ದುಬಾರಿ ಬೆಲೆಯ ಈ ಸ್ಮಾರ್ಟ್‌ಫೋನ್ ಮೇಲೆ ಇದೀಗ ಬರೋಬ್ಬರಿ 17,000ರೂ. ಡಿಸ್ಕೌಂಟ್!
ಜನಪ್ರಿಯ ಇ-ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಗೂಗಲ್ ಪಿಕ್ಸೆಲ್ ಸ್ಮಾರ್ಟ್‌ಫೋನ್ ಖರೀದಿಸುವವರಿಗೆ ಬಿಗ್ ಸಪ್ರೈಸ್ ನೀಡಿದೆ. ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಗೂಗಲ್ ಪಿಕ್ಸೆಲ್ 7 ಪ್ರೊ ಸ್ಮಾರ್ಟ್‌ಫೋನ್ ಮೇಲೆ ಬಿಗ್ ಆಫರ್ ನೀಡಿದೆ. ಅದೂ ಅಂತಿಂಥ ಆಫರ್ ಅಲ್ಲ. ಬರೋಬ್ಬರಿ 17,000ರೂ.ಗಳ ಬಿಗ್ ಡಿಸ್ಕೌಂಟ್ ನೀಡಿದೆ.
ಹೌದು, ಫ್ಲಿಪ್‌ಕಾರ್ಟ್‌ನಲ್ಲಿ ಗೂಗಲ್ ಪಿಕ್ಸೆಲ್ 7 ಪ್ರೊ ಸ್ಮಾರ್ಟ್‌ಫೋನ್ ಅನ್ನು ಇದೀಗ ನೀವು ಅತಿ ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್ ಅನ್ನು ನೀವು ಡಿಸ್ಕೌಂಟ್‌ನಲ್ಲಿ ಖರೀದಿಸಬೇಕೆಂದು ಕೊಂಡವರಿಗೆ ಇದಕ್ಕಿಂತ ಬೇರೆ ಟೈಂ ಖಂಡಿತ ಸಿಗೋದಿಲ್ಲ. ಇದಿಷ್ಟೇ ಅಲ್ಲ ಬ್ಯಾಂಕ್ ಕಾರ್ಡ್ ಆಫರ್‌ಗಳ ಮೂಲಕ ಇದರ ಬೆಲೆಯನ್ನು ಇನ್ನಷ್ಟು ಕಡಿತಗೊಳಿಸಬಹುದಾಗಿದೆ. ಹಾಗಾದ್ರೆ ಗೂಗಲ್ ಪಿಕ್ಸೆಲ್ 7 ಪ್ರೊ ಸ್ಮಾರ್ಟ್‌ಫೋನ್ ಅನ್ನು ಯಾವ ಬೆಲೆಗೆ ಖರೀದಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಫ್ಲಿಪ್‌ಕಾರ್ಟ್‌ನಲ್ಲಿ ಗೂಗಲ್ ಪಿಕ್ಸೆಲ್ 7 ಪ್ರೊ ಮೇಲೆ ಬಿಗ್ ಆಫರ್
ಫ್ಲಿಪ್‌ಕಾರ್ಟ್‌ನಲ್ಲಿ ಗೂಗಲ್ ಪಿಕ್ಸೆಲ್ 7 ಪ್ರೊ ಸ್ಮಾರ್ಟ್‌ಫೋನ್ ಇದೀಗ ಬಿಗ್ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 12GB RAM + 128GB ಸ್ಟೋರೇಜ್ ಆಯ್ಕೆಯ ಮೂಲಬೆಲೆ 84,999ರೂ. ಆಗಿದ್ದು, ಇದೀಗ ಡಿಸ್ಕೌಂಟ್‌ನಲ್ಲಿ ಕೇವಲ 67,999 ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಇದರಿಂದ ಈ ಸ್ಮಾರ್ಟ್‌ಫೋನ್ ಬೆಲೆಯಲ್ಲಿ 17,000ರೂ.ಗಳಷ್ಟು ಕಡಿತ ಮಾಡಲಾಗಿದೆ. ಇದಲ್ಲದೆ ನೀವು ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ವಹಿವಾಟುಗಳ ಮೂಲಕ 2,000ರೂ. ಹೆಚ್ಚುವರಿ ರಿಯಾಯಿತಿ ಕೂಡ ಸಿಗಲಿದೆ.
