ಗೂಗಲ್ ಸ್ಮಾರ್ಟ್‌ಫೋನ್ ಖರೀದಿಸಲು ಗ್ರಾಹಕರಿಗೆ ಇದುವೇ ಮಸ್ತ್ ಆಫರ್!
ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣವು ಗೂಗಲ್ ಪಿಕ್ಸಲ್ 7a ಫೋನ್ ಫೋನಿಗೆ ಆಕರ್ಷಕ ರಿಯಾಯಿತಿ ಲಭ್ಯ ಮಾಡಿದೆ. ಈ ಫೋನ್ ಹೋಮ್ ಬ್ರೂಡ್ ಟೆನ್ಸರ್ G2 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, 8GB RAM ಮತ್ತು 128 GB ಸ್ಟೋರೇಜ್ ಸೌಲಭ್ಯ ಸಹ ಪಡೆದಿದೆ.
ಹೌದು, ಫ್ಲಿಪ್‌ಕಾರ್ಟ್ ವೆಬ್‌ಸೈಟ್ ನಲ್ಲಿ ಗೂಗಲ್ ಪಿಕ್ಸಲ್ 7a ಮೊಬೈಲ್ ಶೇ. 9% ರಷ್ಟು ನೇರ ಡಿಸ್ಕೌಂಟ್ ಪಡೆದಿದೆ. ಈ ಫೋನಿನ 8 GB RAM + 128 GB ಸ್ಟೋರೇಜ್ ವೇರಿಯಂಟ್ 39,999 ರೂ. ಗಳಿಗೆ ಖರೀದಿ ಮಾಡಬಹುದಾಗಿದೆ. ಇನ್ನು ಈ ಮೊಬೈಲ್‌ಗೆ ಲಭ್ಯ ಇತರೆ ಎಲ್ಲ ಆಫರ್‌ಗಳನ್ನು ಸೇರಿದರೆ ಈ ಫೋನ್ ಅನ್ನು ಮತ್ತಷ್ಟು ಬೊಂಬಾಟ್ ಬೆಲೆಗೆ ಖರೀದಿಸಲು ಅವಕಾಶ ಇದೆ.

ಇನ್ನು ಗೂಗಲ್ ಪಿಕ್ಸಲ್ 7a ಮೊಬೈಲ್ ಟೆನ್ಸರ್ G2 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದ್ದು, 4,410mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿ ಇದೆ. ಹಾಗಾದರೇ ಗೂಗಲ್ ಪಿಕ್ಸಲ್ 7a ಮೊಬೈಲ್ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ವಿವರ ಹೀಗಿದೆ
ಗೂಗಲ್ ಪಿಕ್ಸಲ್ 7a ಫೋನ್ 6.1 ಇಂಚಿನ OLED ಡಿಸ್‌ಪ್ಲೇ ಹೊಂದಿದ್ದು, ಫುಲ್ ಹೆಚ್‌ಡಿ+ ರೆಸಲ್ಯೂಶನ್‌ಗೆ ಸಪೋರ್ಟ್ ಅನ್ನು ಒಳಗೊಂಡಿದೆ. ಹಾಗೆಯೇ ಇದು 90Hz ರಿಫ್ರೆಶ್ ರೇಟ್ ಆಯ್ಕೆ ಹೊಂದಿದ್ದು, ಪಿಕ್ಸಲ್ 6a ನಲ್ಲಿ ಇದ್ದ 60Hz ರಿಫ್ರೆಶ್ ರೇಟ್‌ಗಿಂತ ಅಧಿಕ ಅಪ್‌ಗ್ರೇಡ್ ಪಡೆದಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾಗಾಗಿ ಮುಂಭಾಗದಲ್ಲಿ ಸಾಮಾನ್ಯ ಪನ್-ಹೋಲ್ ವಿನ್ಯಾಸದ ಆಯ್ಕೆ ಒದಗಿಸಲಾಗಿದೆ.
ಬಲವಾದ ಪ್ರೊಸೆಸರ್ ಸಾಮರ್ಥ್ಯ
ಗೂಗಲ್ ಪಿಕ್ಸಲ್ 7a ಮೊಬೈಲ್ ಹೋಮ್ ಬ್ರೂಡ್ ಟೆನ್ಸರ್ G2 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದ್ದು, ಇದರ ಜೊತೆಗೆ 5G ಫೋನ್ ಆಂಡ್ರಾಯ್ಡ್ 13 ಓಸ್ ಸಪೋರ್ಟ್ ಪಡೆದುಕೊಂಡಿದೆ. ಇದರೊಂದಿಗೆ ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಬೆಂಬಲ ಸಹ ಒಳಗೊಂಡಿದೆ. ಇದರೊಂದಿಗೆ 8GB RAM ಮತ್ತು 128GB ಸ್ಟೋರೇಜ್ ಸಾಮರ್ಥ್ಯದ ಆಯ್ಕೆ ಪಡೆದುಕೊಂಡಿದೆ.

