2023ಕ್ಕೆ ಫೋಲ್ಡಬಲ್‌ ಸ್ಮಾರ್ಟ್‌ಫೋನ್‌ ಪರಿಚಯಿಸಲು ಗೂಗಲ್‌ ಪ್ಲಾನ್‌!

|

ಜಾಗತಿಕ ಮಾರುಕಟ್ಟೆಯಲ್ಲಿ ಫೋಲ್ಡಬಲ್‌ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಜನಪ್ರಿಯತೆಯಿದೆ. ಇದೇ ಕಾರಣಕ್ಕೆ ಪ್ರತಿಷ್ಠಿತ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳಾದ ಸ್ಯಾಮ್‌ಸಂಗ್‌, ಶಿಯೋಮಿ, ಮೊಟೊರೊಲಾ ಕಂಪೆನಿಗಳು ಫೋಲ್ಡಬಲ್‌ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿವೆ. ಸದ್ಯ ಇದೀಗ ಗೂಗಲ್‌ ತನ್ನ ಪಿಕ್ಸೆಲ್‌ ಸರಣಿಯಲ್ಲಿ ಹೊಸ ಫೋಲ್ಡ್‌ ಸ್ಮಾರ್ಟ್‌ಫೋನ್‌ ಅನ್ನು ಪರಿಚಯಿಸುವುದಕ್ಕೆ ಮುಂದಾಗಿದೆ. ಈ ಸ್ಮಾರ್ಟ್‌ಫೋನ್‌ 2023 ರ ವೇಳೆಗೆ ಜಾಗತಿಕ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ಎಂದು ವರದಿಯಾಗಿದೆ.

ಗೂಗಲ್‌

ಹೌದು, ಗೂಗಲ್‌ ತನ್ನ ಪಿಕ್ಸೆಲ್‌ ಸರಣಿಯಲ್ಲಿ ಫೋಲ್ಡ್‌ ಸ್ಮಾರ್ಟ್‌ಫೋನ್‌ ಪರಿಚಯಿಸುವುದಕ್ಕೆ ಸಿದ್ಧತೆ ನಡೆಸಿದೆ. 2023 ರ ವೇಳೆಗೆ ಈ ಸ್ಮಾರ್ಟ್‌ಫೋನ್‌ ಎಂಟ್ರಿ ನೀಡುವ ಸಾಧ್ಯತೆಯಿದೆ. 2023 ರ ಮೊದಲ ತ್ರೈಮಾಸಿಕದ ವೇಳೆಗೆ ಫೋಲ್ಡಬಲ್ ಪಿಕ್ಸೆಲ್ ಫೋನ್‌ ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಇನ್ನು ಈ ಫೋಲ್ಡ್‌ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ. ಹಾಗಾದ್ರೆ ಗೂಗಲ್‌ ಪಿಕ್ಸೆಲ್‌ ಫೋಲ್ಡ್‌ ಸ್ಮಾರ್ಟ್‌ಫೋನ್‌ನಲ್ಲಿ ಏನೆಲ್ಲಾ ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಸಪ್ಲೇ

ಡಿಸ್‌ಪ್ಲೇ ಸಪ್ಲೇ ಚೈನ್ ಕನ್ಸಲ್ಟೆಂಟ್ಸ್ (DSCC)ನ CEO ರಾಸ್ ಯಂಗ್ ಪ್ರಕಾರ ಗೂಗಲ್‌ ಪಿಕ್ಸೆಲ್ಸ್ ಫೋಲ್ಡ್‌ ಸ್ಮಾರ್ಟ್‌ಫೋನ್‌ 2023 ರ ಮೊದಲ ತ್ರೈಮಾಸಿಕದ ವೇಳೆಗೆ ಲಾಂಚ್‌ ಆಗಲಿದೆ ಎಂದು ಹೇಳಲಾಗಿದೆ. ಇನ್ನು ಈ ಫೋಲ್ಡಬಲ್ ಡಿವೈಸ್‌ 5.78-ಇಂಚಿನ ಔಟ್‌ಸೈಡ್‌ ಡಿಸ್‌ಪ್ಲೇ ಹೊಂದಿದ್ದು, ಅಲ್ಟ್ರಾ-ಥಿನ್‌ ಗ್ಲಾಸ್‌ ಕವರ್ ಮತ್ತು 7.57-ಇಂಚಿನ ಇನ್‌ಸೈಡ್‌ ಡಿಸ್‌ಪ್ಲೇಯನ್ನು ಹೊಂದಿರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಗೂಗಲ್‌