ಇದಿಷ್ಟೇ ಅಲ್ಲ ಎಕ್ಸ್‌ಚೇಂಜ್ ಆಫರ್‌ನಲ್ಲಿ 48,749ರೂ. ವರೆಗೆ (ಗುಣಮಟ್ಟದ ಆಧಾರದ ಮೇಲೆ) ಎಕ್ಸ್‌ಚೇಂಜ್ ಬೋನಸ್ ಅನ್ನು ನೀಡುತ್ತಿದೆ. ಆದ್ದರಿಂದ, ಗೂಗಲ್ ಪಿಕ್ಸೆಲ್ 7ಪ್ರೊ ಸ್ಮಾರ್ಟ್‌ಫೋನ್ ಅನ್ನು ಇನ್ನಷ್ಟು ಕಡಿಮೆ ಬೆಲೆಗೆ ಖರೀದಿಸಬಹುದಾಗಿದೆ ತನ್ನ ಕ್ಲಾಸ್-ಲೀಡಿಂಗ್ ಕ್ಯಾಮೆರಾ ಮೂಲಕ ಗಮನಸೆಳೆದಿರುವ ಗೂಗಲ್ ಪಿಕ್ಸೆಲ್ 7ಪ್ರೊ ಸ್ಮಾರ್ಟ್‌ಫೋನ್ ಅನ್ನು ನೀವು ಕೈಗೆಟಕುವ ಬೆಲೆಗೆ ಖರೀದಿಸಬಹುದಾಗಿದೆ.
ಗೂಗಲ್ ಪಿಕ್ಸೆಲ್ 7 ಪ್ರೊ ಫೀಚರ್ಸ್ ಹೇಗಿದೆ?
ಗೂಗಲ್ ಪಿಕ್ಸೆಲ್ 7 ಪ್ರೊ ಸ್ಮಾರ್ಟ್‌ಫೋನ್ 6.7 ಇಂಚಿನ OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ. ಇದು 1,500 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಗೂಗಲ್ ಸ್ವಾಮ್ಯದ ಚಿಪ್‌ಸೆಟ್ ಟೆನ್ಸರ್ G2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಕ್ಲಾಸ್-ಲೀಡಿಂಗ್ ಕ್ಯಾಮೆರಾ ಸಿಸ್ಟಂಗೆ ಹೆಸರುವಾಸಿಯಾಗಿದೆ. ಅದರಂತೆ ಸ್ಮಾರ್ಟ್‌ಫೋನ್‌ನಲ್ಲಿ ಟ್ರಿಪಲ್ ರಿಯರ್ ಕ್ಯಾಮೆರಾ ವ್ಯವಸ್ಥೆಯನ್ನು ಹೊಂದಿದೆ.
ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದುಕೊಂಡಿದೆ. ಇದಲ್ಲದೆ 10.8MP ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾಗಳಲ್ಲಿ ಅಸಾಧಾರಣ ಕಾಂಟ್ರಾಸ್ಟ್ ಮತ್ತು ಅತ್ಯುತ್ತಮ ಡೈನಾಮಿಕ್ ಶ್ರೇಣಿಯನ್ನು ನೀಡಲಾಗಿದೆ.
ಇನ್ನು ಗೂಗಲ್ ಪಿಕ್ಸೆಲ್ 7 ಪ್ರೊ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ವೇಗದ ಚಾರ್ಜಿಂಗ್ ಮತ್ತು ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, GPS, NFC, ಮತ್ತು USB ಟೈಪ್-C ಪೋರ್ಟ್ ಒಳಗೊಂಡಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಬಾರೋಮೀಟರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.


Click it and Unblock the Notifications








