ಪಿಕ್ಸಲ್ 6a ಫೋನ್ ಶೇ. 36% ರಷ್ಟು ನೇರ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಪಿಕ್ಸಲ್ 6a ಫೋನ್ 6 GB RAM + 128GB ಸ್ಟೋರೇಜ್‌ನ ವೇರಿಯಂಟ್ 43,999 ರೂ. ಪ್ರೈಸ್ ಟ್ಯಾಗ್ ಹೊಂದಿದ್ದು, ಕೊಡುಗೆಯಲ್ಲಿ 27,999 ರೂ. ಗಳಲ್ಲಿ ದೊರೆಯುತ್ತವೆ. ಇದರೊಂದಿಗೆ ಕೆಲವು ಆಯ್ದ ಬ್ಯಾಂಕ್‌ಗಳಿಂದ ಇನ್‌ಸ್ಟಂಟ್ ಡಿಸ್ಕೌಂಟ್ ಕೊಡುಗೆ ದೊರೆಯುತ್ತದೆ ಹಾಗೂ ನೋ ಕಾಸ್ಟ್ ಇಎಮ್‌ಐ ಸೌಲಭ್ಯದ ಆಯ್ಕೆಗಳು ಸಹ ಲಭ್ಯ ಇವೆ.

ಇನ್ನು ಈ ಫೋನ್ ಗೂಗಲ್ ಟೆನ್ಸರ್ SoC ಮತ್ತು ಟೈಟಾನ್ M2 ಸೆಕ್ಯುರಿಟಿ ಪ್ರೊಸೆಸರ್ ಪಡೆದಿದೆ. ಇದಲಕ್ಕೆ ಪೂರಕವಾಗಿ 4,306mAh ಸಾಮರ್ಥ್ಯದ ಬ್ಯಾಟರಿ ಪಡೆದಿದ್ದಾರೆ. ಈ ವಿಡಿಯೋ ಬಗ್ಗೆ ಹೆಚ್ಚಿನ ಸೌಲಭ್ಯ
ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ:
ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ 90Hz ರಿಫ್ರೆಶ್ ರೇಟ್ ಒಳಗೊಂಡ 6.1 ಇಂಚಿನ ಫುಲ್ ಹೆಚ್‌ಡಿ ಪ್ಲಸ್ OLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದು 20:9 ರಚನೆಯ ಅನುಪಾತವನ್ನು ಪಡೆದಿದೆ. ಜೊತೆಗೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಅನ್ನು ಹೊಂದಿದೆ. ಇದು ಆಲ್‌ವೇಸ್ ಆನ್ ಡಿಸ್‌ಪ್ಲೇ ಫೀಚರ್ಸ್ ಅನ್ನು ಹೊಂದಿದೆ.

ಪ್ರೊಸೆಸರ್ ಪವರ್ ಯವುದು:
ಗೂಗಲ್ ಪಿಕ್ಸೆಲ್ 6a ಮೊಬೈಲ್ ಆಕ್ಟಾ ಕೋರ್ ಗೂಗಲ್ ಟೆನ್ಸರ್ SoC ಮತ್ತು ಟೈಟಾನ್ M2 ಸೆಕ್ಯುರಿಟಿ ಪ್ರೊಸೆಸರ್ ಅನ್ನು ಹೊಂದಿದೆ. ಇದು ಮಾಲಿ G78 MP20 ಸಪೋರ್ಟ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ. ಈ ಪ್ರೊಸೆಸರ್ ಗೂಗಲ್ ಪಿಕ್ಸೆಲ್ 6 ಮತ್ತು ಗೂಗಲ್ ಪಿಕ್ಸೆಲ್ 6 ಪ್ರೊ ಸ್ಮಾರ್ಟ್‌ಫೋನ್‌ಗಳಿಗೂ ಕೂಡ ಪವರ್ ಒದಗಿಸಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಪಡೆದಿದೆ.
ಕ್ಯಾಮೆರಾ ಸೆಟ್‌ಅಪ್ ಯಾವುದು :
ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಮ್ಯಾಜಿಕ್ ಎರೇಸರ್ ಮತ್ತು ನೈಟ್‌ಸೈಟ್‌ನಂತಹ ಹಲವಾರು ಸಾಫ್ಟ್‌ವೇರ್ ಆಧಾರಿತ ಕ್ಯಾಮೆರಾ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬ್ಯಾಟರಿ ಬ್ಯಾಕ್‌ಅಪ್ ಹಾಗೂ ಇತರೆ ಆಯ್ಕೆಗಳು:
ಗೂಗಲ್ ಪಿಕ್ಸೆಲ್ 6a ಮೊಬೈಲ್ 4,306 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇದು ವೇಗದ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಇದು ಅಡಾಪ್ಟಿವ್ ಬ್ಯಾಟರಿಯಾಗಿದ್ದು, ಎಕ್ಸ್‌ಟ್ರೀಮ್ ಬ್ಯಾಟರಿ ಸೇವರ್ ಮೋಡ್‌ನಲ್ಲಿರುವಾಗ 24 ಗಂಟೆಗಳು ಮತ್ತು 72 ಗಂಟೆಗಳವರೆಗೆ ಬ್ಯಾಕ್‌ಅಪ್ ಲಭ್ಯ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ.


Click it and Unblock the Notifications








