Home
ಸುದ್ದಿಜಾಲ

Google Pixel 7: ಗೂಗಲ್‌ ಪಿಕ್ಸೆಲ್ 7 ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭಾರಿ ಕುಸಿತ: ಕೂಡಲೇ ಖರೀದಿಸಿ!

ಜನಪ್ರಿಯ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾದ ಗೂಗಲ್ ಪಿಕ್ಸೆಲ್ 7 ಖರೀದಿಸುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ತನ್ನ ವಿಭಿನ್ನ ಶೈಲಿಯಿಂದ ಎಲ್ಲರ ಗಮನಸೆಳೆದಿರುವ ಈ ಸ್ಮಾರ್ಟ್‌ಫೋನ್‌ ಇದೀಗ ಫ್ಲಿಪ್‌ಕಾರ್ಟ್‌ನಲ್ಲಿ ಭಾರಿ ಬೆಲೆ ಇಳಿಕೆಯನ್ನು ಪಡೆದುಕೊಂಡಿದೆ. ಈ ಮೂಲಕ ಹೊಸ ವರ್ಷಕ್ಕೂ ಮುನ್ನ ಫೋನ್‌ ಖರೀದಿಸಬೇಕೆಂದುಕೊಂಡವರಿಗೆ ಉತ್ತಮ ಅವಕಾಶ ದೊರೆತಿದೆ.

ಹೌದು, ಗೂಗಲ್ ಪಿಕ್ಸೆಲ್ 7 (Google Pixel 7) ಸ್ಮಾರ್ಟ್‌ಫೋನ್‌ ಇದೀಗ ಫ್ಲಿಪ್‌ಕಾರ್ಟ್‌ನಲ್ಲಿ ಬೆಲೆ ಇಳಿಕೆಯನ್ನು ಪಡೆದಿದೆ. ಇನ್ನು ಸ್ಮಾರ್ಟ್‌ಫೋನ್‌ Tensor G2 ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ನಲ್ಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಬೆಲೆ ಇಳಿಕೆಯ ನಂತರದ ಬೆಲೆ ಎಷ್ಟು? ಇದರ ಫೀಚರ್ಸ್‌ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಗೂಗಲ್‌ ಪಿಕ್ಸೆಲ್ 7 ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭಾರಿ ಕುಸಿತ: ಕೂಡಲೇ ಖರೀದಿಸಿ!

ಗೂಗಲ್ ಪಿಕ್ಸೆಲ್ 7 ಬೆಲೆಯಲ್ಲಿ ಭಾರಿ ಕುಸಿತ
ಕಳೆದ ವರ್ಷ 59,999ರೂ ಬೆಲೆಯಲ್ಲಿ ಪ್ರಾರಂಭವಾದ ಈ ಸ್ಮಾರ್ಟ್‌ಫೋನ್‌ ಇದೀಗ ಫ್ಲಿಪ್‌ಕಾರ್ಟ್‌ನಲ್ಲಿ 33% ಡಿಸ್ಕೌಂಟ್‌ ಪಡೆದುಕೊಂಡಿದೆ. ಆದರಿಂದ ಈ ಸ್ಮಾರ್ಟ್‌ಫೋನ್‌ 39,999ರೂ. ಬೆಲೆಯಲ್ಲಿ ಲಭ್ಯವಾಗುತ್ತಿದೆ. ಇದರೊಂದಿಗೆ ವಿವಿಧ ಬ್ಯಾಂಕ್‌ ಕಾರ್ಡ್‌ಗಳ ಮೂಲಕ ಖರೀದಿಸಿದರೆ ಭರ್ಜರಿ ಕ್ಯಾಶ್‌ಬ್ಯಾಕ್‌ ಅನ್ನು ಸಹ ಪಡೆದುಕೊಳ್ಳಬಹುದಾಗಿದೆ.

ಗೂಗಲ್ ಪಿಕ್ಸೆಲ್ 7 ಫೀಚರ್ಸ್‌ ಹೇಗಿದೆ?
ಗೂಗಲ್ ಪಿಕ್ಸೆಲ್ 7 ಸ್ಮಾರ್ಟ್‌ಫೋನ್‌ 6.3 ಇಂಚಿನ 90Hz AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿದೆ. ಇನ್ನು ಡಿಸ್‌ಪ್ಲೇ ಕಾಂಟ್ರಾಸ್ಟ್ ರೇಶಿಯೋ: >1,000,000:1, HDR ಬೆಂಬಲವನ್ನು ಹೊಂದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಸಹ ಪಡೆದಿದೆ.

ಗೂಗಲ್‌ ಪಿಕ್ಸೆಲ್ 7 ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭಾರಿ ಕುಸಿತ: ಕೂಡಲೇ ಖರೀದಿಸಿ!

ಗೂಗಲ್ ಪಿಕ್ಸೆಲ್ 7 ಪ್ರೊಸೆಸರ್‌ ಯಾವುದು?
ಗೂಗಲ್ ಪಿಕ್ಸೆಲ್ 7 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಟೆನ್ಸರ್ G2 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಯಾವುದೆ ಮೆಮೊರಿ ಕಾರ್ಡ್‌ ಬೆಂಬಲಿಸುವುದಿಲ್ಲ ಎಂಬುದು ಗಮನವಿರಲಿ.

ಗೂಗಲ್ ಪಿಕ್ಸೆಲ್ 7 ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 10.8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ ಕ್ಯಾಮೆರಾ ಮೂಲಕ ವೀಡಿಯೊ ರೆಕಾರ್ಡ್‌ ಮಾಡುವಾಗ ಬ್ಲರ್‌ ಎಫೆಕ್ಟ್‌ ನೀಡುವ 'ಸಿನಿಮ್ಯಾಟಿಕ್ ಬ್ಲರ್' ಫೀಚರ್ಸ್‌ ಅನ್ನು ಕೂಡ ಒಳಗೊಂಡಿದೆ.

ಗೂಗಲ್‌ ಪಿಕ್ಸೆಲ್ 7 ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭಾರಿ ಕುಸಿತ: ಕೂಡಲೇ ಖರೀದಿಸಿ!

ಗೂಗಲ್‌ ಪಿಕ್ಸೆಲ್‌ 7 ಬ್ಯಾಟರಿ ಮತ್ತು ಇತರೆ
ಗೂಗಲ್‌ ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌ 4,335mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 30W ವೇಗದ ಚಾರ್ಜಿಂಗ್ ಮತ್ತು ವಾರ್‌ಲೆಸ್ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನಲ್ಲಿ ಟ್ರೀಮ್ ಬ್ಯಾಟರಿ ಸೇವರ್ ಮೋಡ್ ಅನ್ನು ಆಕ್ಟಿವ್‌ ಮಾಡುವ ಮೂಲಕ 72 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ.

ಇನ್ನು ಗೂಗಲ್ ಪಿಕ್ಸೆಲ್ 7 ಸರಣಿಯಲ್ಲಿ ಗೂಗಲ್ ಪಿಕ್ಸೆಲ್ 7 ಪ್ರೊ ಸ್ಮಾರ್ಟ್‌ಫೋನ್‌ ಕೂಡ ಗಮನಸೆಳೆದಿದೆ. ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಕ್ವಾಡ್ ಎಚ್‌ಡಿ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಟೆನ್ಸರ್ G2 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಪಿಕ್ಸೆಲ್ 7 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕೂಡ 10.8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ವೇಗದ ಚಾರ್ಜಿಂಗ್ ಮತ್ತು ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಪಡೆದಿದೆ.

Best Mobiles in India

English summary
Google Pixel 7 smartphone gets Massive Price cut in Flipkart
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+