ಗೂಗಲ್ ಪಿಕ್ಸೆಲ್ 8 ಸರಣಿ: ಹಿಂದಿನ ಪಿಕ್ಸೆಲ್ ಸರಣಿ ಫೋನ್‌ಗಳಿಗಿಂತ ಯಾಕೆ ಭಿನ್ನವಾಗಿದೆ!
ಟೆಕ್ ವಲಯದಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿದ್ದ ಗೂಗಲ್ ಪಿಕ್ಸೆಲ್ 8 ಸರಣಿ ಅಧಿಕೃತವಾಗಿ ಅನಾವರಣಗೊಂಡಿದೆ. ಗೂಗಲ್ ಕಂಪೆನಿ ಮೇಡ್ ಬೈ ಗೂಗಲ್ 2023 ಹಾರ್ಡ್‌ವೇರ್ ಲಾಂಚ್ ಈವೆಂಟ್‌ನಲ್ಲಿ ಪಿಕ್ಸೆಲ್ 8 ಸರಣಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಲಾಗಿದೆ. ಈ ಸರಣಿಯು ಹಿಂದಿನ ಸರಣಿಯ ಫೋನ್‌ಗಳಿಗಿಂತ ವಿಶೇಷ ಫೀಚರ್ಸ್‌ಗಳನ್ನು ಒಳಗೊಂಡಿವೆ.
ಹೌದು, ಗೂಗಲ್ ಪಿಕ್ಸೆಲ್ 8 ಸರಣಿ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡಿವೆ. ಈ ಸ್ಮಾರ್ಟ್‌ಫೋನ್‌ಗಳು ಗೂಗಲ್‌ನ ಟೆನ್ಸರ್ G3 ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 14 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ರನ್ ಆಗಲಿವೆ. ಇದಲ್ಲದೆ ಎರಡೂ ಸ್ಮಾರ್ಟ್‌ಫೋನ್‌ಗಳು ಗೂಗಲ್ ನ AI ಬೆಂಬಲಿತ ಫೀಚರ್ಸ್‌ಗಳಾದ ಫೋಟೋ ಅನ್‌ಬ್ಲರ್ ಮತ್ತು ಲೈವ್ ಟ್ರಾನ್ಸ್‌ಲೇಟ್ ಅನ್ನು ಬೆಂಬಲಿಸಲಿವೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಹಿಂದಿನ ಸರಣಿಗಳಿಗಿಂತ ಭಿನ್ನವಾದದ್ದು ಏನಿದೆ?
ಗೂಗಲ್ ಪಿಕ್ಸೆಲ್ 8 ಸರಣಿ ಸಾಕಷ್ಟು ವಿಶೇಷತಗಳನ್ನು ಹೊಂದಿದೆ. ಇದರಲ್ಲಿ ಹಲವು ಹೊಸ ಮಾದರಿಯ ಫೀಚರ್ಸ್‌ಗಳನ್ನು ಸೇರಿಸಿದೆ. ಇವುಗಳಲ್ಲಿ ಬೆಸ್ಟ್ ಟೇಕ್ ಫೀಚರ್ಸ್ ಕೂಡ ಒಂದಾಗಿದೆ. ಇದು ಫೋಟೋಗಳ ಸರಣಿಯಿಂದ ಮಿಶ್ರಿತ ಚಿತ್ರವನ್ನು ರಚಿಸಲು ನಿಮಗೆ ಸಹಾಯ ಮಾಡುತ್ತದೆ. ಗೂಗಲ್ ಫೋಟೋಗಳಲ್ಲಿ ಮ್ಯಾಜಿಕ್ ಎಡಿಟರ್ ಅನ್ನು ಕಾಣಬಹುದಾಗಿದೆ. ಇದು ನಿಮ್ಮ ಕಂಟೆಂಟ್‌ಗಳನ್ನು ರಿ ಸ್ಟೋರ್ ಮಾಡುವುದಕ್ಕೆ ಮತ್ತು ರಿ ಸೈಜ್ ಮಾಡುವುದಕ್ಕೆ ನಿಮಗೆ ಸಹಾಯ ಮಾಡಲು ಜನರೇಟಿವ್ AI ಅನ್ನು ಬಳಸುತ್ತದೆ.