ಕ್ಯಾಮೆರಾ ಸೆನ್ಸಾರ್ ಮಾಹಿತಿ ಹೀಗಿದೆ
ಗೂಗಲ್ ಪಿಕ್ಸಲ್ 7a ಮೊಬೈಲ್ 64 ಮೆಗಾ ಪಿಕ್ಸಲ್ ಪ್ರಾಥಮಿಕ ಕ್ಯಾಮೆರಾವನ್ನು ಪಡೆದುಕೊಂಡಿದ್ದು, ಇದರ ಜೊತೆಗೆ 13 ಮೆಗಾ ಪಿಕ್ಸಲ್ ಅಲ್ಟ್ರಾ ವೈಡ್ ಸೆನ್ಸರ್ ಸಹ ಪಡೆದುಕೊಂಡಿದೆ. ಇದಲ್ಲದೇ ಮುಂಭಾಗದಲ್ಲಿ ಸೆಲ್ಫಿಗಾಗಿ 13 ಮೆಗಾ ಪಿಕ್ಸಲ್ ಸಾಮರ್ಥ್ಯದ ಸೆನ್ಸಾರ್ ಕ್ಯಾಮೆರಾ ಆಯ್ಕೆ ಒದಗಿಸಲಾಗಿದೆ. ಮ್ಯಾಜಿಕ್ ಎರೇಸರ್, ಅನ್ ಬ್ಲರ್, ಲಾಂಗ್ ಎಕ್ಸ್‌ಪೋಸರ್ ಮೋಡ್ ಸೇರಿದಂತೆ ಕೆಲವು ಆಕರ್ಷಕ ಫೀಚರ್ಸ್‌ಗಳನ್ನು ಈ ಫೋನ್ ಪಡೆದುಕೊಂಡಿದೆ.
ಅಧಿಕ ಬ್ಯಾಟರಿ ಬ್ಯಾಕ್‌ಅಪ್ ಹಾಗೂ ಇತರೆ ಸೌಲಭ್ಯಗಳ ಮಾಹಿತಿ
ಗೂಗಲ್ ಪಿಕ್ಸಲ್ 7a ಮೊಬೈಲ್ 4,410mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, 18W ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನದ ಸಪೋರ್ಟ್ ಕೂಡಾ ಪಡೆದುಕೊಂಡಿದೆ. ಇದರ ಜೊತೆಗೆ ವಾಯರ್‌ಲೆಸ್ ಚಾರ್ಜಿಂಗ್ ಮತ್ತು ಸ್ಟಿರಿಯೊ ಸ್ಪೀಕರ್ ಸೌಲಭ್ಯ ಕೂಡಾ ಇದ್ದು, ವಾಟರ್ ರೆಸಿಸ್ಟನ್ಸ್‌ಗಾಗಿ IP67 ರೇಟಿಂಗ್ ಆಯ್ಕೆ ಹೊಂದಿದೆ.
ಮೆಮೊರಿ ಆಯ್ಕೆ ಹಾಗೂ ಕಲರ್ ಆಯ್ಕೆ
ಗೂಗಲ್ ಪಿಕ್ಸಲ್ 7a ಮೊಬೈಲ್ 8 GB RAM + 128 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದುಕೊಂಡಿದೆ. ಇದಲ್ಲದೇ ಈ ಮೊಬೈಲ್ ಚಾರ್ಕೋಲ್, ಕೋರಲ್, ಸೀ ಹಾಗೂ ಸ್ನೋ ಕಲರ್ ಆಯ್ಕೆಗಳಲ್ಲಿ ಖರೀದಿ ಮಾಡಲು ಅವಕಾಶ ಇದೆ.


Click it and Unblock the Notifications








