ಸದ್ಯ ಭಾರೀ ಡಿಸ್ಕೌಂಟ್‌ನಲ್ಲಿ ಸ್ಯಾಮ್‌ಸಂಗ್‌ನ ಈ ಫೋನ್ ಖರೀದಿಗೆ ಲಭ್ಯ!
ಸದ್ಯ ಇ ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಬಿಗ್ ಬಿಲಿಯನ್ ಡೇಸ್ ಮಾರಾಟ ಮೇಳವನ್ನು ಆಯೋಜಿಸಿದೆ. ಈ ಸೇಲ್‌ನಲ್ಲಿ ಆಪಲ್, ಸ್ಯಾಮ್‌ಸಂಗ್, ಒನ್‌ಪ್ಲಸ್, ಒಪ್ಪೋ, ಮೊಟೊ, ಶಿಯೋಮಿ, ವಿವೋ ಸೇರಿದಂತೆ ಇತರೆ ಪ್ರಮುಖ ಕಂಪನಿಗಳ ಮೊಬೈಲ್‌ಗಳು ಆಕರ್ಷಕ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A34 5G ಜಬರ್ದಸ್ತ್ ರಿಯಾಯತಿ ಪ್ರೈಸ್ ಪಡೆದಿದೆ.
ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A34 5G ಸ್ಮಾರ್ಟ್‌ಫೋನ್ ಶೇ. 24% ರಷ್ಟು ರಿಯಾಯಿತಿಯಲ್ಲಿ ಕಾಣಿಸಿಕೊಂಡಿದ್ದು, 8GB + 128GB ವೇರಿಯಂಟ್ ಬೆಲೆಯು 27,999ರೂ. ಆಗಿದೆ. ಆದರೆ ಗ್ರಾಹಕರು ಇತರೆ ಕೊಡುಗೆ ಸೇರಿ ಇದನ್ನು ಆಫರ್‌ನಲ್ಲಿ 27,999ರೂ. ಗಳಿಗೆ ಗ್ರಾಹಕರು ಖರೀದಿ ಮಾಡಬಹುದಾಗಿದೆ. ಇನ್ನು ಈ ಫೋನ್ ಲೈಮ್, ಗ್ರಾಫೈಟ್ ಹಾಗೂ ಸಿಲ್ವರ್ ಬಣ್ಣಗಳ ಆಯ್ಕೆ ಪಡೆದಿದೆ.

ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 1080 ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಬೆಂಬಲ ಪಡೆದುಕೊಂಡಿದೆ. ಈ ಫೋನ್ ತ್ರಿವಳಿ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಮೊದಲ ಕ್ಯಾಮೆರಾ 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A34 5G ಮೊಬೈಲ್‌ನ ಇತರ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಹೇಗಿದೆ ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ A34 5G ಮೊಬೈಲ್ 1080 × 2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಹೆಚ್‌ಡಿ ಪ್ಲಸ್ ಸೂಪರ್ ಅಮೊಲೆಡ್ ಡಿಸ್‌ಪ್ಲೇ ಅನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಹೊಂದಿದ್ದು, 1000 nits ಬ್ರೈಟ್ನೆಸ್ ಸಾಮರ್ಥ್ಯ ಸಹ ಹೊಂದಿದೆ. ಇನ್ನು ಸ್ಕ್ರೀನ್ ರಕ್ಷನೆಗಾಗಿ ಇದು ಗೊರಿಲ್ಲಾ ಗ್ಲಾಸ್ 5 ರಕ್ಷಣೆ ಪಡೆದಿದೆ.
ಯಾವ ಪ್ರೊಸೆಸರ್ ಲಭ್ಯ ಇದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A34 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 1080 6nm ಪ್ರೊಸೆಸರ್ ಅನ್ನು ಒಳಗೊಂಡಿದ್ದು, ಇದರ ಜೊತೆಗೆ ಮಾಲಿ-G68 MC4 GPU ಸಪೋರ್ಟ್ ಅನ್ನು ಪಡೆದಿದೆ. ಇದರೊಂದಿಗೆ ಇದು ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಪಡೆದಿದ್ದು, 8 GB + 128 GB ಮತ್ತು 8 GB + 256 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ.

ಕ್ಯಾಮೆರಾ ಸ್ಪೆಷಲ್ ಏನಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A34 5G ಮೊಬೈಲ್ ತ್ರಿವಳಿ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾವು 48 ಮೆಗಾಪಿಕ್ಸೆಲ್ ಸೆನ್ಸಾರ್ ಒಳಗೊಂಡಿದೆ. ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಹಾಗೂ ಮೂರನೇ ಕ್ಯಾಮೆರಾವು 5 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿವೆ. ಇನ್ನು ಸೆಲ್ಫಿ ಕ್ಯಾಮೆರಾವು 13 ಮೆಗಾ ಪಿಕ್ಸಲ್ ಸೆನ್ಸಾರ್ ನೀಡಲಾಗಿದೆ.
ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ ಎಷ್ಟು
ಸ್ಯಾಮ್‌ಸಂಗ್ ಗ್ಯಾಲಕ್ಸಿ A34 5G ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, 25W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಹೊಂದಿದೆ. ಯುಎಸ್‌ಬಿ ಟೈಪ್-ಸಿ ಆಡಿಯೊ, ಸ್ಟಿರಿಯೊ ಸ್ಪೀಕರ್‌ಗಳು, ಡಾಲ್ಬಿ ಅಟ್ಮಾಸ್ ಆಯ್ಕೆಗಳನ್ನು ಇದು ಹೊಂದಿದೆ. ಇದರ ಜೊತೆಗೆ ಧೂಳು ಮತ್ತು ನೀರು ನಿರೋಧಕ (IP67) ಸೌಲಭ್ಯ ಪಡೆದಿದ್ದು, ಬ್ಲೂಟೂತ್ 5.2, ಎನ್‌ಎಫ್‌ಸಿ ಆಯ್ಕೆಗಳ ಸೌಲಭ್ಯ ಸಹ ಇವೆ.


Click it and Unblock the Notifications








