Home
ಸುದ್ದಿಜಾಲ

ಭಾರತದಲ್ಲಿ ಗೂಗಲ್‌ ಪಿಕ್ಸೆಲ್‌ 7 ಸರಣಿ ಬಿಡುಗಡೆ! ಬೆಲೆ ಎಷ್ಟು? ಫೀಚರ್ಸ್‌ ಹೇಗಿದೆ?

ಗೂಗಲ್‌ ಕಂಪೆನಿ ತನ್ನ ಬಹು ನಿರೀಕ್ಷಿತ ಗೂಗಲ್‌ ಪಿಕ್ಸೆಲ್‌ 7 ಸರಣಿ ಸ್ಮಾರ್ಟ್‌ಫೋನ್‌ಗಳನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸರಣಿಯಲ್ಲಿ ಗೂಗಲ್ ಪಿಕ್ಸೆಲ್ 7 ಮತ್ತು ಪಿಕ್ಸೆಲ್ 7 ಪ್ರೊ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳು ಟೆನ್ಸಾರ್‌ G2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿವೆ. ಇದರಲ್ಲಿ ಗೂಗಲ್‌ ಪಿಕ್ಸೆಲ್ 7 ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಆದರೆ ಪಿಕ್ಸೆಲ್ 7 ಪ್ರೊ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.

ಗೂಗಲ್‌

ಹೌದು, ಗೂಗಲ್‌ ಪಿಕ್ಸೆಲ್‌ 7 ಸರಣಿ ಭಾರತದಲ್ಲಿ ಲಾಂಚ್‌ ಆಗಿದೆ. ಈ ಸರಣಿಯ ಎರಡು ಸ್ಮಾರ್ಟ್‌ಫೋನ್‌ಗಳು 10.8-ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP68 ರೇಟಿಂಗ್ ಅನ್ನು ಪಡೆದುಕೊಂಡಿವೆ. ಇದರಲ್ಲಿ ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌ ಸಿನಿಮ್ಯಾಟಿಕ್‌ ಬ್ಲರ್‌ ಫೀಚರ್ಸ್‌ ಅನ್ನು ಬೆಂಬಲಿಸಲಿದೆ. ಹಾಗೆಯೇ ಪಿಕ್ಸೆಲ್‌ 7 ಪ್ರೊ ಮ್ಯಾಕ್ರೋ ಫೋಕಸ್‌ ಫೀಚರ್ಸ್‌ ಅನ್ನು ಹೊಂದಿದೆ. ಹಾಗಾದ್ರೆ ಈ ಗೂಗಲ್‌ ಪಿಕ್ಸೆಲ್‌ 7 ಸರಣಿ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಗೂಗಲ್‌ ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌ ಫೀಚರ್ಸ್‌

ಗೂಗಲ್‌ ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌ ಫೀಚರ್ಸ್‌

ಗೂಗಲ್‌ ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌ 6.32 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಟೆನ್ಸರ್ G2 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 10.8 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಪಡೆದಿದೆ. ಜೊತೆಗೆ ಕ್ಯಾಮೆರಾ ಮೂಲಕ ವೀಡಿಯೊ ರೆಕಾರ್ಡ್‌ ಮಾಡುವಾಗ ಬ್ಲರ್‌ ಎಫೆಕ್ಟ್‌ ನೀಡುವ 'ಸಿನಿಮ್ಯಾಟಿಕ್ ಬ್ಲರ್' ಫೀಚರ್ಸ್‌ ಅನ್ನು ಕೂಡ ಒಳಗೊಂಡಿದೆ.

ಗೂಗಲ್‌ ಪಿಕ್ಸೆಲ್‌ 7

ಗೂಗಲ್‌ ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌ 4,335mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 30W ವೇಗದ ಚಾರ್ಜಿಂಗ್ ಮತ್ತು ವಾರ್‌ಲೆಸ್ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನಲ್ಲಿ ಟ್ರೀಮ್ ಬ್ಯಾಟರಿ ಸೇವರ್ ಮೋಡ್ ಅನ್ನು ಆಕ್ಟಿವ್‌ ಮಾಡುವ ಮೂಲಕ 72 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, GPS, NFC, ಮತ್ತು USB ಟೈಪ್-C ಪೋರ್ಟ್ ಹೊಂದಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್, ಬಾರೋಮೀಟರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಗೂಗಲ್‌ ಪಿಕ್ಸೆಲ್‌ 7ಪ್ರೊ ಸ್ಮಾರ್ಟ್‌ಫೋನ್‌

ಗೂಗಲ್‌ ಪಿಕ್ಸೆಲ್‌ 7ಪ್ರೊ ಸ್ಮಾರ್ಟ್‌ಫೋನ್‌

ಗೂಗಲ್ ಪಿಕ್ಸೆಲ್ 7ಪ್ರೊ ಸ್ಮಾರ್ಟ್‌ಫೋನ್‌ 6.7 ಇಂಚಿನ ಕ್ವಾಡ್ ಎಚ್‌ಡಿ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಟೆನ್ಸರ್ G2 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಪಿಕ್ಸೆಲ್ 7 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕೂಡ 10.8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಆದರೆ ಈ ಸ್ಮಾರ್ಟ್‌ಫೋನ್‌ 'ಮ್ಯಾಕ್ರೋ ಫೋಕಸ್' ಫೀಚರ್ಸ್‌ ಒಳಗೊಂಡಿದೆ ಎಂದು ಗೂಗಲ್‌ ಹೇಳಿದೆ. ಇದು ಬಳಕೆದಾರರಿಗೆ ವಸ್ತುಗಳ ಕ್ಲೋಸ್-ಅಪ್ ಫೋಟೋಗಳನ್ನು ತೆಗೆದುಕೊಳ್ಳಲು ಅನುಮತಿಸುತ್ತದೆ.

ಗೂಗಲ್‌ ಪಿಕ್ಸೆಲ್‌ 7ಪ್ರೊ

ಗೂಗಲ್‌ ಪಿಕ್ಸೆಲ್‌ 7ಪ್ರೊ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ವೇಗದ ಚಾರ್ಜಿಂಗ್ ಮತ್ತು ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, GPS, NFC, ಮತ್ತು USB ಟೈಪ್-C ಪೋರ್ಟ್ ಒಳಗೊಂಡಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್‌, ಬಾರೋಮೀಟರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಗೂಗಲ್ ಪಿಕ್ಸೆಲ್ 7 ಸ್ಮಾರ್ಟ್‌ಫೋನ್‌ 59,999ರೂ. ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಸ್ನೋ, ಅಬ್ಸಿಡಿಯನ್ ಮತ್ತು ಲೆಮೊನ್‌ಗ್ರಾಸ್ ಕಲರ್‌ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಇನ್ನು ಗೂಗಲ್‌ ಪಿಕ್ಸೆಲ್‌ 7 ಪ್ರೊ ಸ್ಮಾರ್ಟ್‌ಫೋನ್‌ 84,999ರೂ.ಬೆಲೆಯನ್ನು ಹೊಂದಿದೆ. ಇದು ಹ್ಯಾಝೆಲ್, ಅಬ್ಸಿಡಿಯನ್ ಮತ್ತು ಸ್ನೋ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು ಇದೇ ಅಕ್ಟೋಬರ್ 13 ರಂದು ಫ್ಲಿಪ್‌ಕಾರ್ಟ್ ಮೂಲಕ ಭಾರತದಲ್ಲಿ ಮಾರಾಟವಾಗಲಿದೆ.

Best Mobiles in India

English summary
Google Pixel 7, Pixel 7 Pro With Tensor G2 SoC Launched in India
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+