ಇದಲ್ಲದೆ ಈ ಸ್ಮಾರ್ಟ್‌ಫೋನ್‌ಗಳಲ್ಲಿ ಗೂಗಲ್ ಆಡಿಯೊ ಮ್ಯಾಜಿಕ್ ಎರೇಸರ್ ಅನ್ನು ಸಹ ಪರಿಚಯಿಸಿದೆ. ಇದು ನಿಮ್ಮ ವೀಡಿಯೊದಲ್ಲಿ ಗಾಳಿಯ ಶಬ್ದ ಅಥವಾ ಜನಸಮೂಹದ ಗದ್ದಲದ ಶಬ್ದಗಳನ್ನು ಕಡಿಮೆ ಮಾಡಲು ಅವಕಾಶ ನೀಡಲಿದೆ. ಇನ್ನು ಫೋನ್‌ನಲ್ಲಿ ಫೋಟೋ ಅಸ್ಪಷ್ಟತೆ ಮತ್ತು ಮ್ಯಾಕ್ರೋ ಫೋಕಸ್ ಫೀಚರ್ಸ್‌ಗಳನ್ನು ಸಹ ಕಾಣಬಹುದಾಗಿದೆ.
ಇನ್ನು ಇದೇ ಮೊದಲ ಬಾರಿಗೆ, ಗೂಗಲ್ ಪಿಕ್ಸೆಲ್ 8 ಸ್ಮಾರ್ಟ್‌ಫೋನ್‌ಗಳಿಗಾಗಿ ಏಳು ವರ್ಷಗಳ ಸಾಫ್ಟ್‌ವೇರ್ ಬೆಂಬಲವನ್ನು ಒದಗಿಸುತ್ತಿದೆ. ಜೊತೆಗೆ ಗೂಗಲ್ ಒನ್‌ನಿಂದ ಉಚಿತ VPN ನೊಂದಿಗೆ ಬರುತ್ತವೆ.
ಗೂಗಲ್ ಪಿಕ್ಸೆಲ್ 8 ಫೀಚರ್ಸ್ ಹೇಗಿದೆ?
ಗೂಗಲ್ ಪಿಕ್ಸೆಲ್ 8 ಸ್ಮಾರ್ಟ್‌ಫೋನ್ 6.2 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 90Hz ರಿಫ್ರೆಶ್ ದರದೊಂದಿಗೆ ಬರಲಿದೆ. ಈ ಸ್ಮಾರ್ಟ್‌ಫೋನ್ ಗೂಗಲ್‌ನ ನಾನ್-ಕೋರ್ ಟೆನ್ಸರ್ G3 ಚಿಪ್‌ಸೆಟ್ ಮತ್ತು Titan M2 ಭದ್ರತಾ ಚಿಪ್‌ನಿಂದ ಚಾಲಿತವಾಗಿದೆ. ಇದು ಆಂಡ್ರಾಯ್ಡ್ 14 ಔಟ್-ಆಫ್-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಆಯ್ಕೆಯಲ್ಲಿ ಬರಲಿದೆ.
ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಈ ಸ್ಮಾರ್ಟ್‌ಫೋನ್ 11 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ 4,575mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 27W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi 6E, 5G, 4G LTE, ಬ್ಲೂಟೂತ್ 5.3, GPS, NFC ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿವೆ.
ಗೂಗಲ್ ಪಿಕ್ಸೆಲ್ 8 ಪ್ರೊ ಫೀಚರ್ಸ್ ಹೇಗಿದೆ?
ಗೂಗಲ್ ಪಿಕ್ಸೆಲ್ 8 ಪ್ರೊ ಸ್ಮಾರ್ಟ್‌ಫೋನ್ 6.7 ಇಂಚಿನ ಕ್ವಾಡ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,344x2,992 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 120Hzz ರಿಫ್ರೆಶ್ ರೇಟ್‌ನೊಂದಿಗೆ ಬರಲಿದೆ. ಇದು ಗೂಗಲ್‌ನ ನಾನ್-ಕೋರ್ ಟೆನ್ಸರ್ G3 ಚಿಪ್‌ಸೆಟ್ ಮತ್ತು Titan M2 ಭದ್ರತಾ ಚಿಪ್‌ನಿಂದ ಚಾಲಿತವಾಗಿದೆ. ಈ ಫೋನ್ ಆಂಡ್ರಾಯ್ಡ್ 14 ಔಟ್-ಆಫ್-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 128GB ಇಂಟರ್ ಸ್ಟೋರೇಜ್‌ನೊಂದಿಗೆ ಬರಲಿದೆ.
