ಗೂಗಲ್‌ ಪಿಕ್ಸಲ್ 7 ಮತ್ತು ಪಿಕ್ಸಲ್ 7 ಪ್ರೊ ಮೇಲೆ 15,000ರೂ. ರಿಯಾಯಿತಿ!..ಇಲ್ಲಿದೆ ವಿವರ!

|

ಇತ್ತೀಚಿಗೆ ಗೂಗಲ್‌ ಸಂಸ್ಥೆಯು ಬಿಡುಗಡೆ ಮಾಡಿರುವ ಗೂಗಲ್‌ ಪಿಕ್ಸಲ್ 7 ಸ್ಮಾರ್ಟ್‌ಫೋನ್ ಸರಣಿಯು ಈಗಾಗಲೇ ಹೈ ಎಂಡ್ ಸ್ಮಾರ್ಟ್‌ಫೋನ್‌ ಪ್ರಿಯರನ್ನು ಸೆಳೆದಿದೆ. ಇನ್ನು ಗೂಗಲ್‌ ಪಿಕ್ಸಲ್ 7 ಮತ್ತು ಗೂಗಲ್‌ ಪಿಕ್ಸಲ್ 7 ಪ್ರೊ ಫೋನ್‌ ಖರೀದಿ ಮಾಡುವ ಗ್ರಾಹಕರಿಗೆ ಈಗ ಭರ್ಜರಿ ಸಿಹಿಸುದ್ದಿ ಲಭ್ಯವಿದೆ. ಗ್ರಾಹಕರು ಭಾರೀ ರಿಯಾಯಿತಿಯಲ್ಲಿ ಫೋನ್ ಖರೀದಿಸಬಹುದಾಗಿದೆ.

ಕಾಮರ್ಸ್‌

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಗೂಗಲ್‌ ಪಿಕ್ಸಲ್ 7 (Pixel 7) ಮತ್ತು ಗೂಗಲ್‌ ಪಿಕ್ಸಲ್ 7 ಪ್ರೊ (Pixel 7 pro) ಖರೀದಿಗೆ ಲಭ್ಯವಾಗಲಿದೆ. ಹಾಗೆಯೇ ಎಸ್‌ಬಿಐ (SBI) ಕಾರ್ಡ್‌ ನೊಂದಿಗೆ ಪಿಕ್ಸಲ್‌ 7 ಸರಣಿಯ ಫೋನ್‌ ಖರೀದಿಸಿದರೆ, ಸುಮಾರು 15,000 ರೂ.ವರೆಗಿನ ರಿಯಾಯಿತಿ ಲಭ್ಯವಾಗಲಿದೆ. ಜೊತೆಗೆ ನೋ ಕಾಸ್ಟ್‌ EMI ಸೌಲಭ್ಯವು ಸಹ ಲಭ್ಯವಾಗಲಿದೆ. ಹಾಗೆಯೇ ಹೆಚ್ಚುವರಿಯಾಗಿ 2,250ರೂ. ವರೆಗೂ ಎಕ್ಸ್‌ಚೇಂಜ್ ಕೊಡುಗೆ ದೊರೆಯಲಿದೆ.

ಗೂಗಲ್‌ ಪಿಕ್ಸಲ್‌ 7

ಪಿಕ್ಸಲ್‌ 7 ಸರಣಿಯ ಈ ಎರಡು ಫೋನ್‌ಗಳು ಒಂದೊಂದೆ ವೇರಿಯಂಟ್‌ ಆಯ್ಕೆ ಪಡೆದಿವೆ. ಗೂಗಲ್‌ ಪಿಕ್ಸಲ್‌ 7 ಪ್ರೊ 12GB + 128GB ವೇರಿಯಂಟ್‌ 84,999ರೂ. ಬೆಲೆಯನ್ನು ಹೊಂದಿದ್ದು, ಅದೇ ರೀತಿ ಪಿಕ್ಸಲ್‌ 7 ಫೋನ್ 8GB + 128GB ವೇರಿಯಂಟ್‌ ಫೋನ್‌ 59,999ರೂ. ಗಳ ಪ್ರೈಸ್‌ ಟ್ಯಾಗ್‌ನ ಆರಂಭಿಕ ಬೆಲೆ ಪಡೆದಿವೆ. ಹಾಗಾದರೆ, ಈ ಫೋನ್‌ಗಳ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಗೂಗಲ್‌ ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌ ಫೀಚರ್ಸ್‌

ಗೂಗಲ್‌ ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌ ಫೀಚರ್ಸ್‌

ಗೂಗಲ್‌ ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌ 6.32 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಟೆನ್ಸರ್ G2 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 10.8 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಪಡೆದಿದೆ. ಜೊತೆಗೆ ಕ್ಯಾಮೆರಾ ಮೂಲಕ ವೀಡಿಯೊ ರೆಕಾರ್ಡ್‌ ಮಾಡುವಾಗ ಬ್ಲರ್‌ ಎಫೆಕ್ಟ್‌ ನೀಡುವ 'ಸಿನಿಮ್ಯಾಟಿಕ್ ಬ್ಲರ್' ಫೀಚರ್ಸ್‌ ಅನ್ನು ಕೂಡ ಒಳಗೊಂಡಿದೆ.

ಸ್ಮಾರ್ಟ್‌ಫೋನ್‌

ಗೂಗಲ್‌ ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌ 4,335mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 30W ವೇಗದ ಚಾರ್ಜಿಂಗ್ ಮತ್ತು ವಾರ್‌ಲೆಸ್ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನಲ್ಲಿ ಟ್ರೀಮ್ ಬ್ಯಾಟರಿ ಸೇವರ್ ಮೋಡ್ ಅನ್ನು ಆಕ್ಟಿವ್‌ ಮಾಡುವ ಮೂಲಕ 72 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, GPS, NFC, ಮತ್ತು USB ಟೈಪ್-C ಪೋರ್ಟ್ ಹೊಂದಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್, ಬಾರೋಮೀಟರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಗೂಗಲ್‌ ಪಿಕ್ಸೆಲ್‌ 7 ಪ್ರೊ ಸ್ಮಾರ್ಟ್‌ಫೋನ್‌

ಗೂಗಲ್‌ ಪಿಕ್ಸೆಲ್‌ 7 ಪ್ರೊ ಸ್ಮಾರ್ಟ್‌ಫೋನ್‌

ಗೂಗಲ್ ಪಿಕ್ಸೆಲ್ 7ಪ್ರೊ ಸ್ಮಾರ್ಟ್‌ಫೋನ್‌ 6.7 ಇಂಚಿನ ಕ್ವಾಡ್ ಎಚ್‌ಡಿ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಟೆನ್ಸರ್ G2 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಪಿಕ್ಸೆಲ್ 7 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕೂಡ 10.8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಆದರೆ ಈ ಸ್ಮಾರ್ಟ್‌ಫೋನ್‌ 'ಮ್ಯಾಕ್ರೋ ಫೋಕಸ್' ಫೀಚರ್ಸ್‌ ಒಳಗೊಂಡಿದೆ ಎಂದು ಗೂಗಲ್‌ ಹೇಳಿದೆ.

ಗೂಗಲ್‌ ಪಿಕ್ಸೆಲ್‌ 7 ಪ್ರೊ

ಗೂಗಲ್‌ ಪಿಕ್ಸೆಲ್‌ 7 ಪ್ರೊ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ವೇಗದ ಚಾರ್ಜಿಂಗ್ ಮತ್ತು ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, GPS, NFC, ಮತ್ತು USB ಟೈಪ್-C ಪೋರ್ಟ್ ಒಳಗೊಂಡಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್‌, ಬಾರೋಮೀಟರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.

Best Mobiles in India

English summary
Google Pixel 7 and Pixel 7 Pro Now Available in India: Up to Rs 15,000 Off with Bank Offers.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X