ನಾಳೆ Google Pixel 9 Pro ಸೇಲ್; 48MP ಸೆಲ್ಫಿ ಕ್ಯಾಮೆರಾ.. ಬಿಗ್ ಬ್ಯಾಟರಿ.. ಬೆಲೆ ಇಷ್ಟೊಂದಾ?
ಗೂಗಲ್ (Google) ಕಂಪನಿಯು ಇತ್ತೀಚೆಗೆ ತನ್ನ ಬಹುನಿರೀಕ್ಷಿತ ಗೂಗಲ್ ಪಿಕ್ಸೆಲ್ 9 ಪ್ರೊ (Google Pixel 9 Pro) ಫೋನನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಮೊಬೈಲ್, ನಾಳೆ (ಅಕ್ಟೋಬರ್ 17) ಮಧ್ಯಾಹ್ನ 12 ಗಂಟೆಯಿಂದ ಫ್ಲಿಪ್‌ಕಾರ್ಟ್ ಮೂಲಕ ತನ್ನ ಮೊದಲ ಮಾರಾಟವನ್ನು ಪ್ರಾರಂಭಿಸಲಿದೆ. ಇದು ಕೇವಲ 16GB + 256GB ಸ್ಟೋರೇಜ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿರುತ್ತದೆ. ಈ ಫೋನ್ ನಾಲ್ಕು ಬಣ್ಣಗಳ ಆಯ್ಕೆಗಳಲ್ಲಿ ಬರುತ್ತದೆ. ಬನ್ನಿ, ಈ ಫೋನಿನ ಬೆಲೆ, ಆಫರ್‌ಗಳು ಮತ್ತು ವೈಶಿಷ್ಟ್ಯಗಳನ್ನು ತಿಳಿಯೋಣ.
ಕಂಪನಿಯು ಗೂಗಲ್ ಪಿಕ್ಸೆಲ್ 9 ಪ್ರೊ ಅನ್ನು 1,09,999 ರೂ. ಆರಂಭಿಕ ಬೆಲೆಯಲ್ಲಿ ಬಿಡುಗಡೆ ಮಾಡಿದೆ. ಇದು ಗೂಗಲ್ ಟೆನ್ಸರ್ G4 ಪ್ರೊಸೆಸರ್ ಅನ್ನು ಹೊಂದಿದೆ. ಈ ಫೋನಿನಲ್ಲಿ 6.3 ಇಂಚಿನ ಅಮೋಲೆಡ್ ಡಿಸ್ಪ್ಲೇ ನೀಡಲಾಗಿದೆ. ಕಂಪನಿಯು ಟ್ರಿಪಲ್ ಕ್ಯಾಮೆರಾ ಸೆಟಪ್‌ನೊಂದಿಗೆ ಪರಿಚಯಿಸಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 42 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ. 4700mAh ಬ್ಯಾಟರಿ ಸೇರಿದಂತೆ ಮುಂತಾದ ವೈಶಿಷ್ಟ್ಯಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ.

ಗೂಗಲ್ ಪಿಕ್ಸೆಲ್ 9 ಪ್ರೊ ಬೆಲೆ ಮತ್ತು ಲಭ್ಯತೆ
ಗೂಗಲ್ ಪಿಕ್ಸೆಲ್ 9 ಪ್ರೊ ಮೊಬೈಲ್ 1,09,999 ರೂ.ಗಳ ಆರಂಭಿಕ ಬೆಲೆಯಲ್ಲಿ ಖರೀದಿಗೆ ಲಭ್ಯವಿರುತ್ತದೆ. ಕಂಪನಿಯು ನಾಳೆ (ಅಕ್ಟೋಬರ್ 17 ರಂದು) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಮೂಲಕ ಅಧಿಕೃತವಾಗಿ ಮಾರಾಟ ಪ್ರಾರಂಭಿಸಲಿದೆ. ನೀವು, ಇತರೆ ಚಿಲ್ಲರೆ ಮಳಿಗೆಗಳಲ್ಲಿಯೂ ಫೋನನ್ನು ಖರೀದಿಸಬಹುದು. ಪಿಂಗಾಣಿ, ಗುಲಾಬಿ ಸ್ಫಟಿಕ ಶಿಲೆ, ಹೇಸ್ ಮತ್ತು ಅಬ್ಸಿಡಿಯನ್ ಬಣ್ಣಗಳಲ್ಲಿ ಮಾರಾಟವಾಗಲಿದೆ. ಪ್ರಸ್ತುತ, ಕಂಪನಿಯು ಈ ಮೊಬೈಲ್ ಖರೀದಿ ಮೇಲೆ ಯಾವೆಲ್ಲಾ ಆಫರ್‌ಗಳಿವೆ ಎನ್ನುವುದನ್ನು ಬಹಿರಂಗಪಡಿಸಿಲ್ಲ.