ಇನ್ನು ಈ ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾವನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಫೇಸ್-ಡಿಟೆಕ್ಟ್ ಆಟೋಫೋಕಸ್ ವೈಡ್ ಲೆನ್ಸ್, ಎರಡನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಕ್ವಾಡ್-ಪಿಡಿ ಅಲ್ಟ್ರಾವೈಡ್ ಸೆನ್ಸಾರ್, ಮೂರನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಕ್ವಾಡ್-ಪಿಡಿ 5x ಜೂಮ್ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 11 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,050mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, ಇದು 30W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi 6E, 5G, 4G LTE, ಬ್ಲೂಟೂತ್ 5.3, GPS, NFC ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ.
ಭಾರತದಲ್ಲಿ ಗೂಗಲ್ ಪಿಕ್ಸೆಲ್ 8 ಮತ್ತು ಗೂಗಲ್ ಪಿಕ್ಸೆಲ್ 8 ಪ್ರೊ ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಪಿಕ್ಸೆಲ್ 8 ಸ್ಮಾರ್ಟ್‌ಫೋನ್ 75,999ರೂ. ಬೆಲೆಯನ್ನು ಹೊಂದಿದೆ. ಇದು ಹ್ಯಾಝೆಲ್, ಅಬ್ಸಿಡಿಯನ್ ಮತ್ತು ರೋಸ್ ಬಣ್ಣದ ಆಯ್ಕೆಗಳಲ್ಲಿ ಸ್ಮಾರ್ಟ್‌ಫೋನ್ ಮಾರಾಟವಾಗಲಿದೆ.
ಇನ್ನು ಗೂಗಲ್ ಪಿಕ್ಸೆಲ್ 8 ಪ್ರೊ ಸ್ಮಾರ್ಟ್‌ಫೋನ್ 1,06,999ರೂ ಬೆಲೆಯನ್ನು ಹೊಂದಿದೆ. ಇದು ಬೇ, ಅಬ್ಸಿಡಿಯನ್ ಮತ್ತು ಪಿಂಗಾಣಿ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಇನ್ನು ಫ್ಲಿಪ್‌ಕಾರ್ಟ್ ಮೂಲಕ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಬಹುದಾಗಿದೆ. ಇಂದಿನಿಂದಲೇ ಸ್ಮಾರ್ಟ್‌ಫೋನ್ ಪ್ರಿ ಬುಕಿಂಗ್ ಶುರುವಾಗಿದೆ.
ಲಾಂಚ್ ಆಫರ್ ಏನಿದೆ?
ಗೂಗಲ್ ಪಿಕ್ಸೆಲ್ 8 ಸ್ಮಾರ್ಟ್‌ಫೋನ್ ಮೇಲೆ ಬ್ಯಾಂಕ್ ಆಫರ್‌ಗಳ ಮೂಲಕ 8,000ರೂ ತನಕ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಇನ್ನು ಎಕ್ಸ್‌ಚೇಂಜ್ ಆಫರ್‌ನಲ್ಲಿ 3,000ರೂ. ತನಕ ಡಿಸ್ಕೌಂಟ್ ಸಿಗಲಿದೆ.
ಇನ್ನು ಗೂಗಲ್ ಪಿಕ್ಸೆಲ್ 8 ಪ್ರೊ ಸ್ಮಾರ್ಟ್‌ಫೋನ್ ಮೇಲೆ ಆಯ್ದ ಬ್ಯಾಂಕ್‌ಗಳಲ್ಲಿ 9,000ರೂ.ತನಕ ರಿಯಾಯಿತಿ ಸಿಗಲಿದೆ. ಇದಲ್ಲದೆ ಎಕ್ಸ್‌ಚೇಂಜ್ ಆಫರ್‌ನಲ್ಲಿ 4,000ರೂ ವರೆಗೆ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ.


Click it and Unblock the Notifications








