ಹೊಸ ಗೂಗಲ್ ಪಿಕ್ಸಲ್ 7 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ ಸಖತ್ ಡಿಸ್ಕೌಂಟ್!
ಗೂಗಲ್ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ನೂತನ ಗೂಗಲ್ ಪಿಕ್ಸಲ್ 7 (Google Pixel 7) ಆಕರ್ಷಕ ಫೀಚರ್ಸ್‌ಗಳೊಂದಿಗೆ ಗ್ರಾಹಕರನ್ನು ಸೆಳೆದಿದೆ. ಇದೀಗ ಗೂಗಲ್ ಪಿಕ್ಸಲ್ 7 ಫೋನ್ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ನಲ್ಲಿ ಭರ್ಜರಿ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರನ್ನು ಆಕರ್ಷಿಸಿದೆ. ಅಂದಹಾಗೆ ಈ ಫೋನ್ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ.

ಹೌದು, ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಗೂಗಲ್ ಪಿಕ್ಸಲ್ 7 (Google Pixel 7) ಅನ್ನು ಗ್ರಾಹಕರು 59,999ರೂ. ಬೆಲೆಯಲ್ಲಿ ಕಾಣಿಸಿಕೊಂಡಿದೆ. ಗ್ರಾಹಕರು ಹೆಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ವಹಿವಾಟಿನ ಮೇಲೆ ಖರೀದಿಸಿದರೆ, 5,000ರೂ. ರಿಯಾಯಿತಿ ಇದೆ. ಜೊತೆಗೆ ಆಕರ್ಷಕ ಎಕ್ಸ್‌ಚೇಂಜ್ ಕೊಡುಗೆ ಸಹ ಲಭ್ಯವಿದೆ. ಹಾಗಾದರೇ ಈ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.

ಭಾರತದಲ್ಲಿ ಗೂಗಲ್ ಪಿಕ್ಸೆಲ್ 7 ಸ್ಮಾರ್ಟ್‌ಫೋನ್ 59,999ರೂ. ಬೆಲೆಯಲ್ಲಿ ಬಿಡುಗಡೆ ಆಗಿದ್ದು, ಆದರೆ ಆಯ್ದ ಬ್ಯಾಂಕ್ ಕೊಡುಗೆಗಳೊಂದಿಗೆ ಈ ಫೋನ್ ಅನ್ನು ಅತ್ಯುತ್ತಮ ರಿಯಾಯಿತಿಯಲ್ಲಿ ಪಡೆಯಬಹುದು. ಖರೀದಿದಾರರು ಹೆಚ್‌ಡಿಎಫ್‌ಸಿ (HDFC) ಬ್ಯಾಂಕ್ ಕಾರ್ಡ್ ಮೂಲಕ ಖರೀದಿಸಿದರೆ, 7,000ರೂ. ವರೆಗೂ ಕ್ಯಾಶ್‌ಬ್ಯಾಕ್ ಪಡೆಯಬಹುದು. ಹಾಗೆಯೇ ಆಕರ್ಷಕ ಎಕ್ಸ್‌ಚೇಂಜ್ ಕೊಡುಗೆ ಸಹ ಲಭ್ಯವಾಗಲಿದೆ.

ಗೂಗಲ್ ಪಿಕ್ಸೆಲ್ 7 ಸ್ಮಾರ್ಟ್‌ಫೋನ್ ಫೀಚರ್ಸ್
ಗೂಗಲ್ ಪಿಕ್ಸೆಲ್ 7 ಸ್ಮಾರ್ಟ್‌ಫೋನ್ 6.32 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಟೆನ್ಸರ್ G2 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ.

ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 10.8 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಪಡೆದಿದೆ. ಜೊತೆಗೆ ಕ್ಯಾಮೆರಾ ಮೂಲಕ ವೀಡಿಯೊ ರೆಕಾರ್ಡ್ ಮಾಡುವಾಗ ಬ್ಲರ್ ಎಫೆಕ್ಟ್ ನೀಡುವ 'ಸಿನಿಮ್ಯಾಟಿಕ್ ಬ್ಲರ್' ಫೀಚರ್ಸ್ ಅನ್ನು ಕೂಡ ಒಳಗೊಂಡಿದೆ.

ಗೂಗಲ್ ಪಿಕ್ಸೆಲ್ 7 ಸ್ಮಾರ್ಟ್‌ಫೋನ್ 4,335mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 30W ವೇಗದ ಚಾರ್ಜಿಂಗ್ ಮತ್ತು ವಾರ್‌ಲೆಸ್ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನಲ್ಲಿ ಟ್ರೀಮ್ ಬ್ಯಾಟರಿ ಸೇವರ್ ಮೋಡ್ ಅನ್ನು ಆಕ್ಟಿವ್ ಮಾಡುವ ಮೂಲಕ 72 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ.

ಗೂಗಲ್ ಪಿಕ್ಸೆಲ್ 7 ಪ್ರೊ ಸ್ಮಾರ್ಟ್‌ಫೋನ್
ಗೂಗಲ್ ಪಿಕ್ಸೆಲ್ 7 ಪ್ರೊ ಸ್ಮಾರ್ಟ್‌ಫೋನ್ 6.7 ಇಂಚಿನ ಕ್ವಾಡ್ ಎಚ್‌ಡಿ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಟೆನ್ಸರ್ G2 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಪಿಕ್ಸೆಲ್ 7 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಕೂಡ 10.8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ವೇಗದ ಚಾರ್ಜಿಂಗ್ ಮತ್ತು ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಪಡೆದಿದೆ.


Click it and Unblock the Notifications