ಗೂಗಲ್‌ ಪಿಕ್ಸೆಲ್‌ ಫೋಲ್ಡಬಲ್‌ ಸ್ಮಾರ್ಟ್‌ಫೋನ್‌ IMX787 ಪ್ರೈಮೆರಿ ಸೆನ್ಸಾರ್‌ ಒಳಗೊಂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇದರ ಎರಡನೇ ಕ್ಯಾಮೆರಾ IMX386 ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ S5K3J1 ಟೆಲಿಫೋಟೋ ಲೆನ್ಸ್‌ ಹೊಂದಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಇದಲ್ಲದೆ ಸ್ಮಾರ್ಟ್‌ಫೋನಿನ ಔಟ್‌ಸೈಡ್‌ನಲ್ಲಿ S5k3J1 ಟೆಲಿಫೋಟೋ ಸೆಲ್ಫಿ ಕ್ಯಾಮೆರಾ ಹೊಂದಿರುವ ಸಾಧ್ಯತೆಯಿದೆ.

ಗೂಗಲ್‌

2022ರ ಪ್ರಾರಂಭದಲ್ಲಿ ಗೂಗಲ್‌ ಫೋಲ್ಡೆಬಲ್‌ ಸ್ಮಾರ್ಟ್‌ಫೋನ್‌ 'ಪಿಪಿಟ್' ಎಂಬ ಸಂಕೇತನಾಮದಲ್ಲಿ ಕಾಣಿಸಿಕೊಂಡಿತು. ಅಲ್ಲದೆ ಡೆವಲಪರ್ ಟೆನ್ಸರ್ ಚಿಪ್‌ಗಳನ್ನು ಈ ಮಾದರಿಯಲ್ಲಿ ಪ್ರಸ್ತುತಪಡಿಸಲಾಗುವುದು ಎಂದು ಹೇಳಿಕೊಂಡಿತ್ತು. ಆದರೆ ಇದೀಗ ಗೂಗಲ್ ಫೋಲ್ಡಬಲ್ ಸ್ಮಾರ್ಟ್‌ಫೋನ್‌ಗೆ ಪಿಕ್ಸೆಲ್ ಫೋಲ್ಡ್ ಅಥವಾ ಪಿಕ್ಸೆಲ್ ನೋಟ್‌ಪ್ಯಾಡ್ ಎಂದು ಹೆಸರಿಸಬಹುದೆಂದು ಅಂದಾಜಿಸಲಾಗಿದೆ.

ಗೂಗಲ್‌

ಇನ್ನು ಕಳೆದ ನಾಲ್ಕು ದಿನಗಳ ಹಿಂದೆ(ಅ.6) ಗೂಗಲ್‌ ಕಂಪೆನಿ ತನ್ನ ಬಹು ನಿರೀಕ್ಷಿತ ಪಿಕ್ಸೆಲ್‌ 7 ಸರಣಿ ಸ್ಮಾರ್ಟ್‌ಫೋನ್‌ಗಳನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸರಣಿಯಲ್ಲಿ ಗೂಗಲ್ ಪಿಕ್ಸೆಲ್ 7 ಮತ್ತು ಪಿಕ್ಸೆಲ್ 7 ಪ್ರೊ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಈ ಸರಣಿಯ ಎರಡು ಸ್ಮಾರ್ಟ್‌ಫೋನ್‌ಗಳು 10.8-ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP68 ರೇಟಿಂಗ್ ಅನ್ನು ಪಡೆದುಕೊಂಡಿವೆ.

ಕಾರ್ಯನಿರ್ವಹಿಸಲಿವೆ

ಈ ಎರಡು ಸ್ಮಾರ್ಟ್‌ಫೋನ್‌ಗಳು ಟೆನ್ಸಾರ್‌ G2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿವೆ. ಇದರಲ್ಲಿ ಗೂಗಲ್‌ ಪಿಕ್ಸೆಲ್ 7 ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಗೂಗಲ್‌ ಪಿಕ್ಸೆಲ್ 7 ಪ್ರೊ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌ ಸಿನಿಮ್ಯಾಟಿಕ್‌ ಬ್ಲರ್‌ ಫೀಚರ್ಸ್‌ ಅನ್ನು ಬೆಂಬಲಿಸಲಿದೆ. ಹಾಗೆಯೇ ಪಿಕ್ಸೆಲ್‌ 7 ಪ್ರೊ ಮ್ಯಾಕ್ರೋ ಫೋಕಸ್‌ ಫೀಚರ್ಸ್‌ ಅನ್ನು ಹೊಂದಿದೆ. ಇದರೊಂದಿಗೆ ಗೂಗಲ್‌ ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌ 4,335mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಆದರೆ ಗೂಗಲ್‌ ಪಿಕ್ಸೆಲ್‌ 7ಪ್ರೊ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

Best Mobiles in India

English summary
Google Pixel is expected to launch the Fold smartphone in 2023

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X