Home
ಸುದ್ದಿಜಾಲ

ಗೂಗಲ್‌ ಪಿಕ್ಸಲ್‌ 7 ಭಾರೀ ಡಿಸ್ಕೌಂಟ್‌ನಲ್ಲಿ ಲಭ್ಯ; ಬೊಂಬಾಟ್‌ ಆಫರ್‌!

ಗೂಗಲ್‌ ಸಂಸ್ಥೆಯು ಇತ್ತೀಚಿಗಷ್ಟೆ ಲಾಂಚ್ ಮಾಡಿರುವ ನೂತನ ಗೂಗಲ್‌ ಪಿಕ್ಸಲ್‌ 7 ಬೊಂಬಾಟ್‌ ಫೀಚರ್ಸ್‌ಗಳೊಂದಿಗೆ ಗ್ರಾಹಕರನ್ನು ಸೆಳೆದಿದೆ. ನೂತನ ಗೂಗಲ್‌ ಪಿಕ್ಸಲ್‌ 7 ಫೋನ್ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಇದೀಗ ಭರ್ಜರಿ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡಿದ್ದು, ಮೊಬೈಲ್‌ ಪ್ರಿಯರ ಗಮನ ಸೆಳೆದಿದೆ.

ಹೌದು, ಇ ಕಾಮರ್ಸ್‌ ತಾಣ ಅಮೆಜಾನ್‌ ನಲ್ಲಿ ಗೂಗಲ್‌ ಪಿಕ್ಸಲ್‌ 7 ಅನ್ನು ಗ್ರಾಹಕರು 52,400 ರೂ. ಒಳಗೆ ಖರೀದಿ ಮಾಡಬಹುದಾಗಿದೆ. ಅಮೆಜಾನ್‌ ಪ್ಲಾಟ್‌ಫಾರ್ಮ್ ನಲ್ಲಿ ಈ ಫೋನ್‌ಗೆ ಆಯ್ದ ಬ್ಯಾಂಕ್‌ಗಳಿಂದ ಆಕರ್ಷಕ ರಿಯಾಯಿತಿ ಕೊಡುಗೆಗಳು ಸಿಗಲಿವೆ. ಇದಲ್ಲದೇ ನೋ ಕಾಸ್ಟ್‌ ಇಎಮ್‌ಐ ಸೌಲಭ್ಯ ಗಳ ಆಯ್ಕೆ ಸಹ ಗ್ರಾಹಕರಿಗೆ ದೊರೆಯುತ್ತದೆ.

ಗೂಗಲ್‌ ಪಿಕ್ಸಲ್‌ 7 ಭಾರೀ ಡಿಸ್ಕೌಂಟ್‌ನಲ್ಲಿ ಲಭ್ಯ; ಬೊಂಬಾಟ್‌ ಆಫರ್‌!

ಇನ್ನು ಈ ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಇದಲ್ಲದೇ 4,335mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಇದು ಪಡೆದುಕೊಂಡಿದೆ. ಹಾಗಾದರೇ ಈ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಗೂಗಲ್‌ ಪಿಕ್ಸಲ್‌ 7 ಭಾರೀ ಡಿಸ್ಕೌಂಟ್‌ನಲ್ಲಿ ಲಭ್ಯ; ಬೊಂಬಾಟ್‌ ಆಫರ್‌!

ಗೂಗಲ್‌ ಪಿಕ್ಸೆಲ್‌ 7 ಫೀಚರ್ಸ್‌ : ಸ್ಮಾರ್ಟ್‌ಫೋನ್‌ 6.32 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಟೆನ್ಸರ್ G2 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8 GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ.

ಗೂಗಲ್‌ ಪಿಕ್ಸಲ್‌ 7 ಭಾರೀ ಡಿಸ್ಕೌಂಟ್‌ನಲ್ಲಿ ಲಭ್ಯ; ಬೊಂಬಾಟ್‌ ಆಫರ್‌!

ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 10.8 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಪಡೆದಿದೆ. ಜೊತೆಗೆ ಕ್ಯಾಮೆರಾ ಮೂಲಕ ವೀಡಿಯೊ ರೆಕಾರ್ಡ್‌ ಮಾಡುವಾಗ ಬ್ಲರ್‌ ಎಫೆಕ್ಟ್‌ ನೀಡುವ 'ಸಿನಿಮ್ಯಾಟಿಕ್ ಬ್ಲರ್' ಫೀಚರ್ಸ್‌ ಅನ್ನು ಕೂಡ ಒಳಗೊಂಡಿದೆ.

ಗೂಗಲ್‌ ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌ 4,335 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 30W ವೇಗದ ಚಾರ್ಜಿಂಗ್ ಮತ್ತು ವಾರ್‌ಲೆಸ್ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನಲ್ಲಿ ಟ್ರೀಮ್ ಬ್ಯಾಟರಿ ಸೇವರ್ ಮೋಡ್ ಅನ್ನು ಆಕ್ಟಿವ್‌ ಮಾಡುವ ಮೂಲಕ 72 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ.

ಗೂಗಲ್‌ ಪಿಕ್ಸಲ್‌ 7 ಭಾರೀ ಡಿಸ್ಕೌಂಟ್‌ನಲ್ಲಿ ಲಭ್ಯ; ಬೊಂಬಾಟ್‌ ಆಫರ್‌!

ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, GPS, NFC, ಮತ್ತು USB ಟೈಪ್-C ಪೋರ್ಟ್ ಹೊಂದಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್, ಬಾರೋಮೀಟರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಗೂಗಲ್ ಪಿಕ್ಸೆಲ್ 7 ಪ್ರೊ ಫೀಚರ್ಸ್‌ : ಸ್ಮಾರ್ಟ್‌ಫೋನ್‌ 6.7 ಇಂಚಿನ ಕ್ವಾಡ್ ಎಚ್‌ಡಿ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಟೆನ್ಸರ್ G2 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಪಿಕ್ಸೆಲ್ 7 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ.

ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕೂಡ 10.8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ವೇಗದ ಚಾರ್ಜಿಂಗ್ ಮತ್ತು ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಪಡೆದಿದೆ.

Best Mobiles in India

English summary
Google Pixel 7 5G ( Snow color, 8GB Ram 128GB Storage) is listed on Amazon at a discounted price of Rs 52,400. more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+