ಮೊಟೊರೊಲಾ ಎಡ್ಜ್ 30 ಫ್ಯೂಷನ್ ಫೋನಿಗೆ ಆಕರ್ಷಕ ಡಿಸ್ಕೌಂಟ್!..ಗ್ರಾಹಕರಿಗೆ ಖುಷಿ!
ಜನಪ್ರಿಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್ ಹಬ್ಬದ ಪ್ರಯುಕ್ತ ವಿಶೇಷ ಸೇಲ್ ಮೇಳವನ್ನು ಆಯೋಜಿಸಿ ಗ್ರಾಹಕರ ಗಮನ ಸೆಳೆದದೆ. ಈ ಸೇಲ್‌ನಲ್ಲಿ ಕೆಲವು ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ ತಿಳಿಸಿದ್ದು, ಆ ಪೈಕಿ ಮೊಟೊರೊಲಾ ಕಂಪನಿಯ ಮೊಟೊರೊಲಾ ಎಡ್ಜ್ 30 ಫ್ಯೂಷನ್ ಫೋನ್ ಬಿಗ್ ಡಿಸ್ಕೌಂಟ್ ದರದಲ್ಲಿ ಖರೀದಿಗೆ ಲಭ್ಯ ಇದೆ.
ಹೌದು, ಫ್ಲಿಪ್‌ಕಾರ್ಟ್ ತಾಣದ ಸೇಲ್‌ನಲ್ಲಿ ಮೊಟೊರೊಲಾ ಎಡ್ಜ್ 30 ಫ್ಯೂಷನ್ ಮೊಬೈಲ್ ಶೇ. 30% ರಷ್ಟು ರಿಯಾಯಿತಿ ಹೊಂದಿದೆ. ಹೀಗಾಗಿ ಈ ಫೋನಿನ 8 GB RAM + 128 GB ಸ್ಟೋರೇಜ್ ವೇರಿಯಂಟ್ 34,999ರೂ. ಗಳಿಗೆ ಖರೀದಿ ಮಾಡಬಹುದು. ಅಂದಹಾಗೆ ಈ ಫೋನಿಗೆ ಲಭ್ಯ ಇತರೆ ಎಲ್ಲ ಆಫರ್ ಸೇರಿದರೆ ಈ ಫೋನ್ 29,999ರೂ. ಗಳಿಗೆ ಖರೀದಿ ಮಾಡುವ ಚಾನ್ಸ ಕೂಡಾ ಲಭ್ಯ ಇದೆ.

ಮೊಟೊ ಸಂಸ್ಥೆಯ ಈ ಪ್ರೀಮಿಯಂ ಫೋನ್ ಸ್ನ್ಯಾಪ್‌ಡ್ರಾಗನ್ 888+ SoC ಪ್ರೊಸೆಸರ್ ವೇಗದಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು pOLED ಡಿಸ್‌ಪ್ಲೇ ರಚನೆ ಹೊಂದಿದ್ದು, 50 ಮೆಗಾ ಪಿಕ್ಸೆಲ್ ಸೆನ್ಸಾರ್ ಪ್ರಾಥಮಿಕ ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಹಾಗಾದರೆ ಮೊಟೊರೊಲಾ ಎಡ್ಜ್ 30 ಫ್ಯೂಷನ್ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸೈನ್ ಹಾಗೂ ಡಿಸ್‌ಪ್ಲೇ ರಚನೆ
ಮೊಟೊರೊಲಾ ಎಡ್ಜ್ 30 ಫ್ಯೂಷನ್ ಮೊಬೈಲ್ 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ pOLED ಡಿಸ್‌ಪ್ಲೇ ಪಡೆದಿದ್ದು, ಜೊತೆಗೆ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ ಈ ಡಿಸ್‌ಪ್ಲೇ ಮತ್ತು 120Hz ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಇದರೊಂದಿಗೆ 1,100 ನಿಟ್ಸ್ ಬ್ರೈಟ್ನೆಸ್ ಸಾಮರ್ಥ್ಯವನ್ನು ಪಡೆದಿದ್ದು, 144Hz ರೀಫ್ರೇಶ್ ರೇಟ್ ಅನ್ನು ಒಳಗೊಂಡಿದೆ.

ವೇಗದ ಪ್ರೊಸೆಸರ್ ಪವರ್
ಮೊಟೊರೊಲಾ ಸಂಸ್ಥೆಯ ಈ ಮೊಬೈಲ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 888+ SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು, ಹಾಗೆಯೇ 8GB RAM ಮತ್ತು 128GB ಆಂತರೀಕ ಸ್ಟೋರೇಜ್ ಪಡೆದುಕೊಂಡಿದೆ. ಇದಕ್ಕೆ ಅನುಗುಣವಾಗಿ ಈ ಫೋನ್ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್‌ನೊಂದಿಗೆ ಕೆಲಸ ನಿರ್ವಹಿಸಲಿದೆ.

ತ್ರಿವಳಿ ಕ್ಯಾಮೆರಾ ರಚನೆ
ಮೊಟೊರೊಲಾ ಎಡ್ಜ್ 30 ಫ್ಯೂಷನ್ ಫೋನ್ ಮೂರು ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇನ್ನು ದ್ವಿತೀಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಅನ್ನು ಪಡೆದಿದ್ದು, ಇದರೊಂದಿಗೆ ಮೈಕ್ರೋ ವಿಷನ್ ಕ್ಯಾಮೆರಾ ಆಯ್ಕೆ ಇದೆ. 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.
ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಮೊಟೊರೊಲಾ ಎಡ್ಜ್ 30 ಫ್ಯೂಷನ್ ಸ್ಮಾರ್ಟ್‌ಫೋನ್ 33W ಟರ್ಬೊ ಚಾರ್ಜಿಂಗ್ ಸಪೋರ್ಟ್ 4,400mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 68W ಟರ್ಬೋ ಚಾರ್ಜಿಂಗ್ ಸೌಲಭ್ಯ ಸಹ ಲಭ್ಯ. ಜೊತೆಗೆ ಈ ಫೋನ್ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಅನ್ನು ಬೆಂಬಲಿಸಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಆಕ್ಸಿಲೆರೋಮೀಟರ್, ಗ್ರ್ಯಾವಿಟಿ ಸೆನ್ಸಾರ್ ನಂತಹ ಆಯ್ಕೆಗಳು ಕೂಡಾ ಇವೆ.
ಮೆಮೊರಿ ಮತ್ತು ಕಲರ್ ಆಯ್ಕೆ
ಮೊಟೊರೊಲಾ ಎಡ್ಜ್ 30 ಫ್ಯೂಷನ್ ಫೋನ್ 8GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದುಕೊಂಡಿದೆ. ಇನ್ನು ಈ ಮೊಬೈಲ್ ಫೋನ್ ಕಾಸ್ಮಿಕ್ ಗ್ರೇ ಮತ್ತು ಸೋಲಾರ್ ಗೋಲ್ಡ್ ಬಣ್ಣದ ಆಯ್ಕೆಗಳಲ್ಲಿ ಖರೀದಿ ಮಾಡಬಹುದಾಗಿದೆ.


Click it and Unblock the Notifications