ಗೂಗಲ್ ಪಿಕ್ಸೆಲ್ 9 ಪ್ರೊ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಗೂಗಲ್ ಪಿಕ್ಸೆಲ್ 9 ಪ್ರೊ ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ದರದೊಂದಿಗೆ 6.3 ಇಂಚಿನ LTPO ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು 1280 x 2856 ಪಿಕ್ಸೆಲ್ ರೆಸಲ್ಯೂಶನ್ ಮತ್ತು 3,000 ನಿಟ್‌ಗಳವರೆಗೆ ಗರಿಷ್ಠ ಬ್ರೈಟ್‌ನೆಸ್ ಹೊಂದಿದೆ. ಡಿಸ್ಪ್ಲೇಯ ಭದ್ರತೆಗಾಗಿ, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆ ನೀಡಲಾಗಿದೆ.
ಪ್ರೊಸೆಸರ್ ಸಾಮರ್ಥ್ಯ
ಗೂಗಲ್ ಪಿಕ್ಸೆಲ್ 9 ಪ್ರೊ ಮೊಬೈಲ್ ಗೂಗಲ್ ಟೆನ್ಸರ್ G4 ಪ್ರೊಸೆಸರ್‌ನೊಂದಿಗೆ ಕೆಲಸ ನಿರ್ವಹಿಸಲಿದೆ. ಇದು ಟೈಟಾನ್ M2 ಭದ್ರತಾ ಚಿಪ್‌ಸೆಟ್‌ನೊಂದಿಗೆ ಬರುತ್ತದೆ. ಈ ಫೋನ್ ಆಂಡ್ರಾಯ್ಡ್ 14 ನೊಂದಿಗೆ ಬರುತ್ತದೆ. ಇದು 16GB LPDDR5X RAM + 256GB UFS 3.1 ಆಂತರಿಕ ಸ್ಟೋರೇಜ್ ಒಳಗೊಂಡಿದೆ.
ಕ್ಯಾಮೆರಾ ಸೆಟಪ್
ಕಂಪನಿಯು ಗೂಗಲ್ ಪಿಕ್ಸೆಲ್ 9 ಪ್ರೊ ಫೋನನ್ನು ಟ್ರಿಪಲ್ ಕ್ಯಾಮೆರಾ ಸೆಟಪ್‌ನೊಂದಿಗೆ ಬಿಡುಗಡೆ ಮಾಡಿದೆ. ಇದು OIS ಜೊತೆಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹೊಂದಿದೆ. ಇದರೊಂದಿಗೆ, 48 ಮೆಗಾಪಿಕ್ಸೆಲ್ 5x ಟೆಲಿಫೋಟೋ ಕ್ಯಾಮೆರಾ ಮತ್ತು 48 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಕ್ಯಾಮೆರಾ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 42 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಸಾಮರ್ಥ್ಯ
ಗೂಗಲ್ ಪಿಕ್ಸೆಲ್ 9 ಪ್ರೊ ಮೊಬೈಲ್ 4,700mAh ಸಾಮರ್ಥ್ಯ ಬ್ಯಾಟರಿಯನ್ನು ಹೊಂದಿದೆ. ಇದನ್ನು ವೇಗವಾಗಿ ಚಾರ್ಜ್ ಮಾಡಲು, 27W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ. ಜೊತೆಗೆ, 21W ವೈರ್‌ಲೆಸ್ ಚಾರ್ಜಿಂಗ್ ಬೆಂಬಲ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ಗೂಗಲ್ ಪಿಕ್ಸೆಲ್ 9 ಪ್ರೊ ಫೋನ್ 152.8 x 72 x 8.5 ಎಂಎಂ ಅಳತೆ ಮತ್ತು 199 ಗ್ರಾಂ ತೂಕ ಹೊಂದಿದೆ. ಇದರಲ್ಲಿ ಅಲ್ಟ್ರಾಸಾನಿಕ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಇದೆ. IP68 ರೇಟಿಂಗ್ ಮತ್ತು ತಾಪಮಾನ ಸಂವೇದಕ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ, ಯುಎಸ್‌ಬಿ ಟೈಪ್ ಸಿ ಆಡಿಯೋ, ಸ್ಟೀರಿಯೋ ಸ್ಪೀಕರ್, 5G, 4G VoLTE, ವೈ-ಫೈ, ಬ್ಲೂಟೂತ್ 5.3 ಸೇರಿದಂತೆ ಮುಂತಾದ ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications








